Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:8 - ಕನ್ನಡ ಸತ್ಯವೇದವು C.L. Bible (BSI)

8 ಹೊರಬಂದಿತು ಹೊಗೆ ಆತನ ಮೂಗಿಂದ I ಹೊರಟಿತು ಅಗ್ನಿಜ್ವಾಲೆ ಆತನ ಬಾಯಿಂದ I ಕಾದುಕೆಂಡವಾಗಿಸಿತದು ಎದುರಿಗೆ ಸಿಕ್ಕಿದ್ದನೆಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಆತನ ಮೂಗಿನಿಂದ ಹೊಗೆಯು ಎದ್ದು; ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು, ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಆತನ ಮೂಗಿನಿಂದ ಹೊಗೆಯು ಬಂತು; ಆತನ ಬಾಯಿಂದ ಅಗ್ನಿಜ್ವಾಲೆ ಹೊರಟು ಸಿಕ್ಕಿದ್ದೆಲ್ಲವನ್ನು ದಹಿಸಿ ಕೆಂಡವನ್ನಾಗಿ ಮಾಡಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಆತನ ಮೂಗಿನಿಂದ ಹೊಗೆಯು ಬಂದಿತು; ಆತನ ಬಾಯಿಂದ ಅಗ್ನಿಜ್ವಾಲೆಯೂ ಬೆಂಕಿಯ ಕಿಡಿಗಳೂ ಬಂದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಮೂಗಿನಿಂದ ಹೊಗೆ ಬಂದಂತೆಯೂ ಬಾಯಿಯೊಳಗಿಂದ ದಹಿಸುವ ಅಗ್ನಿ ಹೊರಟಂತೆಯೂ; ಕೆಂಡಗಳು ಅದರಿಂದ ಜ್ವಾಲಿಸಿದಂತೆಯೂ ಇರಲು,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:8
18 ತಿಳಿವುಗಳ ಹೋಲಿಕೆ  

ಅಗ್ನಿಕುಂಡವಾಗುವರವರು ನೀ ಪ್ರತ್ಯಕ್ಷನಾದಾಗ I ಕಬಳಿಸುವುದು ಕೋಪಾಗ್ನಿ, ಭಸ್ಮವಾಗ್ವರು ಪ್ರಭು ಬಂದಾಗ II


ಅಗ್ನಿಗಂಧಕಗಳನು ದುರುಳರ ಮೇಲೆ ಮಳೆಗರೆಯಲಿ I ಉರಿಗಾಳಿಯೆ ಅವರ ಪಾಲಿನ ಧೂಮಪಾನವಾಗಲಿ II


“ಒಮ್ಮೆ ಸೊದೋಮ್ ಮತ್ತು ಗೊಮೋರಾ ಪಟ್ಟಣಗಳನ್ನು ಕೆಡವಿದಂತೆ ನಾನು ನಿಮ್ಮ ಪಟ್ಟಣಪಾಳೆಯಗಳನ್ನು ಕೆಡವಿದೆನು, ಉರಿಯುವ ಬೆಂಕಿಯಿಂದ ಎಳೆದ ಕೊಳ್ಳಿಯಂತೆ ನೀವು ಇದ್ದೀರಿ. ಆದರೂ ನೀವು ನನ್ನ ಬಳಿಗೆ ಹಿಂದಿರುಗಲಿಲ್ಲ,” ಎನ್ನುತ್ತಾರೆ ಸರ್ವೇಶ್ವರ.


ಆ ಸಿಂಹಾಸನದ ಸಮ್ಮುಖದಿಂದ ಪ್ರಜ್ವಲ ಪ್ರವಾಹವೊಂದು ಉಕ್ಕಿ ಹರಿದುಬಂದಿತು. ಲಕ್ಷೋಪಲಕ್ಷ ದೂತರು ಆತನಿಗೆ ಸೇವೆಸಲ್ಲಿಸುತ್ತಿದ್ದರು. ಕೋಟ್ಯಾನುಕೋಟಿ ಕಿಂಕರರು ಆತನ ಮುಂದೆ ನಿಂತಿದ್ದರು. ನ್ಯಾಯಸಭೆಯವರು ತೀರ್ಪುನೀಡಲು ಕುಳಿತುಕೊಂಡರು. ಪಟ್ಟಿಪುಸ್ತಕಗಳನ್ನು ತೆರೆಯಲಾಯಿತು.


ಸರ್ವೇಶ್ವರನ ಬಳಿಯಿಂದ ಬೆಂಕಿ ಹೊರಟು ಧೂಪಾರತಿಯನ್ನು ಅರ್ಪಿಸುತ್ತಿದ್ದ ಆ 250 ಮಂದಿಯನ್ನು ಭಸ್ಮಮಾಡಿತು.


ಆಗ ಸರ್ವೇಶ್ವರನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ನಾಶಮಾಡಿತು. ಅವರು ಸರ್ವೇಶ್ವರನ ಸನ್ನಿಧಿಯಲ್ಲೇ ಸತ್ತರು.


ಸೊದೋಮ್ - ಗೊಮೋರ ಹಾಗೂ ಆ ಬಯಲುಸೀಮೆಯತ್ತ ಅವನು ಕಣ್ಣುಹಾಯಿಸಿದಾಗ, ಇಗೋ, ಆ ಪ್ರದೇಶದಿಂದ ಹೊಗೆ, ದೊಡ್ಡ ಆವಿಗೆಯ ಹೊಗೆಯಂತೆ ಭುಗಿಲೇರುತ್ತಿತ್ತು.


ಯಾವನಾದರು ಇವರಿಗೆ ಕೇಡು ಬಗೆದರೆ ಇವರ ಬಾಯಿಯಿಂದ ಬೆಂಕಿ ಹೊರಟು ಇವರ ಶತ್ರುಗಳನ್ನು ದಹಿಸಿಬಿಡುತ್ತದೆ. ಇವರಿಗೆ ಕೇಡು ಬಗೆಯಬೇಕೆಂದಿರುವವನು ಹೀಗೆಯೇ ಹತನಾಗುತ್ತಾನೆ.


ನಡುಗುತ್ತದೆ ಭೂಮಂಡಲ ಆತನ ಕೃತ್ಯಕೆ I ಹೊಗೆಕಾರುತ್ತದೆ ಪರ್ವತ ಆತನ ಸ್ಪರ್ಶಕೆ II


ಹೇ ದೇವಾ, ನಮ್ಮ ನೀಪರಿ ವರ್ಜಿಸಿಬಿಟ್ಟೆ ಏಕೆ? I ನೀ ಪಾಲಿಪ ಮಂದೆಯ ಮೇಲೀಗ ಉರಿಗೋಪವೇಕೆ? II


ಬರುತಿಹನು ನಮ್ಮ ದೇವನು, ಇನ್ನು ಸುಮ್ಮನಿರನಾತ I ಆತನ ಮುಂದೆ ಬೆಂಕಿಮಳೆ, ಸುತ್ತಲು ಚಂಡಮಾರುತ II


ಸರ್ವೇಶ್ವರ ಅಂಥವನನ್ನು ಎಂದಿಗೂ ಕ್ಷಮಿಸರು; ಬದಲಿಗೆ ಅವನ ಮೇಲೆ ಸಿಟ್ಟುಗೊಂಡು, ತಮ್ಮ ಗೌರವವನ್ನು ಕಾಪಾಡಿಕೊಳ್ಳುವವರಾಗಿ, ಈ ಗ್ರಂಥದಲ್ಲಿ ಬರೆದಿರುವ ಎಲ್ಲಾ ಶಾಪೋಕ್ತಿಗಳಿಗೂ ಅವನನ್ನು ಗುರಿಪಡಿಸುವರು. ಅವನ ಹೆಸರನ್ನು ಭೂಮಿಯ ಮೇಲೆ ಇಲ್ಲದಂತೆ ಮಾಡುವರು.


ಇಸ್ರಯೇಲರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಸರ್ವೇಶ್ವರ ಸ್ವಾಮಿಗೆ ವಿರುದ್ಧ ಗುಣಗುಟ್ಟಿದರು. ಅದಕ್ಕೆ ಕೋಪಗೊಂಡ ಸರ್ವೇಶ್ವರ ಅವರ ಮಧ್ಯೆ ಬೆಂಕಿ ಬೀಳುವಂತೆ ಮಾಡಿದರು. ಇದರ ಪರಿಣಾಮವಾಗಿ ಪಾಳೆಯದ ಕಡೇಭಾಗದಲ್ಲಿದ್ದವರು ಸುಟ್ಟುಹೋದರು.


ಅದರ ಬಾಯಿಯೊಳಗಿಂದ ಕೊಳ್ಳಿಗಳು ಹೊರಬರುತ್ತವೆ ಅದರಿಂದ ಬೆಂಕಿಕಿಡಿಗಳು ಹಾರಿಬರುತ್ತವೆ.


ಬೀಳುವನು ಕುಳಿಯಲ್ಲಿ, ಭಯಭೀತಿಯ ಸಪ್ಪಳಕ್ಕೆ ಓಡಿಹೋಗುವವನು, ಸಿಕ್ಕಿಬೀಳುವನು ಬಲೆಯಲ್ಲಿ ಕುಳಿಯ ಹತ್ತಿ ಬರುವವನು. ತೆರೆದಿವೆ ನೋಡಿ, ಆಕಾಶದ ದ್ವಾರಗಳು, ಕಂಪಿಸುತ್ತಿವೆ ಬುವಿಯ ಅಸ್ತಿವಾರಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು