Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:14 - ಕನ್ನಡ ಸತ್ಯವೇದವು C.L. Bible (BSI)

14 ನಿನಗೊಪ್ಪಿಗೆಯಾಗಲಿ ನನ್ನ ಬಾಯಮಾತು, ಹೃದಯಧ್ಯಾನ I ನೀನೆನ್ನ ಪ್ರಭು, ನನಗೆ ಉದ್ಧಾರಕ, ನನಗಾಶ್ರಯಧಾಮ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಯೆಹೋವನೇ ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ಮತ್ತು ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ಯೆಹೋವನೇ, ನನ್ನ ಶರಣನೇ, ನನ್ನ ವಿಮೋಚಕನೇ, ನನ್ನ ಮಾತುಗಳೂ ನನ್ನ ಹೃದಯದ ಧ್ಯಾನವೂ ನಿನಗೆ ಸಮರ್ಪಕವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನನ್ನ ಮಾತುಗಳೂ ನನ್ನ ಆಲೋಚನೆಗಳೂ ನಿನಗೆ ಮೆಚ್ಚಿಕೆಯಾಗಿರಲಿ. ಯೆಹೋವನೇ, ನೀನೇ ನನ್ನ ಬಂಡೆಯಾಗಿರುವೆ. ನನ್ನನ್ನು ರಕ್ಷಿಸುವಾತನು ನೀನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಯೆಹೋವ ದೇವರೇ, ನನ್ನ ಬಂಡೆಯೇ, ನನ್ನ ವಿಮೋಚಕರೇ, ನನ್ನ ಬಾಯಿಯ ಮಾತುಗಳೂ ನನ್ನ ಹೃದಯದ ಧ್ಯಾನವೂ ನಿಮ್ಮ ದೃಷ್ಟಿಯಲ್ಲಿ ಮೆಚ್ಚಿಕೆಯಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:14
21 ತಿಳಿವುಗಳ ಹೋಲಿಕೆ  

ಆತನಿಗೊಲಿಯಲಿ ನನ್ನ ಧ್ಯಾನ I ಆತನಲೇ ಹರ್ಷಿಸಲಿ ನನ್ನ ಮನ II


ತೆರೆವಂತೆ ಮಾಡು ಪ್ರಭು ನನ್ನ ತುಟಿಗಳನು I ಸಾರುವುದೆನ್ನ ಬಾಯಿ ನಿನ್ನ ನುಡಿಗಳನು II


ಸ್ವೀಕರಿಸು ನಾನು ಉಸುರುವ ಸ್ತುತಿಯರ್ಪಣೆಯನು I ಪ್ರಭೂ, ನನಗೆ ಕಲಿಸು ನಿನ್ನ ವಿಧಿನಿಯಮಗಳನು II


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ನಾನಂತು ಬಲ್ಲೆ, ನನ್ನ ಉದ್ಧಾರಕ ಜೀವಸ್ವರೂಪನೆಂದು ಕಡೆಯ ದಿನದಂದು ಧರೆಗಾತ ಇಳಿದುಬರುವನೆಂದು.


ಯೇಸುಕ್ರಿಸ್ತರು ನಮ್ಮನ್ನು ಸಕಲ ಅಪರಾಧಗಳಿಂದ ವಿಮೋಚಿಸಿ, ಪರಿಶುದ್ಧರನ್ನಾಗಿಸಿ, ಸತ್ಕಾರ್ಯಗಳಲ್ಲಿ ಆಸಕ್ತರಾದ ಒಂದು ಜನಾಂಗವನ್ನಾಗಿ ಮಾಡಿದರು. ನಮ್ಮನ್ನು ತಮ್ಮ ಸ್ವಂತದವರನ್ನಾಗಿಸಿಕೊಳ್ಳಲೆಂದು ತಮ್ಮನ್ನೇ ನಮಗಾಗಿ ಸಮರ್ಪಿಸಿಕೊಟ್ಟನು.


ವಿಶ್ವಾಸವಿದ್ದುದರಿಂದಲೇ ಹೇಬೆಲನು ಕಾಯಿನನಿಗಿಂತ ಉತ್ತಮವಾದ ಬಲಿಯನ್ನು ದೇವರಿಗೆ ಸಮರ್ಪಿಸಿದನು. ವಿಶ್ವಾಸದಿಂದಲೇ ತಾನು ಸತ್ಪುರುಷನೆಂದು ಸನ್ಮಾನಿತನಾದನು. ಅವನ ಕಾಣಿಕೆ ತಮಗೆ ಸ್ವೀಕೃತವಾಯಿತೆಂದು ದೇವರೇ ಸಾದರಪಡಿಸಿದರು. ಅವನು ಮೃತನಾಗಿದ್ದರೂ ಅವನ ವಿಶ್ವಾಸದ ಮೂಲಕ ಇಂದಿಗೂ ಮಾತನಾಡುತ್ತಿದ್ದಾನೆ.


ಈ ವರದಿಂದಲೇ ಯೆಹೂದ್ಯರಲ್ಲದ ಜನರಿಗೆ ನಾನು ಕ್ರಿಸ್ತಯೇಸುವಿನ ದಾಸನಾದೆ. ಯೆಹೂದ್ಯರಲ್ಲದವರು ಪವಿತ್ರಾತ್ಮರ ಮೂಲಕ ಪರಿಶುದ್ಧರಾಗಿ, ದೇವರಿಗೆ ಸಮರ್ಪಕ ಕಾಣಿಕೆಯಾಗುವಂತೆ ದೇವರ ಶುಭಸಂದೇಶವನ್ನು ಸಾರುವುದೇ ನನ್ನ ಪೂಜ್ಯಸೇವೆ, ಅದುವೇ ನನ್ನ ಯಾಜಕಸೇವೆ.


ನಮ್ಮ ಉದ್ಧಾರಕನ ನಾಮಧೇಯ ಸೇನಾಧೀಶ್ವರ ಸರ್ವೇಶ್ವರ ಆತನೇ ಇಸ್ರಯೇಲರಿಗೆ ಪರಮಪವಿತ್ರ.


ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ಸಾವಿನಿಂದ ಜೀವಕ್ಕೆ ಎಬ್ಬಿಸಲಾದ ದೇವರ ಪುತ್ರ ಯೇಸು ಸ್ವರ್ಗದಿಂದ ಪುನರಾಗಮಿಸುವುದನ್ನು ನೀವು ಹೇಗೆ ಎದುರುನೋಡುತ್ತಿದ್ದೀರಿ - ಎಂಬುದನ್ನು ಆ ಜನರೇ ಹೇಳುತ್ತಾರೆ. ಈ ಯೇಸುವೇ ಮುಂದೆ ಬರಲಿರುವ ದೈವಕೋಪದಿಂದ ನಮ್ಮನ್ನು ಪಾರುಮಾಡುವವರು.


ಇಂತೆನ್ನುತ್ತಾರೆ ಸೇನಾಧೀಶ್ವರ ಸರ್ವೇಶ್ವರ, ಇಸ್ರಯೇಲರ ಅರಸ, ಅವರ ಉದ್ಧಾರಕ: “ಆದಿಯು ನಾನೇ, ಅಂತ್ಯವು ನಾನೇ, ನನ್ನ ಹೊರತು ದೇವರಾರು ಇಲ್ಲ ಬೇರೆ.


“ಬಾಬಿಲೋನಿಯಗೆ ಕಳುಹಿಸುವೆ ಒಬ್ಬಾತನನು ನಿಮಗಾಗಿ ಮುರಿವನಾತ ಆ ಕಾರಾಗೃಹದ ಕಂಬಿಗಳನು ತುಂಡುತುಂಡಾಗಿ ಬಾಬಿಲೋನಿಯರ ಕೂಗಾಟವನು ಮಾರ್ಪಡಿಸುವೆನು ಗೋಳಾಟವನ್ನಾಗಿ.


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ಅವರು ಈ ಹೊಸ ಗೀತೆಯನ್ನು ಹಾಡುತ್ತಿದ್ದರು: :ಸುರುಳಿಯನ್ನು ಸ್ವೀಕರಿಸಲು ನೀ ಯೋಗ್ಯನು ಅದರ ಮುದ್ರೆಗಳನ್ನು ಮುರಿಯಲು ನೀ ಶಕ್ತನು. ಸಮರ್ಪಿಸಿಕೊಂಡಿರುವೆ ನಿನ್ನನೇ ನೀ ಬಲಿಯರ್ಪಣೆಯಾಗಿ ಸಕಲ ದೇಶ, ಭಾಷೆ, ಕುಲಗೋತ್ರಗಳಿಂದ ಕೊಂಡುಕೊಂಡಿರುವೆ ಮಾನವರನು ನಿನ್ನ ರಕ್ತದಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು