Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:49 - ಕನ್ನಡ ಸತ್ಯವೇದವು C.L. Bible (BSI)

49 ಎಂತಲೆ, ಅನ್ಯಜನಗಳ ಮಧ್ಯೆ ನಿನ್ನ ಸ್ತುತಿಪೆನು I ನಿನ್ನ ನಾಮವನು ಸರ್ವೇಶ್ವರಾ, ಸಂಕೀರ್ತಿಪೆನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

49 ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

49 ಈ ಕಾರಣದಿಂದ ಯೆಹೋವನೇ, ಅನ್ಯಜನಗಳ ಮಧ್ಯದಲ್ಲಿ ನಿನ್ನನ್ನು ಸ್ತುತಿಸುವೆನು; ನಿನ್ನ ನಾಮವನ್ನು ಸಂಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

49 ಯೆಹೋವನೇ, ಈ ಕಾರಣದಿಂದ ನಾನು ನಿನ್ನನ್ನು ಜನಾಂಗಗಳ ಮಧ್ಯದಲ್ಲಿ ಸ್ತುತಿಸುವೆನು; ನಿನ್ನ ಹೆಸರನ್ನು ಕುರಿತು ಹಾಡುಗಳನ್ನು ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

49 ಆದ್ದರಿಂದ ಯೆಹೋವ ದೇವರೇ, ನಾನು ಜನಾಂಗಗಳಲ್ಲಿ ನಿಮ್ಮನ್ನು ಕೊಂಡಾಡುವೆನು, ನಿಮ್ಮನ್ನು ಕೊಂಡಾಡಿ ನಿಮ್ಮ ಹೆಸರನ್ನು ಕೀರ್ತಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:49
11 ತಿಳಿವುಗಳ ಹೋಲಿಕೆ  

ಮತ್ತು ದೇವರು ತೋರಿದ ಕರುಣೆಗಾಗಿ ಅವರನ್ನು ಯೆಹೂದ್ಯರಲ್ಲದವರು ಸಹ ಸ್ತುತಿಸಲು ಸಾಧ್ಯವಾಗುವಂತೆ ಕ್ರಿಸ್ತಯೇಸು ಯೆಹೂದ್ಯರಿಗೆ ಅಧೀನರಾದರು. ಇದಕ್ಕೆ ಸಾದೃಶ್ಯವಾಗಿ ಪವಿತ್ರಗ್ರಂಥದಲ್ಲಿ ಹೀಗೆಂದು ಹೇಳಲಾಗಿದೆ: “ಈ ಕಾರಣದಿಂದ ನಾನು ಯೆಹೂದ್ಯರಲ್ಲದವರ ನಡುವೆ ನಿಮ್ಮನ್ನು ಕೊಂಡಾಡುವೆನು ನಿಮ್ಮ ನಾಮವನು ಸಂಕೀರ್ತಿಸುವೆನು.”


ಸಕಲ ಸೃಷ್ಟಿಗೂ ಜೀವದಾತರಾದ ದೇವರ ಸನ್ನಿಧಿಯಲ್ಲಿ ಪೊಂತಿಯ ಪಿಲಾತನ ಮುಂದೆ ಸೂಕ್ತ ಸಾಕ್ಷಿ ನೀಡಿದ ಪ್ರಭು ಯೇಸುವಿನ ಸನ್ನಿಧಿಯಲ್ಲಿ ನಾನು ಆಜ್ಞಾಪಿಸುವುದೇನೆಂದರೆ:


ಬಳಿಕ ಅವರೆಲ್ಲರು ಕೀರ್ತನೆ ಹಾಡಿ, ಓಲಿವ್ ಗುಡ್ಡಕ್ಕೆ ಹೊರಟರು.


ನಿನ್ನ ಗುಣಗಾನ ಮಾಳ್ಪರು ಪ್ರಭು, ಭೂರಾಜರೆಲ್ಲರು I ಏಕೆನೆ, ನೀ ಉಸುರಿದ ನುಡಿಗಳನು ಕೇಳ್ವರವರೆಲ್ಲರು II


ನಿನ್ನ ಸ್ತುತಿಸುವೆನು ಪ್ರಭು, ಜನಾಂಗಗಳ ಮುಂದೆ I ಸಂಕೀರ್ತಿಸುವೆನು ನಿನ್ನನು ರಾಷ್ಟ್ರಗಳ ಮಧ್ಯೆ II


ಸ್ಥಿರವಿದೆ ದೇವಾ, ಸುಸ್ಥಿರವಿದೆ ನನ್ನ ಮನ I ಹಾಡುತ ಪಾಡುತ ರಚಿಸುವೆನಿದೋ ಕವನ II


ಎಂದೇ ಮೌನವಿರದೆ ಎನ್ನ ಮನವು ನಿನಗೆ ಹಾಡಲಿ ಕೀರ್ತನೆ I ಹೇ ಪ್ರಭು, ಎನ್ನ ದೇವ, ನಿನಗೆನ್ನ ಅನಂತ ಧನ್ಯ ವಂದನೆ II


ಬರಲಿ ಇಸ್ರಯೇಲಿಗೆ ಜೀವೋದ್ಧಾರ ಸಿಯೋನಿನಿಂದ I ತರಲಿ ಪ್ರಭು ತನ್ನ ಪ್ರಜೆಗೆ ಮರಳಿ ಸಿರಿಸಂಪತ್ತ I ಸಿಗಲಿ ಯಕೋಬ - ಇಸ್ರಯೇಲ ಜನತೆಗೆ ಹರ್ಷಾನಂದ II


ನಿನ್ನ ಸ್ತುತಿಸುವೆನು ಪ್ರಭು ಜನಾಂಗಗಳ ಮುಂದೆ I ಸಂಕೀರ್ತಿಸುವೆನು ನಿನ್ನನು ರಾಷ್ಟ್ರಗಳ ಮಧ್ಯೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು