Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 2:1 - ಕನ್ನಡ ಸತ್ಯವೇದವು C.L. Bible (BSI)

1 ದೊಂಬಿಯೇಳುವುದೇತಕೆ ಅನ್ಯದೇಶವಿದೇಶಗಳು? I ಕುತಂತ್ರ ಹೂಡುವುದೇಕೆ ಅನ್ಯಜಾತಿಜನಾಂಗಗಳು? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಅನ್ಯಜನಾಂಗಗಳು ದಂಗೆಗೆ ಏಳುವುದೂ, ಜನಾಂಗಗಳು ವ್ಯರ್ಥಕಾರ್ಯಗಳನ್ನು ಯೋಚಿಸುವುದೂ ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಅನ್ಯಜನಗಳು ದೊಂಬಿಮಾಡುವದೂ ಜನಾಂಗಗಳವರು ವ್ಯರ್ಥಕಾರ್ಯಗಳನ್ನು ಯೋಚಿಸುವದೂ ಯಾಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಅನ್ಯಜನಾಂಗಗಳು ಕೋಪಗೊಂಡಿರುವುದೇಕೆ? ಅವರು ಮೂರ್ಖತನದ ಸಂಚುಗಳನ್ನು ಮಾಡುತ್ತಿರುವುದೇಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ರಾಷ್ಟ್ರಗಳು ಒಳಸಂಚು ಮಾಡುವುದೂ ಜನಾಂಗಗಳು ವ್ಯರ್ಥವಾಗಿ ಕುತಂತ್ರ ಮಾಡುವುದೂ ಏಕೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 2:1
21 ತಿಳಿವುಗಳ ಹೋಲಿಕೆ  

ಅವರು ಯಜ್ಞದ ಕುರಿಮರಿಯ ಮೇಲೆ ಯುದ್ಧಮಾಡುವರು. ಆದರೆ ಯಜ್ಞದ ಕುರಿಮರಿಗೆ ಜಯವಾಗುವುದು. ಆ ಕುರಿಮರಿಯು ಒಡೆಯರಿಗೆಲ್ಲಾ ಒಡೆಯನೂ ರಾಜಾಧಿರಾಜನೂ ಆಗಿರುವುದೇ ಇದಕ್ಕೆ ಕಾರಣ. ದೇವರ ಕರೆ ಹೊಂದಿದವರೂ ದೇವರು ಆಯ್ದುಕೊಂಡವರೂ ಆದ ಪ್ರಾಮಾಣಿಕ ಅನುಯಾಯಿಗಳು ಆ ಜಯದಲ್ಲಿ ಪಾಲುಗಾರರಾಗುವರು,” ಎಂದನು.


ನಡುಗಿದವು ರಾಷ್ಟ್ರಗಳು, ಉಡುಗಿದವು ರಾಜ್ಯಗಳು I ದೇವರ ಗರ್ಜನೆಗೆ ಕರಗಿತು ಧರೆಯೆಲ್ಲವು II


ತಂತ್ರೋಪಾಯಗಳ ಕಲ್ಪಿಸಿದರೂ ನಡೆಯದು I ಕೇಡನು ನಿನಗೆ ಬಗೆದರೂ ಅದು ಕೈಗೂಡದು II


ಆದರೆ ಗೇಣಿದಾರರು ಮಗನನ್ನು ಕಂಡೊಡನೇ, ‘ಈ ತೋಟಕ್ಕೆ ಇವನೇ ಉತ್ತರಾಧಿಕಾರಿ; ಬನ್ನಿ ಇವನನ್ನು ಮುಗಿಸಿಬಿಡೋಣ. ಇವನಿಗೆ ಬರುವ ಸೊತ್ತನ್ನು ನಮ್ಮದಾಗಿಸಿಕೊಳ್ಳೋಣ,’ ಎಂದು ತಮ್ಮ ತಮ್ಮಲ್ಲೇ ಒಳಸಂಚು ಮಾಡಿಕೊಂಡರು.


ಕೂಡಿಬನ್ನಿ ರಾಷ್ಟ್ರಗಳೇ, ತುಂಡುತುಂಡಾಗುವಿರಿ ನೀವು; ಕಿವಿಗೊಡಿ, ದೂರ ದೇಶಗಳೇ, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು; ಹೌದು, ನಡುಕಟ್ಟಿ ನಿಂತರೂ ತುಂಡುತುಂಡಾಗುವಿರಿ ನೀವು.


ಪುಡಿಪುಡಿ ಮಾಡಿದೆ ನಾನವರನು ಗಾಳಿಗೆ ತೂರುವ ಧೂಳಿನಂತೆ I ಎತ್ತೆಸೆದುಬಿಟ್ಟೆ ನಾನವರನು ಮೋರಿಯ ಕೆಸರಿನಂತೆ II


ಇದನ್ನು ಕೇಳಿದ ಸಭಾಸದಸ್ಯರು ಕ್ರೋಧಭರಿತರಾಗಿ ಪ್ರೇಷಿತರನ್ನು ಕೊಲ್ಲಬೇಕೆಂದಿದ್ದರು.


ಆತನನ್ನು ಪರಕೀಯರ ಕೈಗೊಪ್ಪಿಸಲಾಗುವುದು; ಅವರು, ಅವನನ್ನು ಪರಿಹಾಸ್ಯ ಮಾಡುವರು, ಅಪಮಾನಪಡಿಸುವರು, ಉಗಿಯುವರು.


ಜನರ ಗುಂಪು ಅವರೊಡನೆ ಸೇರಿ ದೊಂಬಿಮಾಡಿತು. ನ್ಯಾಯಾಧಿಪತಿಗಳು ಪೌಲ ಮತ್ತು ಸೀಲರ ವಸ್ತ್ರಗಳನ್ನು ಕಿತ್ತುಹಾಕಿಸಿ ಛಡಿ ಏಟುಗಳನ್ನು ಕೊಡುವಂತೆ ಆಜ್ಞೆಮಾಡಿದರು.


ಇದರಿಂದ ಅವರಿಗೆ ಅತ್ಯಾನಂದವಾಯಿತು. ಅವರು ಹಣಕೊಡುವುದಾಗಿ ವಾಗ್ದಾನ ಮಾಡಿದರು.


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದುರ್ಗವು II


ನಿನ್ನ ಸ್ತುತಿಸುವೆನು ಪ್ರಭು ಜನಾಂಗಗಳ ಮುಂದೆ I ಸಂಕೀರ್ತಿಸುವೆನು ನಿನ್ನನು ರಾಷ್ಟ್ರಗಳ ಮಧ್ಯೆ II


ಮರೆಯದಿರು ನಿನ್ನಾ ವಿರೋಧಿಗಳ ಗದ್ದಲವನು I ವೈರಿಯೆಬ್ಬಿಸುತ್ತಿರುವ ನಿರಂತರ ದೊಂಬಿಯನು II


ಕುತಂತ್ರಮಾಡುತಿಹರು ನಿನ್ನ ಪ್ರಜೆಗೆ ವಿರುದ್ಧ I ಆಲೋಚಿಸುತಿಹರು ನಿನ್ನ ಶರಣರಿಗೆ ವಿರುದ್ಧ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು