Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:12 - ಕನ್ನಡ ಸತ್ಯವೇದವು C.L. Bible (BSI)

12 ತನ್ನ ತಪ್ಪನು ತಾನರಿತುಕೊಳ್ಳುವವನಾರಯ್ಯಾ I ಗುಪ್ತವಾದ ಪಾಪಗಳಿಂದೆನ್ನ ಮುಕ್ತಗೊಳಿಸಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾರು? ಮರೆಯಾದ ದೋಷಗಳಿಂದ ನನ್ನನ್ನು ನಿರ್ಮಲಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವವನು ಯಾವನು? ಮರೆಯಾದವುಗಳಿಂದ ನನ್ನನ್ನು ನಿರ್ಮಲಮಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನೇ, ಯಾವನೂ ತನ್ನ ತಪ್ಪುಗಳನ್ನೆಲ್ಲಾ ತಿಳಿದುಕೊಳ್ಳುವುದಿಲ್ಲ. ಆದ್ದರಿಂದ ಗುಪ್ತ ಪಾಪಗಳನ್ನು ಮಾಡಲು ನನ್ನನ್ನು ಬಿಟ್ಟುಬಿಡಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ತಮ್ಮ ತಪ್ಪುಗಳನ್ನು ತಿಳಿದುಕೊಳ್ಳಲು ಯಾರಿಗೆ ಸಾಧ್ಯ? ನನ್ನ ಗುಪ್ತ ಪಾಪಗಳನ್ನು ಕ್ಷಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:12
19 ತಿಳಿವುಗಳ ಹೋಲಿಕೆ  

ನಿನ್ನ ನೋಟಕೆ ಮರೆಯಾಗಿಲ್ಲ ನಮ್ಮ ಪಾಪದೋಷಗಳು I ನಿನ್ನ ಮುಖಕಾಂತಿಗೆ ಬಟ್ಟಬಯಲಾಗಿವೆ ಗುಪ್ತಾಪರಾಧಗಳು II


ನಾನು ಮಾಡಿದ ತಪ್ಪೇನೆಂಬುದನು ತಿಳಿಸಿರಿ ನನಗೆ ನಾನು ಮೌನದಿಂದಿರುವೆನು, ಉಪದೇಶಮಾಡಿರಿ ನನಗೆ.


ಮಾನವ ಹೃದಯ ಎಲ್ಲಕ್ಕಿಂತ ವಂಚಕ ಅದಕ್ಕೆ ಅಂಟಿದೆ ಗುಣವಾಗದ ರೋಗ ಅದರ ಗುಟ್ಟನ್ನು ಅರಿತುಕೊಳ್ಳಬಲ್ಲವರೂ ಇಲ್ಲ.


ಲೆಕ್ಕವಿಲ್ಲದಾಪತ್ತುಗಳು ನನ್ನನು ಸುತ್ತಿಕೊಂಡಿವೆ I ದಿಕ್ಕು ತೋಚದಂತೆನ್ನ ಪಾಪಗಳು ನನಗಂಟಿಕೊಂಡಿವೆ I ಸಿಲುಕವು ಎಣಿಕೆಗೆ ತಲೆಗೂದಲಂತೆ, ನಾನೆದೆಗುಂದಿರುವೆ II


ನನ್ನಲ್ಲಿ ದೋಷವಿದೆಯೆಂದು ನನ್ನ ಮನಸ್ಸಾಕ್ಷಿಗೆ ತೋರುವುದಿಲ್ಲ. ಆದರೂ ನಾನು ನಿರ್ದೋಷಿಯೆಂದು ಹೇಳುವಂತಿಲ್ಲ. ನನ್ನ ನ್ಯಾಯನಿರ್ಣಯ ಮಾಡುವವರು ಪ್ರಭುವೇ.


ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


ಆದರೆ ಎರಡನೆಯ ಭಾಗವಾದ ಗರ್ಭಗುಡಿಯನ್ನು ಪ್ರಧಾನ ಯಾಜಕನೊಬ್ಬನೇ ಪ್ರವೇಶಿಸುತ್ತಿದ್ದನು; ಅದೂ ವರ್ಷಕ್ಕೆ ಒಮ್ಮೆ ಮಾತ್ರ. ತನ್ನೊಡನೆ ಬಲಿರಕ್ತವನ್ನು ತೆಗೆದುಕೊಳ್ಳದೆ ಅವನು ಅಲ್ಲಿಗೆ ಹೋಗುವಂತಿರಲಿಲ್ಲ. ಆ ರಕ್ತವನ್ನು ತನಗಾಗಿಯೂ ಜನರು ತಿಳಿಯದೆ ಮಾಡಿದ ಅಪರಾಧಗಳಿಗಾಗಿಯೂ ಅರ್ಪಿಸಬೇಕಾಗಿತ್ತು.


ನನ್ನ ಕುರಿತು ನಿನಗಿರುವ ಅರಿವು ಅಗಾಧ I ನನ್ನ ಬುದ್ಧಿಗದು ಸಿಲುಕದಷ್ಟು ಉನ್ನತ II


ನಾವೆಲ್ಲರೂ ಅಶುದ್ಧರು, ನಮ್ಮ ಸತ್ಕಾರ್ಯಗಳೆಲ್ಲ ಕೊಳಕು, ತರಗೆಲೆಯಂತೆ ಒಣಗಿಹೋಗಿದ್ದೇವೆ. ಬಿರುಗಾಳಿಯಂತೆ ನಮ್ಮನ್ನು ತಳ್ಳಿಕೊಂಡು ಬಂದಿವೆ, ನಮ್ಮ ಅಪರಾಧಗಳು.


ನಾ ಕೂರುವುದೂ ಏಳುವುದೂ ನಿನಗೆ ಗೊತ್ತಿದೆ I ನನ್ನಾಲೋಚನೆ ದೂರದಿಂದಲೇ ನಿನಗೆ ತಿಳಿದಿದೆ II


ತೊಳೆ ಪೂರ್ತಿಯಾಗಿ ಪಾಪದಿಂದೆನ್ನನು I ದೋಷಪರಿಹರಿಸಿ ಶುದ್ಧಗೊಳಿಸೆನ್ನನು II


ಪಾಪದ ಹೊರೆ ಹೊತ್ತವರು ನಾವಯ್ಯಾ I ಅವುಗಳ ಪರಿಹಾರಕನು ನೀನಯ್ಯಾ II


ಸರ್ವೇಶ್ವರ “ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು. ಆ ಧರ್ಮಶಾಸ್ತ್ರವನ್ನು ಹಾಗು ಆಜ್ಞೆಗಳನ್ನು ನೀನು ಜನರಿಗೆ ಬೋಧಿಸುವಂತೆ ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಾನು ನಿನಗೆ ಕೊಡುತ್ತೇನೆ,” ಎಂದು ಮೋಶೆಗೆ ಹೇಳಿದರು.


ನನ್ನಲ್ಲಿ ಭಯಭಕ್ತಿಯುಳ್ಳವರಾಗಿ, ನನ್ನ ಆಜ್ಞೆಗಳನ್ನು ಅನುಸರಿಸುವ ಮನಸ್ಸು ಸದಾ ಅವರಲ್ಲಿದ್ದರೆ ಎಷ್ಟೋ ಒಳ್ಳೆಯದು; ಆಗ ಅವರಿಗೂ ಅವರ ಸಂತತಿಗೂ ಯಾವಾಗಲೂ ಶುಭವುಂಟಾಗುವುದು.


“ಆದುದರಿಂದ ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದಂತೆಯೇ ನಡೆದುಕೊಳ್ಳಿ, ಎಡಕ್ಕಾಗಲಿ ಬಲಕ್ಕಾಗಲಿ ತಿರುಗಿಕೊಳ್ಳಬೇಡಿ. ಬದಲಿಗೆ, ನಿಮ್ಮ ದೇವರಾದ ಸರ್ವೇಶ್ವರ ಆಜ್ಞಾಪಿಸಿದ ಮಾರ್ಗದಲ್ಲೇ ಮುನ್ನಡೆಯಿರಿ.


ದೇವವಾಕ್ಯವನ್ನು ಉಲ್ಲಂಘಿಸುವವನು ನಾಶವಾಗುವನು; ಆಜ್ಞೆಯನ್ನು ನಿಷ್ಠೆಯಿಂದ ಪಾಲಿಸುವವನು ಫಲಪಡೆಯುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು