Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 18:9 - ಕನ್ನಡ ಸತ್ಯವೇದವು C.L. Bible (BSI)

9 ಆಕಾಶವನೆ ಬಾಗಿಸಿ ಆತನಿಳಿದು ಬರಲು I ಸೇರಿತು ಆತನ ಕಾಲಡಿ ಕಾರ್ಮುಗಿಲು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆತನು ಆಕಾಶವನ್ನು ತಗ್ಗಿಸಿ ಇಳಿದು ಬಂದನು; ಆತನ ಪಾದಗಳ ಕೆಳಗೆ ಕಾರ್ಗತ್ತಲು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆತನು ಆಕಾಶವನ್ನು ಹರಿದು ಕೆಳಗಿಳಿದು ಬಂದನು. ಆತನು ದಟ್ಟವಾದ ಕಪ್ಪುಮೋಡದ ಮೇಲೆ ನಿಂತುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ದೇವರು ಆಕಾಶಗಳನ್ನು ಬಾಗಿಸಿ ಕೆಳಗಿಳಿದು ಬಂದರು; ಅವರ ಪಾದಗಳ ಕೆಳಗೆ ಕಾರ್ಮೋಡಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 18:9
17 ತಿಳಿವುಗಳ ಹೋಲಿಕೆ  

ಇಸ್ರಯೇಲಿನ ಜನರೇ, ನಿಮ್ಮ ದೇವರಿಗೆ ಸಮಾನನಾರೂ ಇಲ್ಲ, ಆತ ಬರುವನು ಆಕಾಶವನ್ನೇರಿ, ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ಬರುವನು ನಿಮ್ಮ ನೆರವಿಗಾಗಿ.


ಅನಂತರ ಶ್ವೇತವರ್ಣದ ಒಂದು ಮಹಾಸಿಂಹಾಸನವನ್ನು ಕಂಡೆ. ಅದರಲ್ಲಿ ಒಬ್ಬರು ಆಸೀನರಾಗಿದ್ದರು. ಅವರ ಸನ್ನಿಧಿಯಿಂದ ಭೂಮ್ಯಾಕಾಶಗಳು ತಮ್ಮ ಇರುವಿಕೆಯೇ ಇಲ್ಲದಂತೆ ಕಣ್ಮರೆಯಾಗಿ ಹೋದವು.


ಪ್ರಭುವಿನ ದಿನ ಬಂದೇ ತೀರುವುದು. ಅದು ಕಳ್ಳನಂತೆಯೇ ಬರುವುದು. ಆಗ, ಆಕಾಶಮಂಡಲವು ಸಿಡಿಲ ಗರ್ಜನೆಯೊಂದಿಗೆ ಅಳಿದುಹೋಗುವುದು. ಸೂರ್ಯ, ಚಂದ್ರ, ನಕ್ಷತ್ರ, ಗ್ರಹಗಳು ಸುಟ್ಟು ಲಯವಾಗಿ ಹೋಗುವುವು. ಭೂಮಿಯೂ ಅದರಲ್ಲಿರುವ ಸಮಸ್ತವೂ ಉರಿದು ಭಸ್ಮವಾಗುವುವು.


ಅಂದು ದೇವರ ಧ್ವನಿಗೆ ಭೂಮಿಯು ನಡುಗಿತು. ಇಂದಾದರೋ, “ಇನ್ನೂ ಒಂದು ಸಾರಿ ನಾನು ಭೂಮಿಯನ್ನಷ್ಟೇ ಅಲ್ಲ, ಆಕಾಶವನ್ನೂ ನಡುಗಿಸುತ್ತೇನೆ,” ಎಂದು ಪ್ರತಿಜ್ಞೆಮಾಡಿರುತ್ತಾರೆ.


ಯೇಸು, “ನಾನು ಮಾಡುತ್ತಿರುವುದು ನಿನಗೆ ಈಗ ಅರ್ಥವಾಗದು, ಮುಂದೆ ಅರ್ಥವಾಗುತ್ತದೆ,” ಎಂದು ಉತ್ತರಿಸಿದರು.


ಆಗ ನಡುಮಧ್ಯಾಹ್ನ. ಆ ಹೊತ್ತಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


“ಆ ದಿನಗಳ ಸಂಕಷ್ಟಗಳು ಮುಗಿದ ಕೂಡಲೇ ಸೂರ್ಯನು ಅಂಧಕಾರಮಯನಾಗುವನು; ಚಂದ್ರನು ಕಾಂತಿಹೀನನಾಗುವನು; ಅಂತರಿಕ್ಷದಿಂದ ನಕ್ಷತ್ರಗಳು ಕಳಚಿ ಬೀಳುವುವು; ಗ್ರಹಶಕ್ತಿಗಳು ಕಂಪಿಸುವುವು.


ಸ್ವಾಮಿ ಸಿಯೋನಿನಿಂದ ಗರ್ಜಿಸುತ್ತಾರೆ, ಜೆರುಸಲೇಮಿನಿಂದ ಅವರ ಧ್ವನಿ ಮೊಳಗುತ್ತದೆ. ಭೂಮ್ಯಾಕಾಶಗಳು ನಡುಗುತ್ತವೆ. ಆದರೂ ಸರ್ವೇಶ್ವರ ತಮ್ಮ ಜನರಿಗೆ ಆಶ್ರಯ; ಇಸ್ರಯೇಲರಿಗೆ ರಕ್ಷಣಾ ದುರ್ಗ.


ಆಕಾಶವನೆ ಬಾಗಿಸಿ ಆತನಿಳಿದು ಬರಲು ಸೇರಿತು ಆತನ ಕಾಲಡಿ ಕಾರ್ಮುಗಿಲು.


ಆಕಾಶಮಂಡಲವನು ನೋಡಿ ಕಣ್ಣೆತ್ತಿ ಭೂಮಂಡಲದತ್ತ ನೋಡಿ ಕೆಳಗೆ ದಿಟ್ಟಿಸಿ. ಆಕಾಶ ಚದರಿಹೋಗುವುದು ಹೊಗೆಯಂತೆ ಭೂಮಿ ಹರಿದುಹೋಗುವುದು ಬಟ್ಟೆಯಂತೆ ಸಾಯುವರು ಭೂನಿವಾಸಿಗಳು ಅದರಂತೆ. ನಾ ಕೊಡುವ ವಿಮೋಚನೆಯೋ ನಿಲ್ಲುವುದು ಶಾಶ್ವತವಾಗಿ ನಾ ನೀಡುವ ಮುಕ್ತಿಯೋ ಅಳಿದುಹೋಗದು ಭಂಗವಾಗಿ.


ಗಾಯನ ಮಾಡಿರಿ ದೇವನಿಗೆ, ಕೊಂಡಾಡಿರಿ ಆತನ ನಾಮವನು I ಮೇಘಾರೂಢನಾಗಿ ಬರುವವಗೆ ಸಿದ್ಧಮಾಡಿರಿ ರಾಜಮಾರ್ಗವನು I “ಪ್ರಭು” ಆತನ ನಾಮಧೇಯ, ಹರ್ಷದಿ ಸೇರಿರಿ ಆತನ ಸನ್ನಿಧಿಯನು II


ಸೀನಾಯಿ ಬೆಟ್ಟವೆಲ್ಲಾ ಹೊಗೆಯಿಂದ ಆವರಿಸಿಕೊಂಡಿತ್ತು. ಏಕೆಂದರೆ ಸರ್ವೇಶ್ವರ ಸ್ವಾಮಿ ಬೆಂಕಿಯ ರೂಪದಲ್ಲಿ ಆ ಬೆಟ್ಟದ ಮೇಲೆ ಇಳಿದುಬಂದಿದ್ದರು. ಆ ಹೊಗೆ ಆವಿಗೆಯ ಹೊಗೆಯಂತೆ ಏರಿತು. ಅದೂ ಅಲ್ಲದೆ ಬೆಟ್ಟವೆಲ್ಲ ಬಹಳವಾಗಿ ಕಂಪಿಸಿತು.


ಬರುತಿಹನು ನಮ್ಮ ದೇವನು, ಇನ್ನು ಸುಮ್ಮನಿರನಾತ I ಆತನ ಮುಂದೆ ಬೆಂಕಿಮಳೆ, ಸುತ್ತಲು ಚಂಡಮಾರುತ II


ಚಲಿಸುತ್ತಿದೆ ಬೆಂಕಿ ಆತನ ಮುಂದುಗಡೆ I ಸುಡುತ್ತದೆ ಆತನ ವೈರಿಗಳನು ಎಲ್ಲೆಡೆ II


ಸರ್ವೇಶ್ವರ ಬರುವನಿದೋ ಅಗ್ನಿಮಯನಾಗಿ ಆತನ ರಥಗಳು ಬಿರುಗಾಳಿಯಂತೆ ರಭಸವಾಗಿ ತೋರಿಸುವನು ತನ್ನ ಸಿಟ್ಟನ್ನು ರೌದ್ರವೇಶದಿಂದ ಖಂಡಿಸುವನು ಧಗಧಗಿಸುವ ಜ್ವಾಲೆಯಿಂದ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು