Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:10 - ಕನ್ನಡ ಸತ್ಯವೇದವು C.L. Bible (BSI)

10 ಅಪೇಕ್ಷಣೀಯವಾದುವವು ಚಿನ್ನ ಅಪರಂಜಿಗಿಂತ I ಅತಿಮಧುರವಾದುವು ಅಪ್ಪಟ ಜೇನುತುಪ್ಪಕ್ಕಿಂತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವು ಬಂಗಾರಕ್ಕಿಂತಲೂ, ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ, ಶೋಧಿಸಿದ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವು ಬಂಗಾರಕ್ಕಿಂತಲೂ ಅಪರಂಜಿರಾಶಿಗಿಂತಲೂ ಅಪೇಕ್ಷಿಸತಕ್ಕವುಗಳು. ಅವು ಜೇನಿಗಿಂತಲೂ ಶೋಧಿಸಿದ ಜೇನು ತುಪ್ಪಕ್ಕಿಂತಲೂ ಸಿಹಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆತನ ಉಪದೇಶಗಳು ಬಂಗಾರಕ್ಕಿಂತಲೂ ಅಮೂಲ್ಯವಾಗಿವೆ; ಅಪ್ಪಟವಾದ ಜೇನುತುಪ್ಪಕ್ಕಿಂತಲೂ ಮಧುರವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವು ಬಂಗಾರಕ್ಕಿಂತಲೂ, ಅಪರಂಜಿಗಿಂತಲೂ ಅಮೂಲ್ಯವಾಗಿವೆ; ಅವು ಜೇನಿಗಿಂತಲೂ, ಅಪ್ಪಟ ಜೇನುತುಪ್ಪಕ್ಕಿಂತಲೂ ಸಿಹಿಯಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:10
13 ತಿಳಿವುಗಳ ಹೋಲಿಕೆ  

ನಿನ್ನ ನುಡಿ ಎನಿತೊ ರುಚಿ ನನ್ನ ನಾಲಿಗೆಗೆ I ಜೇನುತುಪ್ಪಕ್ಕಿಂತ ಸಿಹಿ ನನ್ನ ಬಾಯಿಗೆ II


ಸಾವಿರಾರು ಚಿನ್ನಬೆಳ್ಳಿ ನಾಣ್ಯಗಳಿಗಿಂತ I ನಿನ್ನ ಬಾಯಿಂದ ಬಂದ ಧರ್ಮಶಾಸ್ತ್ರ ಉಚಿತ II


ಚಿನ್ನ, ಅಪರಂಜಿಗಿಂತಲೂ ಪ್ರಿಯ I ನಿನ್ನ ಆಜ್ಞೆಗಳು ನನಗೆ ಸುಪ್ರಿಯ II


ಬಂಗಾರಕ್ಕಿಂತ ಜ್ಞಾನಾರ್ಜನೆ ಎಷ್ಟೋ ಮೇಲು; ಬೆಳ್ಳಿಗಿಂತ ವಿವೇಕಾರ್ಜನೆ ಎಷ್ಟೋ ಲೇಸು.


ನಾ ಬಿಟ್ಟಗಲಲಿಲ್ಲ ಆತನ ತುಟಿಯಿಂದ ಹೊರಟ ಆಜ್ಞೆಗಳನು ನನ್ನೆದೆಯಲಿ ನಿಧಿಯಾಗಿಟ್ಟೆ ಆತನ ಬಾಯಿಂದ ಬಂದ ಮಾತುಗಳನ್ನು.


ನಾನು ನೀಡುವ ಫಲ ಬಂಗಾರಕ್ಕಿಂತ ಶ್ರೇಷ್ಠ ನನ್ನಿಂದ ದೊರಕುವ ಆದಾಯ ಅಪ್ಪಟ ಬೆಳ್ಳಿಗಿಂತ ಅಮೂಲ್ಯ.


ಮಗನೇ, ಜೇನು ತಿನ್ನು, ಅದು ಚೆನ್ನಾಗಿದೆ; ತೊಟ್ಟಿಕ್ಕುವ ಜೇನುತುಪ್ಪ ನಿನ್ನ ಬಾಯಿಗೆ ಸಿಹಿ ಅಲ್ಲವೇ?


ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ I ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ II


ಅಂತೆಯೇ, ನಾನು ಆ ಚಿಕ್ಕ ಸುರುಳಿಯನ್ನು ದೇವದೂತನ ಕೈಯಿಂದ ತೆಗೆದುಕೊಂಡು ತಿಂದೆ. ಅದು ನನ್ನ ಬಾಯಲ್ಲಿ ಜೇನುತುಪ್ಪದಂತೆ ಸಿಹಿಯಾಗಿತ್ತು. ಆದರೆ ಅದನ್ನು ತಿಂದಮೇಲೆ ನನ್ನ ಹೊಟ್ಟೆಯೆಲ್ಲಾ ಕಹಿಯಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು