Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:7 - ಕನ್ನಡ ಸತ್ಯವೇದವು C.L. Bible (BSI)

7 ಆಗ ಕಂಪಿಸಿತು ಭೂಮಿ ಗಡಗಡನೆ I ಕದಲಿದವು ಬೆಟ್ಟದ ಬುಡಗಳು ಮಿಲಮಿಲನೆ I ಏಕೆನೆ, ಸಿಟ್ಟೇರಿತ್ತು ಆತನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಆಗ ಆತನಿಗೆ ಸಿಟ್ಟೇರಿದ್ದರಿಂದ, ಭೂಮಿಯು ಗಡಗಡನೆ ಕಂಪಿಸಿತು, ಪರ್ವತಗಳ ಬುಡಗಳು ನಡುಗಿ ಕದಲಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಆಗ ಆತನಿಗೆ ಸಿಟ್ಟೇರಿದ್ದರಿಂದ ಭೂವಿುಯು ಗಡಗಡನೆ ಕಂಪಿಸಿತು; ಪರ್ವತಗಳ ಬುಡಗಳು ನಡುಗಿ ಕದಲಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಆಗ ಆತನಿಗೆ ಸಿಟ್ಟೇರಿದ್ದರಿಂದ ಭೂಮಿಯು ಗಡಗಡನೆ ನಡುಗಿತು; ಪರ್ವತಗಳ ಬುನಾದಿಗಳು ಕಂಪಿಸಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು ಬೇಸರಗೊಂಡಿದ್ದರಿಂದ ಭೂಮಿಯು ನಡುಗಿ ಕದಲಿದವು; ಪರ್ವತಗಳ ಅಸ್ತಿವಾರಗಳು ಸಹ ಕದಲಿದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:7
18 ತಿಳಿವುಗಳ ಹೋಲಿಕೆ  

ಹೀಗೆ ಪ್ರಾರ್ಥನೆಮಾಡಿದಾಗ ಅವರು ನೆರೆದಿದ್ದ ಸ್ಥಳ ಕಂಪಿಸಿತು. ಅವರೆಲ್ಲರೂ ಪವಿತ್ರಾತ್ಮಭರಿತರಾದರು; ದೇವರ ಶುಭಸಂದೇಶವನ್ನು ಧೈರ್ಯವಾಗಿ ಸಾರತೊಡಗಿದರು.


ಇದ್ದಕ್ಕಿದ್ದಂತೆ ಭೂಮಿ ಗಡಗಡನೆ ನಡುಗಿತು. ಆಗ ದೇವದೂತನು ಸ್ವರ್ಗದಿಂದ ಇಳಿದುಬಂದನು. ಸಮಾಧಿಯ ಕಲ್ಲನ್ನು ಹಿಂದಕ್ಕೆ ಉರುಳಿಸಿ ಅದರ ಮೇಲೆ ಕುಳಿತುಕೊಂಡನು.


ಬೆಟ್ಟಗಳನ್ನು ನೋಡಿದೆ, ಅವು ನಡುನಡುಗುತ್ತಿದ್ದವು. ಗುಡ್ಡ ದಿಣ್ಣೆಗಳೂ ಅಲ್ಲೋಲಕಲ್ಲೋಲವಾಗಿದ್ದವು.


ಎದೋಮ್ಯರ ಪ್ರಾಂತ್ಯದಿಂದ, ಸೇಯೀರ ಗುಡ್ಡದಿಂದ ಹೇ ಸರ್ವೇಶ್ವರಾ, ನೀ ಹೊರಟು ಬರುವಾಗ ಕಂಪಿಸಿತು ಭೂಮಿ, ಹನಿಗರೆಯಿತು ಆಗಸ ಮಳೆಸುರಿಸಿತು ಮೇಘಮಂಡಲ.


‘ಉರಿದೇಳುತ್ತಿದೆ ಕೆಳಲೋಕದ ತನಕ ಎನ್ನ ಕೋಪಾಗ್ನಿ ದಹಿಸಿಬಿಡುವುದದು ಭೂಮಿಯನು ಬೆಳೆಸಹಿತವಾಗಿ ಭಸ್ಮಮಾಡುವುದದು ಬೆಟ್ಟಗಳನು ಬುಡಸಮೇತವಾಗಿ.


ಪ್ರವಾದನೆಯ ವರವೆನಗಿರಬಹುದು ಇರಬಹುದು ನಿಗೂಢ ರಹಸ್ಯಗಳರಿವು ಎಲ್ಲದರ ಪರಿಜ್ಞಾನ, ಪರ್ವತವನೇ ಕದಲಿಪ ವಿಶ್ವಾಸ ಪ್ರೀತಿಯೊಂದಿಲ್ಲದಿರೆ ನಾ ಶೂನ್ಯಸಮಾನ.


ಅವರ ಪಾದಗಳು ಜೆರುಸಲೇಮಿಗೆ ಪೂರ್ವಕ್ಕಿರುವ ಓಲಿವ್ ಗುಡ್ಡದ ಮೇಲೆ ನಿಲ್ಲುವುದು. ಆ ಗುಡ್ಡವು ಇಬ್ಭಾಗವಾಗಿ ಪೂರ್ವಪಶ್ಚಿಮದ ಉದ್ದಕ್ಕೂ ಇನ್ನರ್ಧ ಭಾಗವು ದಕ್ಷಿಣಕ್ಕೂ ಸರಿದುಕೊಳ್ಳುವುದು.


ನಿನ್ನ ನೋಡಿ ತಳಮಳಗೊಳ್ಳುತ್ತವೆ ಬೆಟ್ಟಗಳು ಹರಿಯುತ್ತವೆ ಆಗಸದಿಂದ ಪ್ರವಾಹಗಳು ಕೈಯೆತ್ತಿ ಭೋರ್ಗರೆಯುತ್ತವೆ ಸಾಗರಗಳು.


ಕಂಪಿಸುತ್ತದೆ ಭೂಮಿ ಆತ ನಿಂತಾಗ ಅದರುತ್ತದೆ ಲೋಕ ಆತ ದಿಟ್ಟಿಸಿದಾಗ ಸೀಳಿಹೋಗುತ್ತವೆ ಪುರಾತನಪರ್ವತಗಳು ಕುಸಿದುಬೀಳುತ್ತವೆ ಸನಾತನ ಗಿರಿಗಳು ಅನಾದಿಯಿಂದ ಹಾಗೆಯೆ ಆತನ ಆಗಮನಗಳು.


ಕಡಲಲ್ಲಿ ಗುಡ್ಡಗಳು ಮುಳುಗಿದರೂ ದಿಗಿಲಿಲ್ಲ I ಪೊಡವಿ ಕಂಪಿಸಿದರು ನಮಗೇನು ಭಯವಿಲ್ಲ II


ದುರ್ಜನರಿಗಾದರೋ ಪ್ರಭು ವಿಮುಖನು I ಅವರ ಹೆಸರನು ಧರೆಯಿಂದ ಅಳಿಸುವನು II


ಸನಿಹದಲ್ಲಿಹನು ಪ್ರಭು ಭಗ್ನ ಹೃದಯಿಗಳಿಗೆ I ಉದ್ಧಾರಕನಾತನು ಮನಸ್ಸು ಕುಗ್ಗಿದವರಿಗೆ II


ನಾ ಕಾಲವಾಗಿ ಕಣ್ಮರೆಯಾಗುವೆ ಇಲ್ಲಿಂದ I ಆ ಮುನ್ನ ಹೊರಳಿಸು ಕೋಪದೃಷ್ಟಿಯನು ನನ್ನಿಂದ I ನಾ ಬಾಳುವಂತೆ ಮಾಡು ಪ್ರಭು, ಸಂತಸದಿಂದ II


ಮೇಲೆತ್ತಿದನು ವಿನಾಶದ ಕೆಸರಿಂದ, ಕರಾಳ ಕೂಪದಿಂದ I ಗೋರ್ಕಲ್ಲ ಮೇಲಿರಿಸಿ ಹೆಜ್ಜೆಯಿಡಿಸಿದನು ಅತಿ ಧೈರ್ಯದಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು