Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 2:2 - ಕನ್ನಡ ಸತ್ಯವೇದವು C.L. Bible (BSI)

2 ದೇವನಿಗು, ಅವನಭಿಷಿಕ್ತನಿಗು ವಿರುದ್ಧವಾಗಿ I ನಿಂತಿಹರು ನೃಪರು ಸಮರ ಸನ್ನದ್ಧರಾಗಿ I ಸಮಾಲೋಚಿಸಿಹರು ಸಚಿವರು ರಹಸ್ಯವಾಗಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅರಸರು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ. ದೇಶಾಧಿಪತಿಗಳು ಯೆಹೋವನಿಗೂ ಮತ್ತು ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರುದ್ಧವಾಗಿ ಸನ್ನದ್ಧರಾಗಿ ನಿಂತಿದ್ದಾರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಪತಿಗಳು ಸನ್ನದ್ಧರಾಗಿ ನಿಂತಿದ್ದಾರೆ, ಅಧಿಕಾರಿಗಳು ಒಟ್ಟಾಗಿ ಸೇರಿ ಆಲೋಚಿಸುತ್ತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಅವುಗಳ ರಾಜರುಗಳೂ ನಾಯಕರುಗಳೂ ಯೆಹೋವನಿಗೂ ಆತನಿಂದ ಅಭಿಷೇಕಿಸಲ್ಪಟ್ಟವನಿಗೂ ವಿರೋಧವಾಗಿ ಕೂಡಿಬಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ, ಭೂಲೋಕದ ಅರಸರು ನಿಂತುಕೊಳ್ಳುತ್ತಾರೆ. ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 2:2
27 ತಿಳಿವುಗಳ ಹೋಲಿಕೆ  

ಇತ್ತ ಮುಖ್ಯಯಾಜಕರೂ ಉಚ್ಛನ್ಯಾಯಸಭೆಯ ಸದಸ್ಯರೆಲ್ಲರೂ ಯೇಸುವನ್ನು ಮರಣದಂಡನೆಗೆ ಗುರಿಪಡಿಸುವ ಸಲುವಾಗಿ ಸುಳ್ಳುಸಾಕ್ಷಿಯನ್ನು ಹುಡುಕುತ್ತಿದ್ದರು.


ಬೆಳಗಾಯಿತು. ಎಲ್ಲ ಮುಖ್ಯಯಾಜಕರೂ ಜನರ ಪ್ರಮುಖರೂ ಸೇರಿ ಯೇಸುವನ್ನು ಕೊಲ್ಲಿಸುವುದಕ್ಕೆ ಸಮಾಲೋಚನೆಮಾಡಿದರು.


ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II


ಇವು ನಜರೇತಿನ ಯೇಸುವಿಗೆ ಸಂಬಂಧಪಟ್ಟ ವಿಷಯಗಳು. ಸ್ನಾನದೀಕ್ಷೆಯನ್ನು ಮಾಡಿಸಿಕೊಳ್ಳಬೇಕೆಂದು ಯೊವಾನ್ನನು ಬೋಧಿಸಿದ ನಂತರ, ಯೇಸು ತಮ್ಮ ಸೇವಾವೃತ್ತಿಯನ್ನು ಗಲಿಲೇಯದಲ್ಲಿ ಪ್ರಾರಂಭಿಸಿದರು. ಅವರು ಪವಿತ್ರಾತ್ಮರಿಂದಲೂ ದೈವಶಕ್ತಿಯಿಂದಲೂ ಅಭಿಷಿಕ್ತರಾಗಿದ್ದರು. ದೇವರು ತಮ್ಮೊಡನೆ ಇದ್ದುದರಿಂದ ಅವರು ಎಲ್ಲೆಡೆಯಲ್ಲೂ ಒಳಿತನ್ನು ಮಾಡುತ್ತಾ, ಪಿಶಾಚಿ ಪೀಡಿತರಾದವರನ್ನು ಸ್ವಸ್ಥಪಡಿಸುತ್ತಾ ಸಂಚರಿಸಿದರು.


ಸರ್ವೇಶ್ವರನ ಮುಂದೆ ನಿಲ್ಲಬಲ್ಲ ಜ್ಞಾನವಿಲ್ಲ, ವಿವೇಚನೆಯಿಲ್ಲ, ಆಲೋಚನೆಯಿಲ್ಲ.


ಇವನು ಮೊದಲು ತನ್ನ ಸಹೋದರ ಸಿಮೋನನನ್ನು ಕಂಡು, “ನಮಗೆ ‘ಮೆಸ್ಸೀಯ’ ಸಿಕ್ಕಿದ್ದಾರೆ,” ಎಂದು ತಿಳಿಸಿ


ಮರೆಯದಿರು ನಿನ್ನಾ ವಿರೋಧಿಗಳ ಗದ್ದಲವನು I ವೈರಿಯೆಬ್ಬಿಸುತ್ತಿರುವ ನಿರಂತರ ದೊಂಬಿಯನು II


ಕೂಡಿದರೊಂದಾಗಿ ರಾಜರುಗಳು, ದಾಳಿಮಾಡಬಂದರು I ನೋಡಿ ನಿಬ್ಬೆರಗಾದರು, ತಲ್ಲಣಗೊಂಡು ಓಡಿಹೋದರು II


ಎಂತಲೇ ವಿವೇಕಿಗಳಾಗಿರಿ, ರಾಜರುಗಳೇ, I ಬುದ್ಧಿವಾದಕೆ ಕಿವಿಗೊಡಿ, ದೇಶಾಧಿಪತಿಗಳೇ II


ದೇವರು ಕಳುಹಿಸಿದಾತನು ದೇವರ ಮಾತುಗಳನ್ನೇ ಆಡುತ್ತಾನೆ. ಏಕೆಂದರೆ ದೇವರು ಆತನಿಗೆ ಪವಿತ್ರಾತ್ಮ ಅವರನ್ನು ಪೂರ್ಣವಾಗಿ ಕೊಟ್ಟಿರುತ್ತಾರೆ.


“ನನ್ನ ದಾಸ ದಾವೀದನನು ಗುರುತಿಸಿರುವೆ I ಪವಿತ್ರ ತೈಲದಿಂದವನನು ಅಭಿಷೇಕಿಸಿರುವೆ II


ನೆನಪಿರಲಿ ಪ್ರಭು, ಶತ್ರು ನಿನಗೆ ಮಾಡಿದಪಮಾನ I ನಿನ್ನ ಪೂಜ್ಯ ನಾಮಕೆ ದುರುಳರು ಕಕ್ಕಿದ ದೂಷಣ II


ಬೆಳಿಗ್ಗೆಯೂ ಸ್ವಾಮಿಯ ತೇಜಸ್ಸು ನಿಮಗೆ ಕಾಣಬರುವುದು. ನೀವು ಸರ್ವೇಶ್ವರನ ವಿರುದ್ಧ ಗೊಣಗುಟ್ಟಿದ ಮಾತುಗಳು ಅವರಿಗೆ ಕೇಳಿಸಿವೆ. ನಾವು ಎಷ್ಟು ಮಾತ್ರದವರು ನೀವು ನಮ್ಮ ವಿರುದ್ಧ ಗೊಣಗುಟ್ಟಲು?” ಎಂದರು.


ನ್ಯಾಯನೀತಿಗಳನ್ನು ನೀನು ಪ್ರೀತಿಸಿದೆ ಅನ್ಯಾಯ, ಅಕ್ರಮಗಳನ್ನು ದ್ವೇಷಿಸಿದೆ. ಆದ್ದರಿಂದ ದೇವರು, ಹೌದು ನಿನ್ನ ದೇವರು ನಿನ್ನನ್ನು ನಿನ್ನ ಮಿತ್ರನಿಗಿಂತ ಮಿಗಿಲಾಗಿ ಸನ್ಮಾನಿಸಿ ಪರಮಾನಂದ ತೈಲದಿಂದ ಅಭಿಷೇಕಿಸಿದ್ದಾರೆ,” ಎಂದು ಹೇಳಿದ್ದಾರೆ.


ನನ್ನ ಮೇಲೆ ದ್ವೇಷ ಇದ್ದವನಿಗೆ ನನ್ನ ಪಿತನ ಮೇಲೆಯೂ ದ್ವೇಷ ಇದೆ.


ಅದೇ ಸಮಯಕ್ಕೆ ಸರಿಯಾಗಿ ಕೆಲವು ಮಂದಿ ಫರಿಸಾಯರು ಯೇಸುಸ್ವಾಮಿಯ ಬಳಿಗೆ ಬಂದು, “ಇಲ್ಲಿಂದ ಹೊರಟು ಹೋಗಿಬಿಡಿ, ಹೆರೋದನು ನಿಮ್ಮನ್ನು ಕೊಲ್ಲಬೇಕೆಂದಿದ್ದಾನೆ,” ಎಂದರು.


ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.


ನನ್ನ ಮೇಲಿದೆ ಸರ್ವೇಶ್ವರ ಸ್ವಾಮಿಯ ಆತ್ಮ; ನನಗೆ ಅಭಿಷೇಕಮಾಡಿ, ಕಳುಹಿಸಿಹನು ಆತ : ದೀನದಲಿತರಿಗೆ ಶುಭಸಂದೇಶ ಬೋಧಿಸಲೆಂದೆ ಮನನೊಂದವರನು ಸಂತೈಸಿ ಗುಣಪಡಿಸಲೆಂದೆ ಬಂಧಿತರಿಗೆ ಬಿಡುಗಡೆಯನು ಪ್ರಕಟಿಸಲೆಂದೆ; ಸೆರೆಯಾಳುಗಳಿಗೆ ಬಂಧವಿಮುಕ್ತಿಯಾಗುವುದನು,


ಬೆಂಬಲವಾಗಿ ನಿಂತಿಹನು ಪ್ರಭು ನಿನ್ನ ಹತ್ತಿರದಲೆ I ಸದೆಬಡಿವನು ಅರಸರನು ತನ್ನ ಪ್ರಕೋಪ ದಿನದಲೆ II


ಅವನು ನೆಲಕ್ಕುರುಳಿದನು. “ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿ ಅವನಿಗೆ ಕೇಳಿಸಿತು.


ಇತ್ತ ಮುಖ್ಯಯಾಜಕರು ಮತ್ತು ಪ್ರಜಾಪ್ರಮುಖರು ‘ಕಾಯಫ’ ಎಂಬ ಪ್ರಧಾನ ಯಾಜಕನ ಭವನದಲ್ಲಿ ಒಟ್ಟುಗೂಡಿದರು.


ಮೊವಾಬ್ಯ, ಹಗ್ರೀಯ, ಫಿಲಿಷ್ಟಿಯ, ಟೈರ್ ಜನರು I ಒಮ್ಮತದಿಂದಿವರೆಲ್ಲರು ಒಟ್ಟುಗೂಡಿಹರು I ನಿನ್ನ ವಿರುದ್ಧವಾಗಿ ಒಳಸಂಚು ಮಾಡಿಹರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು