Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:6 - ಕನ್ನಡ ಸತ್ಯವೇದವು C.L. Bible (BSI)

6 ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ಪ್ರಭುವಿಗೆ I ಪ್ರಾರ್ಥನೆ ಮಾಡಿದೆ ಆ ನನ್ನ ದೇವನಲಿ I ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನಿಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅಂಥ ಕಷ್ಟದಲ್ಲಿ ನಾನು ಯೆಹೋವನಿಗೆ ಮೊರೆಯಿಟ್ಟೆನು; ನನ್ನ ದೇವರನ್ನು ಪ್ರಾರ್ಥಿಸಿದೆನು. ಆತನು ತನ್ನ ಮಂದಿರದಲ್ಲಿ ನನ್ನ ಶಬ್ದವನ್ನು ಕೇಳಿದನು; ನನ್ನ ಕೂಗು ಆತನ ಸನ್ನಿಧಿಗೆ ಸೇರಿ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ನಾನು ಸಹಾಯಕ್ಕಾಗಿ ಯೆಹೋವನನ್ನು ಕೂಗಿಕೊಂಡೆನು; ನನ್ನ ದೇವರಿಗೆ ಮೊರೆಯಿಟ್ಟೆನು. ಆತನು ತನ್ನ ಆಲಯದಲ್ಲಿ ನನ್ನ ಸ್ವರವನ್ನು ಕೇಳಿದನು; ನನ್ನ ಮೊರೆಗೆ ಕಿವಿಗೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ನನ್ನ ಇಕ್ಕಟ್ಟಿನಲ್ಲಿ ಯೆಹೋವ ದೇವರನ್ನು ಬೇಡಿದೆನು; ನನ್ನ ದೇವರಿಗೆ ಮೊರೆಯಿಟ್ಟೆನು; ಅವರು ತಮ್ಮ ಮಂದಿರದೊಳಗಿಂದ ನನ್ನ ಧ್ವನಿಯನ್ನು ಕೇಳಿದರು; ನನ್ನ ಮೊರೆಯು ಅವರ ಸನ್ನಿಧಿ ಸೇರಿ ಅವರ ಕಿವಿಗೆ ಬಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:6
17 ತಿಳಿವುಗಳ ಹೋಲಿಕೆ  

ಕಷ್ಟದಲಿ ಮೊರೆಯಿಡೆ, ನೆರವಾಗುವೆ I ಆಗ ನೀ ನನ್ನನು ಕೊಂಡಾಡುವೆ II


ಇಂಥಾ ದುಸ್ಥಿತಿಯಲಿ ನಾ ಮೊರೆಯಿಟ್ಟೆ ದೇವನಿಗೆ ಪ್ರಾರ್ಥನೆ ಮಾಡಿದೆ ಆ ಸರ್ವೇಶ್ವರನಿಗೆ. ನನ್ನ ಕೂಗು ಕೇಳಿಸಿತು ಆತನ ಮಂದಿರದಲಿ ನನ್ನ ಪ್ರಾರ್ಥನೆ ಬಿದ್ದಿತು ಆತನ ಕಿವಿಯಲಿ.


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ಸಂಕಟದಲಿ ಮೊರೆಯಿಟ್ಟೆನು ಪ್ರಭುವಿಗೆ I ಕೊಟ್ಟನು ಸದುತ್ತರವನು ಆತನೆನಗೆ II


ಪೇತ್ರನನ್ನು ಹೀಗೆ ಸೆರೆಯಲ್ಲಿಟ್ಟಿದ್ದಾಗ, ಸಭೆಯು ಅವನಿಗಾಗಿ ಶ್ರದ್ಧೆಯಿಂದ ದೇವರಿಗೆ ಪ್ರಾರ್ಥನೆಮಾಡುತ್ತಿತ್ತು.


ಯಾಜಕರು ಆಗಿದ್ದ ಲೇವಿಯರು ಆಮೇಲೆ ಎದ್ದು ನಿಂತು ಜನರನ್ನು ಆಶೀರ್ವದಿಸಿದರು. ಅವರ ಸ್ವರ ದೇವರಿಗೆ ಕೇಳಿಸಿತು; ಅವರ ಪ್ರಾರ್ಥನೆ ಪರಲೋಕದಲ್ಲಿರುವ ಆ ದೇವರ ಪರಿಶುದ್ಧ ನಿವಾಸಕ್ಕೆ ಮುಟ್ಟಿತು.


ಹೀಗೆ ಬಹಳ ದಿನಗಳು ಕಳೆದ ಮೇಲೆ ಈಜಿಪ್ಟ್ ದೇಶದ ಅರಸನು ಕಾಲವಾದನು. ಇಸ್ರಯೇಲರು ತಾವು ಮಾಡಬೇಕಾಗಿದ್ದ ಬಿಟ್ಟೀ ಕೆಲಸಕ್ಕಾಗಿ ನಿಟ್ಟುಸಿರು ಬಿಟ್ಟು ಗೋಳಾಡುತ್ತಿದ್ದರು. ಆ ಗೋಳು ದೇವರಿಗೆ ಮುಟ್ಟಿತು.


ಸರ್ವೇಶ್ವರ ಪ್ರಸನ್ನನಾಗಿಹನು ಪವಿತ್ರಾಲಯದಲ್ಲಿ; ಜಗವೆಲ್ಲ ಮೌನತಾಳಲಿ ಆತನ ಸನ್ನಿಧಿಯಲ್ಲಿ.


ಪ್ರಭು ಪ್ರಸನ್ನವಿರುವನು ಪವಿತ್ರಾಲಯದಲಿ I ಸ್ಥಾಪಿಸಿಹನು ಸಿಂಹಾಸನವನು ಪರದಲಿ I ನರಮಾನವರನು ನೋಡುತಿಹನು ನೇತ್ರಗಳಲಿ I ಪರೀಕ್ಷಿಸುತಿಹನು ಅವರನು ಸೂಕ್ಷ್ಮರೀತಿಯಲಿ II


ನಿನ್ನ ಮಂದಿರಕೆ ಬರುವೆ ನಿನ್ನಪಾರ ಪ್ರೀತಿಯ ನಿಮಿತ್ತ I ಭಕುತಿಯಿಂದ ಅಡ್ಡಬೀಳುವೆ ನಿನ್ನ ಪವಿತ್ರಾಲಯದತ್ತ II


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ಅನಂತರ, “ಅಪ್ಪಾ, ಪಿತನೇ, ನಿಮಗೆ ಎಲ್ಲವೂ ಸಾಧ್ಯ. ಈ ಕಷ್ಟದ ಕೊಡವನ್ನು ನನ್ನಿಂದ ತೆಗೆದುಬಿಡಿ. ಆದರೂ ನನ್ನ ಚಿತ್ತದಂತೆ ಅಲ್ಲ, ನಿಮ್ಮ ಚಿತ್ತವಿದ್ದಂತೆಯೇ ಆಗಲಿ,” ಎಂದರು.


ನಡುಗುತ್ತಿರುವೆ ಭಯದಿಂದ I ಕುಸಿಯುತ್ತಿರುವೆ ದಿಗಿಲಿನಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು