Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 19:5 - ಕನ್ನಡ ಸತ್ಯವೇದವು C.L. Bible (BSI)

5 ನಿರ್ಮಿಸಿಹನಲ್ಲಿ ದೇವನು ಗುಡಾರವೊಂದನು ಸೂರ್ಯನಿಗೆ I ಬರುತಿಹನಾ ರವಿ ವರನಂತೆ ಧಾರಾಗೃಹದಿಂದ ಹೊರಗೆ I ಶೂರನಂತೆ, ಓಟದ ಪಥದಲ್ಲೋಡಲು ಹರುಷದೊಂದಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟುಬರುವನು. ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವುದಕ್ಕೆ ಉಲ್ಲಾಸಗೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು ತನ್ನ ಮಂಟಪದೊಳಗಿಂದ ಬರುವ ಮದಲಿಂಗನೋ ಎಂಬಂತೆ ಹೊರಟು ಬರುವನು. ಅವನು ಶೂರನಂತೆ ತನಗೆ ನೇಮಕವಾದ ಮಾರ್ಗದಲ್ಲಿ ಓಡುವದಕ್ಕೆ ಉಲ್ಲಾಸಗೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮದುವೆಯ ಮಂಟಪದಿಂದ ಆನಂದದಿಂದ ಬರುವ ಮದುಮಗನಂತೆ ಸೂರ್ಯನು ಮುಂಜಾನೆ ಉದಯಿಸುವನು. ಕ್ರೀಡಾಪಟುವಿನಂತೆ ಸೂರ್ಯನು ಆಕಾಶದಲ್ಲಿ ಓಡಲಾರಂಭಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಸೂರ್ಯನು ಮದುಮಗನಂತೆ ತನ್ನ ಕೊಠಡಿಯಿಂದ ಹೊರಟುಬಂದು, ಪಂದ್ಯಕ್ಕೆ ಹರ್ಷದಿಂದ ಓಡುವ ಪರಾಕ್ರಮಶಾಲಿಯಂತೆ ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 19:5
8 ತಿಳಿವುಗಳ ಹೋಲಿಕೆ  

ಯುವಕನು ಕನ್ಯೆಯುವತಿಯನು ವರಿಸುವಂತೆ ವರಿಸುವನು ಸೃಷ್ಟಿಕರ್ತನು ನಿನ್ನನು. ವರನು ವಧುವಿನಲಿ ಆನಂದಿಸುವಂತೆ ನಿನ್ನಲಿ ಆನಂದಿಸುವನು ನಿನ್ನ ದೇವನು.


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ಮದುಮಗಳು ಮದುಮಗನಿಗೆ ಸೇರಿದವಳು. ಮದುಮಗನ ಗೆಳೆಯನಾದರೋ ಪಕ್ಕದಲ್ಲಿದ್ದು ಮದುಮಗನ ಕರೆಗೆ ಕಿವಿಗೊಡುತ್ತಾನೆ; ಆತನ ಸ್ವರ ಕೇಳಿ ಹರ್ಷಿಸುತ್ತಾನೆ. ಇಂಥ ಆನಂದದಿಂದ ನಾನೀಗ ಭರಿತನಾಗಿದ್ದೇನೆ.


ಸೂರ್ಯನು ಮೂಡುತ್ತಾನೆ, ಸೂರ್ಯನು ಮುಳುಗುತ್ತಾನೆ, ತಾನು ಹೊರಟ ಸ್ಥಳಕ್ಕೆ ಮರಳಿ ಓಡುತ್ತಾನೆ.


‘ಧರಣಿಯ ಅಂಚುಗಳನು ಹಿಡಿದು ದುರುಳರನ್ನು ಅದರೊಳಗಿಂದ ಒದರಿಬಿಡು’ ಎಂದು ಅದಕ್ಕೆ ಅಪ್ಪಣೆಮಾಡಿದೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು