ಕೀರ್ತನೆಗಳು 18:50 - ಕನ್ನಡ ಸತ್ಯವೇದವು C.L. Bible (BSI)50 ತಾನೇ ನೇಮಿಸಿದ ಅರಸನಿಗೆ I ಆತನೀವನು ವಿಶೇಷ ರಕ್ಷಣೆ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಆತನು ತಾನು ನೇಮಿಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಮತ್ತು ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)50 ಆತನು ತಾನು ನೇವಿುಸಿದ ಅರಸನಿಗೋಸ್ಕರ ವಿಶೇಷ ರಕ್ಷಣೆಯನ್ನು ದಯಪಾಲಿಸುವವನಾಗಿದ್ದಾನೆ; ತಾನು ಅಭಿಷೇಕಿಸಿದ ದಾವೀದನಿಗೂ ಅವನ ಸಂತತಿಯವರಿಗೂ ಸದಾಕಾಲ ಕೃಪೆಯನ್ನು ಅನುಗ್ರಹಿಸುವವನಾಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ಆತನು ತಾನು ನೇಮಿಸಿದ ರಾಜನಿಗೆ ಅನೇಕ ಯುದ್ಧಗಳಲ್ಲಿ ಜಯವನ್ನು ದಯಪಾಲಿಸುವನು; ತಾನು ಅಭಿಷೇಕಿಸಿದ ರಾಜನಿಗೆ ಶಾಶ್ವತವಾದ ಪ್ರೀತಿಯನ್ನು ತೋರುವನು. ಆತನು ದಾವೀದನಿಗೂ ಅವನ ಸಂತತಿಯವರಿಗೂ ಎಂದೆಂದಿಗೂ ನಂಬಿಗಸ್ತನಾಗಿರುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ದೇವರು ತಮ್ಮ ಅರಸನಿಗೆ ವಿಶೇಷ ರಕ್ಷಣೆಯನ್ನು ಕೊಡುವರು; ತಮ್ಮ ಅಭಿಷಿಕ್ತನಿಗೂ ದಾವೀದನಿಗೂ ಅವನ ಸಂತತಿಯವರಿಗೂ ಒಡಂಬಡಿಕೆಯ ಪ್ರೀತಿಯನ್ನು ಯುಗಯುಗಕ್ಕೂ ಅನುಗ್ರಹಿಸುವರು. ಅಧ್ಯಾಯವನ್ನು ನೋಡಿ |
ಸರ್ವೇಶ್ವರಸ್ವಾಮಿ ಸಮುವೇಲನಿಗೆ, “ನಾನು ಸೌಲನನ್ನು ಇಸ್ರಯೇಲರ ಅರಸನಾಗಿರುವುದಕ್ಕೆ ಅಯೋಗ್ಯನೆಂದು ತಳ್ಳಿಬಿಟ್ಟೆನಲ್ಲವೆ? ನೀನು ಅವನಿಗಾಗಿ ಎಷ್ಟರವರೆಗೆ ದುಃಖಿಸುತ್ತಿರುವೆ? ಕೊಂಬನ್ನು ಎಣ್ಣೆಯಿಂದ ತುಂಬಿಸಿಕೊಂಡು ಬಾ; ನಾನು ನಿನ್ನನ್ನು ಬೆತ್ಲೆಹೇಮಿನವನಾದ ಜೆಸ್ಸೆಯನ ಬಳಿಗೆ ಕಳುಹಿಸುತ್ತೇನೆ. ಅವನ ಮಕ್ಕಳಲ್ಲೊಬ್ಬನನ್ನು ಅರಸನನ್ನಾಗಿ ಆರಿಸಿಕೊಂಡಿದ್ದೇನೆ,” ಎಂದು ಹೇಳಿದರು.