Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 20:3 - ಕನ್ನಡ ಸತ್ಯವೇದವು C.L. Bible (BSI)

3 ನೆನಸಿಕೊಳ್ಳಲಾತ ನೀನರ್ಪಿಸಿದ ಕಾಣಿಕೆಗಳನು I ಒಲಿದು ಸ್ವೀಕರಿಸಲಿ, ನೀನಿತ್ತಾ ಯಜ್ಞಬಲಿಗಳನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನೀನು ಸಮರ್ಪಿಸಿದ ನೈವೇದ್ಯಗಳು ಆತನ ನೆನಪಿಗೆ ಬರಲಿ; ನೀನು ಮಾಡಿದ ಸರ್ವಾಂಗಹೋಮಗಳು ಆತನಿಗೆ ಮೆಚ್ಚಿಕೆಯಾಗಲಿ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನೀನು ಅರ್ಪಿಸಿದ ಕಾಣಿಕೆಗಳನ್ನೆಲ್ಲ ಆತನು ಜ್ಞಾಪಿಸಿಕೊಳ್ಳಲಿ. ನಿನ್ನ ಯಜ್ಞಗಳನ್ನೆಲ್ಲ ಆತನು ಸ್ವೀಕರಿಸಿಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಮ್ಮ ಯಜ್ಞಾರ್ಪಣೆಗಳನ್ನೆಲ್ಲಾ ಜ್ಞಾಪಕಮಾಡಿಕೊಂಡು, ನಿಮ್ಮ ದಹನಬಲಿಗಳನ್ನು ಸ್ವೀಕರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 20:3
11 ತಿಳಿವುಗಳ ಹೋಲಿಕೆ  

ಸೂಕ್ತ ಬಲಿಗಳಿಂದಾಗ ನಿನ್ನನೊಲಿಸುವರು I ವೇದಿಕೆ ಮೇಲೆ ಯಜ್ಞಪಶುಗಳನು ಅರ್ಪಿಸುವರು II


ಕೊರ್ನೇಲಿಯನು ಭಯದಿಂದ ದೇವದೂತನನ್ನು ದಿಟ್ಟಿಸಿನೋಡುತ್ತಾ, “ಏನು ಸ್ವಾಮಿ?” ಎಂದನು. ಅದಕ್ಕೆ ದೇವದೂತನು, “ನಿನ್ನ ಪ್ರಾರ್ಥನೆ ಮತ್ತು ದಾನಧರ್ಮ ದೇವರನ್ನು ಮುಟ್ಟಿವೆ. ಅವರು ನಿನ್ನನ್ನು ಮೆಚ್ಚಿದ್ದಾರೆ; ನಿನ್ನ ಕೋರಿಕೆಗಳನ್ನು ಈಡೇರಿಸಲಿದ್ದಾರೆ.


ಸೊಲೊಮೋನನು ತನ್ನ ಪ್ರಾರ್ಥನೆಯನ್ನು ಮುಗಿಸಿದ ಕೂಡಲೆ ಆಕಾಶದಿಂದ ಬೆಂಕಿ ಇಳಿದು ಬಂದು ದಹನಬಲಿದ್ರವ್ಯಗಳನ್ನೂ ಬಲಿಮಾಂಸವನ್ನೂ ದಹಿಸಿಬಿಟ್ಟಿತು; ಸರ್ವೇಶ್ವರನ ತೇಜಸ್ಸು ಆಲಯದಲ್ಲಿ ತುಂಬಿಕೊಂಡಿತು.


ಅಂತೆಯೇ, ಹೇಬೆಲನು ತನ್ನ ಹಿಂಡಿನಿಂದ ಚೊಚ್ಚಲ ಕುರಿಗಳನ್ನು ಕಾಣಿಕೆಯಾಗಿ ತಂದು ಅವುಗಳ ಕೊಬ್ಬನ್ನು ಸಮರ್ಪಿಸಿದನು.


ನೀವೂ ಸಹ ಸಜೀವ ಶಿಲೆಗಳಾಗಿದ್ದೀರಿ; ಆಧ್ಯಾತ್ಮಿಕ ದೇವಾಲಯವನ್ನು ನಿರ್ಮಿಸಲು ನಿಮ್ಮನ್ನೇ ಅರ್ಪಿಸಿಕೊಳ್ಳಿ. ಆ ದೇವಾಲಯದಲ್ಲೇ ಯೇಸುಕ್ರಿಸ್ತರ ಮುಖಾಂತರ ದೇವರಿಗೆ ಮೆಚ್ಚುಗೆಯಾಗಿರುವ ಆಧ್ಯಾತ್ಮಿಕ ಬಲಿಗಳನ್ನು ಸಮರ್ಪಿಸುವ ಪವಿತ್ರ ಯಾಜಕವರ್ಗದವರು ನೀವಾಗಿರುವಿರಿ.


ಕ್ರಿಸ್ತಯೇಸು ನಮ್ಮನ್ನು ಪ್ರೀತಿಸಿ ನಮಗೋಸ್ಕರ ತಮ್ಮನ್ನೇ ಸಮರ್ಪಿಸಿದರು. ದೇವರಿಗೆ ಸುಗಂಧ ಕಾಣಿಕೆಯನ್ನಾಗಿಯೂ ಬಲಿಯನ್ನಾಗಿಯೂ ಅರ್ಪಿಸಿದರು. ಅಂತೆಯೇ, ನೀವೂ ಪ್ರೀತಿಯಿಂದ ಬಾಳಿರಿ.


ನಿನ್ನಲ್ಲಿ ಕೂಡುವುವು ಕೇದಾರಿನ ಸಕಲ ಮಂದೆಗಳು ಬಲಿಯರ್ಪಣೆಗೊದಗುವುವು ನೆಬಾಯೋತಿನ ಟಗರುಗಳು. ಏರುವುವು ನನಗೆ ಸಮರ್ಪಕವಾದ ಹೋಮವಾಗಿ ಬಲಿಪೀಠವನು. ಚಂದಗೊಳಿಸುವೆನು ನನ್ನ ಸುಂದರವಾದ ಆಲಯವನು.


ಅಲ್ಲಿ ಸರ್ವೇಶ್ವರಸ್ವಾಮಿಗಾಗಿ ಬಲಿಪೀಠವನ್ನು ಕಟ್ಟಿಸಿದನು. ಅದರ ಮೇಲೆ ದಹನಬಲಿಗಳನ್ನೂ ಶಾಂತಿಸಮಾಧಾನ ಬಲಿಗಳನ್ನೂ ಅರ್ಪಿಸಿ ಸರ್ವೇಶ್ವರನನ್ನು ಪ್ರಾರ್ಥಿಸಿದನು. ಸರ್ವೇಶ್ವರ ಅವನ ಮೊರೆಯನ್ನು ಆಲಿಸಿ, ಆಕಾಶದಿಂದ ಬಲಿಪೀಠದ ಮೇಲೆ ಬೆಂಕಿಯನ್ನು ಬರಮಾಡಿ,


ಸರ್ವೇಶ್ವರನ ಸನ್ನಿಧಿಯಿಂದ ಅಗ್ನಿ ಹೊರಟು ಬಲಿಪೀಠದ ಮೇಲಿದ್ದ ದಹನಬಲಿದ್ರವ್ಯವನ್ನೂ, ಕೊಬ್ಬನ್ನೂ ದಹಿಸಿಬಿಟ್ಟಿತು. ಜನರೆಲ್ಲರು ಅದನ್ನು ಕಂಡು ಜಯ ಜಯಕಾರ ಮಾಡಿದರು; ಅಡ್ಡಬಿದ್ದು ನಮಸ್ಕರಿಸಿದರು.


ಸಿಯೋನಿನಲ್ಲಿರುವ ಪ್ರಭು ನಿನ್ನನು ಆಶೀರ್ವದಿಸಲಿ I ಜೆರುಸಲೇಮಿನ ಏಳ್ಗೆಯನು ಕಾಣು ಇಡೀ ಜೀವಮಾನದಲಿ II


ಹರಸಲಿ ಸಿಯೋನಿನಿಂದ ನಿಮ್ಮನು I ಭೂಮ್ಯಾಕಾಶಗಳ ಸೃಜಿಸಿದಾತನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು