Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:1 - ಕನ್ನಡ ಸತ್ಯವೇದವು C.L. Bible (BSI)

1 ಆಕಾಶಮಂಡಲ ಸಾರುತಿದೆ ದೇವರ ಮಹಿಮೆಯನು I ತಾರಾಮಂಡಲ ತೋರುತಿದೆ ದೇವರ ಕೈಕೃತಿಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ; ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಕಾಶವು ದೇವರ ಪ್ರಭಾವವನ್ನು ಪ್ರಚುರಪಡಿಸುತ್ತದೆ; ಗಗನವು ಆತನ ಕೈಕೆಲಸವನ್ನು ತಿಳಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಕಾಶಮಂಡಲವು ದೇವರ ಮಹಿಮೆಯನ್ನು ಪ್ರಕಟಿಸುವುದು. ಗಗನವು ಆತನ ಕೈಕೆಲಸವನ್ನು ತಿಳಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಕಾಶವು ದೇವರ ಮಹಿಮೆಯನ್ನು ಸಾರುತ್ತದೆ; ಅಂತರಿಕ್ಷವು ಅವರ ಕೈಕೆಲಸವನ್ನು ಘೋಷಿಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:1
13 ತಿಳಿವುಗಳ ಹೋಲಿಕೆ  

ಆಕಾಶಮಂಡಲ ನಿನ್ನ ಕೈಕೆಲಸವಯ್ಯಾ I ಚಂದ್ರ ನಕ್ಷತ್ರಗಳು ನಿನ್ನ ರಚನೆಗಳಯ್ಯಾ II


ದೇವನೇ ಸತ್ಯಸ್ವರೂಪಿ, ನ್ಯಾಯಾಧಿಪತಿ I ಇದನು ಸಾರಿ ಹೇಳಲಿ ಆಕಾಶ ಪ್ರಕೃತಿ II


ಸೃಷ್ಟಿಯಾಯಿತು ಗಗನ ಮಂಡಲ ಆತನ ನುಡಿಯೊಂದಕೆ I ರೂಪುಗೊಂಡಿತು ತಾರಾ ಮಂಡಲ ಅವನುಸಿರು ಮಾತ್ರಕೆ II


ಬುದ್ಧಿವಂತರು ತೇಜೋಮಯವಾದ ಆಕಾಶಮಂಡಲದಂತೆ ಪ್ರಕಾಶಿಸುವರು. ಜನರನ್ನು ಸದ್ಧರ್ಮಿಗಳನ್ನಾಗಿ ಮಾಡುವವರು ಯುಗಯುಗಾಂತರಕ್ಕೂ ನಕ್ಷತ್ರಗಳಂತೆ ಹೊಳೆಯುವರು.


ಪ್ರಭುವಿಗೆ ಸ್ವಂತವಾದುದು ಪರಲೋಕ I ನರರಿಗೆ ಕೊಟ್ಟಿಹನಾತನು ಭೂಲೋಕ II


ದೇವರು ಆ ಜ್ಞಾನವನು ಕಂಡು ಪರಿಗಣಿಸಿದನು ಅದನು ಪರಿಶೋಧಿಸಿ ಪ್ರತಿಷ್ಠಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು