Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:2 - ಕನ್ನಡ ಸತ್ಯವೇದವು C.L. Bible (BSI)

2 ದಿನವು ಮರುದಿನಕೆ ಮಾಡುತಿದೆ ಈ ಪ್ರಕಟಣೆಯನು I ರಾತ್ರಿ ಮರುರಾತ್ರಿಗೆ ನೀಡುತಿದೆ ಈ ಪ್ರಚಾರವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ದಿನವು ದಿನಕ್ಕೆ ದೇವರ ಮಹಿಮೆಯನ್ನು ತಿಳಿಸುತ್ತಿರುವುದು; ರಾತ್ರಿಯು ರಾತ್ರಿಗೆ ಜ್ಞಾನವನ್ನು ಪ್ರಕಟಿಸುತ್ತಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ದಿನವು ದಿನಕ್ಕೆ ಪ್ರಕಟಿಸುತ್ತಿರುವದು; ರಾತ್ರಿಯು ರಾತ್ರಿಗೆ ಅರುಹುತ್ತಿರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪ್ರತಿಯೊಂದು ದಿನವೂ ಅದರ ಕುರಿತು ಹೊಸ ವಿಷಯವನ್ನು ತಿಳಿಸುವುದು. ಪ್ರತಿಯೊಂದು ರಾತ್ರಿಯೂ ಅದರ ಕುರಿತು ಹೊಸ ಸಂಗತಿಯನ್ನು ಪ್ರಕಟಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಹಗಲೆಲ್ಲಾ ಅವು ಮಾತನಾಡುತ್ತವೆ; ರಾತ್ರಿಯೆಲ್ಲಾ ಅವು ಅರಿವನ್ನು ಪ್ರಕಟಿಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:2
14 ತಿಳಿವುಗಳ ಹೋಲಿಕೆ  

ಹಗಲಿರುಳುಗಳಿಗೆ ನಿಯಾಮಕ ನೀನು I ರವಿತಾರೆಗಳ ನಿರ್ಮಾಪಕ ನೀನು II


ಜೀವಂತನು, ಜೀವಂತನು ಮಾತ್ರವೇ ನಿನ್ನ ಸ್ತುತಿಮಾಡುವಂತೆ ನಾನಿಂದು ನಿನ್ನನ್ನು ಜೀವಂತನಾಗಿ ಸ್ತುತಿಮಾಡುತ್ತಿರುವೆ ನಿನ್ನ ಸತ್ಯಸಂಧತೆಯನ್ನು ಮಕ್ಕಳಿಗೆ ಬೋಧಿಸುವನು ತಂದೆ.


ಬಿತ್ತನೆ - ಕೊಯಿಲು ಚಳಿ - ಬಿಸಿಲು ಗ್ರೀಷ್ಮ - ಹೇಮಂತ ಹಗಲು - ಇರುಳು ಈ ಕ್ರಮಕ್ಕೆ ಇರದು ಅಂತ್ಯ ಜಗವಿರುವವರೆಗು.”


ಯುವಕರೂ ಯುವತಿಯರೂ I ಮುದುಕರೂ ಮಕ್ಕಳೂ II


ಬಳಿಕ ದೇವರು, “ಜಲರಾಶಿಯ ನಡುವೆ ವಿಸ್ತಾರವಾದ ಒಂದು ಗುಮ್ಮಟವು ಉಂಟಾಗಲಿ, ಅದು ಕೆಳಗಿನ ನೀರನ್ನೂ ಮೇಲಿನ ನೀರನ್ನೂ ಬೇರೆಬೇರೆ ಮಾಡಲಿ,” ಎಂದರು. ಹಾಗೆಯೇ ಆಯಿತು.


ಹೀಗೆ ದೇವರು ವಿಸ್ತಾರವಾದ ಗುಮ್ಮಟವೊಂದನ್ನು ಮಾಡಿ ಕೆಳಗಿದ್ದ ನೀರನ್ನು ಮೇಲಿದ್ದ ನೀರಿನಿಂದ ವಿಂಗಡಿಸಿದರು.


ಇಂತಿರಲು, ಮನುಜನು ಎಷ್ಟರವನು ನೀನವನನು ಲಕ್ಷಿಸಲು? I ಏತರದವನು ನರಮಾನವನು ನೀನವನನು ಪರಾಮರಿಸಲು? II


ಅಲ್ಲೆಲೂಯ! I ಸ್ತುತಿಸಿರಿ ದೇವರನು ಆತನ ಪರಿಶುದ್ಧ ಆಲಯದಲಿ I ಆತನ ಶಕ್ತಿಯನು ಸಾರುವಾ ಆಕಾಶಮಂಡಲದಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು