Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:13 - ಕನ್ನಡ ಸತ್ಯವೇದವು C.L. Bible (BSI)

13 ಕಾಪಾಡೆನ್ನನು, ಬೇಕು ಬೇಕೆಂದು ಪಾಪಮಾಡದಂತೆ I ಕಾದಿಡು, ಅಂಥ ಪಾಪಕೆ ನಾ ದಾಸನಾಗದಂತೆ I ನಿರ್ದೋಷಿಯಾಗುವೆನು, ಆ ದ್ರೋಹಕ್ಕೊಳಗಾಗದಂತೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾದ್ರೋಹಕ್ಕೆ ಒಳಗಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಅದಲ್ಲದೆ ಬೇಕೆಂದು ಪಾಪಮಾಡದಂತೆ ನಿನ್ನ ದಾಸನನ್ನು ಕಾಪಾಡು. ಅಂಥ ಪಾಪಗಳು ನನ್ನನ್ನು ಆಳದಿರಲಿ. ಆಗ ನಾನು ತಪ್ಪಿಲ್ಲದವನಾಗಿ ಮಹಾ ದ್ರೋಹಕ್ಕೆ ಒಳಗಾಗುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ನನ್ನ ಇಷ್ಟಾನುಸಾರ ಪಾಪಮಾಡಲು ನನ್ನನ್ನು ಬಿಟ್ಟುಬಿಡಬೇಡ. ಆ ಪಾಪಗಳು ನನ್ನನ್ನು ಆಳದಿರಲಿ. ನೀನು ಸಹಾಯಮಾಡಿದರೆ ನಾನು ಪರಿಶುದ್ಧನಾಗಿಯೂ ಪಾಪದಿಂದ ವಿಮುಕ್ತನಾಗಿಯೂ ಇರಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಬೇಕುಬೇಕೆಂದು ಪಾಪಮಾಡದಂತೆ ನಿಮ್ಮ ಸೇವಕನನ್ನು ಕಾಪಾಡು; ಅಂಥ ಪಾಪಗಳು ನನ್ನ ಮೇಲೆ ಆಳಿಕೆ ಮಾಡದಿರಲಿ. ಆಗ ನಾನು ತಪ್ಪಿಲ್ಲದವನಾಗಿ, ಮಹಾಪರಾಧದಿಂದ ಬಿಡುಗಡೆಯಾಗಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:13
21 ತಿಳಿವುಗಳ ಹೋಲಿಕೆ  

ನಿನ್ನ ನುಡಿಗನುಸಾರ ದೃಢಪಡಿಸು ನನ್ನ ನಡತೆಯನು I ಕೆಡುಕೊಂದೂ ಅಧೀನಪಡಿಸದಿರಲಿ ನನ್ನನು II


ಅಂತೆಯೇ, ದೇವರ ಹಾಗೂ ಮಾನವರ ಮುಂದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ಬಾಳಲು ಪ್ರಯತ್ನಿಸುತ್ತಿದ್ದೇನೆ.


ನಾಬಾಲನು ಸತ್ತನೆಂಬ ವರ್ತಮಾನವನ್ನು ದಾವೀದನು ಕೇಳಿದನು. “ನನಗೆ ಅಪಮಾನ ಮಾಡಿದ ನಾಬಾಲನಿಗೆ ಮುಯ್ಯಿ ತೀರಿಸಿದಂಥ ಸರ್ವೇಶ್ವರನಿಗೆ ಸ್ತೋತ್ರವಾಗಲಿ! ಅವರು ನನ್ನನ್ನು ಕೆಟ್ಟತನದಿಂದ ದೂರಮಾಡಿ ನಾಬಾಲನ ಕೆಟ್ಟತನವನ್ನು ಅವನ ತಲೆಯ ಮೇಲೆಯೇ ಹೊರಿಸಿದ್ದಾರೆ,” ಎಂದನು. ಅನಂತರ ಅವನು, ಅಬೀಗೈಲಳು ತನಗೆ ಹೆಂಡತಿಯಾಗಬೇಕೆಂದು ದೂತರನ್ನು ಕಳುಹಿಸಿದನು.


ನನಗೆ ರಕ್ಷೆ ನೀಡುವ ಗುರಾಣಿ, ದೇವನೇ I ನೇರಮನಸ್ಕರಿಗೆ ಸಂರಕ್ಷಣೆ ಆತನೆ II


ದೇವನೆಮಗೆ ಬೆಳಕು ಕೊಡುವ ಸೂರ್ಯನು I ಕಾದಿಟ್ಟು ರಕ್ಷಿಸುವ ಗುರಾಣಿಯು I ಸನ್ಮಾರ್ಗಿಗೆ ಈವನು ಸಕಲ ವರಗಳನು II


ಅದಕ್ಕೆ ದೇವರು ಪ್ರತ್ಯುತ್ತರವಾಗಿ, “ನೀನು ಶುದ್ಧಮನಸ್ಸಿನಿಂದ ಈ ಕಾರ್ಯಮಾಡಿದೆಯೆಂದು ನಾನು ಬಲ್ಲೆ; ಆದಕಾರಣವೇ ನನಗೆ ವಿರುದ್ಧವಾಗಿ ನೀನು ಪಾಪಮಾಡದಂತೆ ತಡೆದು ಆಕೆಯನ್ನು ಮುಟ್ಟಗೊಡಿಸಲಿಲ್ಲ.


ಮುಖ್ಯವಾಗಿ, ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಬಲಿಯಾಗಿರುವವರನ್ನು ಮತ್ತು ದೇವರ ಅಧಿಕಾರವನ್ನು ತೃಣೀಕರಿಸುವವರನ್ನು ಅವರು ಶಿಕ್ಷಿಸದೆ ಬಿಡುವುದಿಲ್ಲ.


ಪಾಪದಲಿ ಬೀಳದೆ ನಡೆದೆ ಎಚ್ಚರಿಕೆಯಾಗಿ I ಆತನ ದೃಷ್ಟಿಯಲಿದ್ದೆ ನಿರ್ದೋಷಿಯಾಗಿ II


ಸತ್ಯಸ್ವರೂಪನಾದ ಪ್ರಭು ಸತ್ಯ ಪ್ರಿಯನು I ಸತ್ಪುರುಷನು ಸೇರುವನು ಆತನ ಸನ್ನಿಧಿಯನು II


ಕೊಲ್ಲಬೇಕೆಂಬ ಉದ್ದೇಶದಿಂದಲೆ ಮತ್ತೊಬ್ಬನನ್ನು ಮೋಸದಿಂದ ಕೊಂದವನನ್ನು ನನ್ನ ಬಲಿಪೀಠದ ಬಳಿಯಿದ್ದರೂ ಎಳೆದು ಅವನಿಗೆ ಮರಣ ದಂಡನೆ ಕೊಡಬೇಕು.”


“ನೀನು ಇಸ್ರಯೇಲರ ಸಂಗಡ ಮಾತಾಡಿ ಹೇಳಬೇಕಾದುದು ಏನೆಂದರೆ ಯಾರೇ ಆಗಲಿ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ತಿಳಿಯದೆ ಮಾಡಿ ದೋಷಿಯಾದರೆ ಅದು ಆ ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಅನುಸರಿಸಬೇಕು:


“ಇಸ್ರಯೇಲರ ಸಮಾಜವೆಲ್ಲ ತಿಳಿಯದೆ ದೋಷಿಗಳಾದರೆ, ಅಂದರೆ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಅವರು ಯಾವುದನ್ನಾದರು ಮಾಡಿ ದೋಷಕ್ಕೆ ಗುರಿಯಾದರೆ,


“ಮುಖ್ಯಾಧಿಕಾರಿಯೊಬ್ಬನು ತನ್ನ ದೇವರಾದ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


ನಿಮ್ಮ ನಾಡಿನವರಲ್ಲಿ ಬೇರೆ ಯಾರಾದರು ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


ಕಾಣದಿರುವ ಮಾರ್ಗವನ್ನು ತೋರೆನಗೆ ತಪ್ಪುಮಾಡಿದ್ದರೂ ಮತ್ತೆ ಮಾಡೆ’ ಎಂದು ಹೇಳಿದ್ದಾದರೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು