Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 20:5 - ಕನ್ನಡ ಸತ್ಯವೇದವು C.L. Bible (BSI)

5 ಜಯಘೋಷ ಮಾಡುವೆವು, ನಿನ್ನ ಗೆಲುವಿನ ನಿಮಿತ್ತ I ಧ್ವಜ ಹಾರಿಪೆವು, ಎಮ್ಮ ದೇವನ ನಾಮದ ನಿಮಿತ್ತ I ನಿನ್ನ ಕೋರಿಕೆಗಳೆಲ್ಲವನು, ಕೈಗೂಡಿಸಲಿ ಆತ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನಿನ್ನ ಜಯದಲ್ಲಿ ಉತ್ಸಾಹಧ್ವನಿ ಮಾಡುವೆವು; ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು. ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ನಿನ್ನ ಜಯದಲ್ಲಿ ಉತ್ಸಾಹಧ್ವನಿಮಾಡುವೆವು; ನಮ್ಮ ದೇವರ ಹೆಸರಿನಲ್ಲಿ ಧ್ವಜ ಎತ್ತುವೆವು. ಯೆಹೋವನು ನಿನ್ನ ಎಲ್ಲಾ ವಿಜ್ಞಾಪನೆಗಳನ್ನು ನೆರವೇರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರು ನಿನಗೆ ಸಹಾಯಮಾಡುವಾಗ ಹರ್ಷಿಸುವೆವು. ಆತನ ಹೆಸರನ್ನು ಕೊಂಡಾಡೋಣ. ಯೆಹೋವನು ನಿನ್ನ ಕೋರಿಕೆಗಳನ್ನೆಲ್ಲ ನೆರವೇರಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಾವು ದೇವರ ಜಯದಲ್ಲಿ ಆನಂದ ಘೋಷಮಾಡಿ, ನಮ್ಮ ದೇವರ ಹೆಸರಿನಲ್ಲಿಯೇ ನಾವು ನಮ್ಮ ಧ್ವಜಗಳನ್ನು ಎತ್ತುವೆವು. ಯೆಹೋವ ದೇವರು ನಿಮ್ಮ ಬಿನ್ನಹಗಳನ್ನೆಲ್ಲಾ ಪೂರೈಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 20:5
19 ತಿಳಿವುಗಳ ಹೋಲಿಕೆ  

ಆ ಸ್ಥಳದಲ್ಲಿ ಮೋಶೆ ಒಂದು ಬಲಿಪೀಠವನ್ನು ಕಟ್ಟಿಸಿ ಅದಕ್ಕೆ, ‘ಯಾವ್ವೆನಿಸ್ಸಿ’ ಎಂದು ಹೆಸರಿಟ್ಟನು.


ಪರಾಜಯ ಪತಾಕೆಯ ಹರಿಸಿದೆ ನಿನಗಂಜಿ ನಡೆದವರಿಗೆ I ಅವರು ಹೆದರಿ ಓಡುವಂತೆ ಮಾಡಿದೆ ಬಿಲ್ಲು ಬಾಣಗಳಿಗೆ II


ಆಗ ಏಲಿ ಆಕೆಗೆ, “ಸಮಾಧಾನದಿಂದ ಹೋಗು. ಇಸ್ರಯೇಲಿನ ದೇವರು ನಿನ್ನ ಪ್ರಾರ್ಥನೆಯನ್ನು ಈಡೇರಿಸಲಿ,” ಎಂದನು.


ನಾನು ಪಡೆಯುವೆ ಸರ್ವೇಶ್ವರನಲ್ಲಿ ಪರಮಾನಂದ ಹಿರಿಹಿಗ್ಗುವುದು ನನ್ನ ದೇವರಲಿ ನನ್ನಾತ್ಮ. ಮದುವಣಿಗನಿಗೆ ಬಾಸಿಂಗವನು ತೊಡಿಸುವಂತೆ ವಧುವಿಗೆ ಆಭರಣಗಳಿಂದ ಅಲಂಕರಿಸುವಂತೆ ಹೊದಿಸಿಹನಾತ ನನಗೆ ಮುಕ್ತಿಯೆಂಬ ವಸ್ತ್ರವನು ತೊಡಿಸಿಹನು ನನಗೆ ನೀತಿಯೆಂಬ ನಿಲುವಂಗಿಯನು.


ಇದು ನೆರವೇರಿದಾಗ ಜನರು : “ಇವರೇ ನಮ್ಮ ದೇವರು; ನಮ್ಮನ್ನು ರಕ್ಷಿಸುವರೆಂದು ಇವರನ್ನೇ ನೆಚ್ಚಿಕೊಂಡಿದ್ದೆವು ಇವರೇ ಸರ್ವೇಶ್ವರ; ಇವರನ್ನೇ ನೆಚ್ಚಿಕೊಂಡಿದ್ದೆವು. ಇವರು ನೀಡುವ ರಕ್ಷಣೆಯಲ್ಲಿ ಆನಂದಿಸೋಣ !” ಎಂದು ಹೇಳಿಕೊಳ್ಳುವರು.


“ಎನ್ನ ಮನ ಮಾಡುತ್ತಿದೆ ಸರ್ವೇಶ್ವರನ ಸ್ತುತಿ I ಉಲ್ಲಾಸಿಸುತ್ತಿದೆ ಮುಕ್ತಿದಾತ ದೇವನಲಿ II


ಜಯಘೋಷ, ಹರ್ಷಸುನಾದ ಸಜ್ಜನರ ಬಿಡಾರದಿಂದ I “ಪರಾಕ್ರಮ, ಪ್ರದರ್ಶನ ಪ್ರಭುವಿನ ಬಲಗೈಯಿಂದ II


ಆಗೆನ್ನ ಮನವು ಆನಂದಗೊಳ್ಳುವುದು ಪ್ರಭುವಿನಲಿ I ಆಹ್ಲಾದಗೊಳ್ಳುವುದು ಆತನಿತ್ತಾ ರಕ್ಷಣೆಯಲಿ II


ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ I ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ II


ಆಗ ಸಿಯೋನ್ ನಗರಿಯ ದ್ವಾರದಲೆ ನಿಲ್ಲುವೆನು I ನಿನ್ನ ಗುಣಾತಿಶಯಗಳನು ಪ್ರಸಿದ್ಧಪಡಿಸುವೆನು I ನೀನಿತ್ತ ಮುಕ್ತಿಗಾಗಿ ಆನಂದಗೊಳ್ಳುವೆನು II


ಸಂತೋಷಿಸುವೆ ನಾನು ಸರ್ವೇಶ್ವರನಲಿ ಆನಂದಿಸುವೆ ನನ್ನ ಉದ್ಧಾರಕ ದೇವನಲಿ.


ಅನ್ಯಜನಾಂಗಗಳು ತಮ್ಮ ತಮ್ಮ ದೇವರುಗಳ ನಾಮಸ್ಮರಣೆಮಾಡಿ, ಅದರಂತೆ ನಡೆದುಕೊಳ್ಳುತ್ತಾರೆ. ನಾವಾದರೋ ನಮ್ಮ ದೇವರಾದ ಸರ್ವೇಶ್ವರಸ್ವಾಮಿಯ ನಾಮವನ್ನು ಸ್ಮರಿಸಿ ಅದಕ್ಕನುಗುಣವಾಗಿ ಸದಾಕಾಲವೂ ನಡೆದುಕೊಳ್ಳುವೆವು.


ಆದರೂ ಅವುಗಳ ಧ್ವನಿರೇಖೆ ಹರಡಿದೆ ಬುವಿಯಾದ್ಯಂತ I ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ II


ಆ ದಿನದಂದು ಜೆಸ್ಸೆಯನ ಸಂತಾನದ ಕುಡಿ ಸರ್ವಜನಾಂಗಗಳಿಗೆ ಧ್ವಜಪ್ರಾಯವಾಗಿ ನಿಲ್ಲುವುದು. ಆತನನ್ನು ರಾಷ್ಟ್ರಗಳು ಆಶ್ರಯಿಸುವುವು; ವೈಭವದಿಂದಿರುವುದಾತನ ವಿಶ್ರಾಂತಿನಿಲಯವು.


ಅರಸಗೆ ಹರ್ಷವಾಯಿತು ಪ್ರಭು, ನೀ ತೋರಿದ ಪರಾಕ್ರಮಕ್ಕಾಗಿ I ಪರಮಾನಂದಗೊಂಡನವನು, ನೀನಿತ್ತ ವಿಜಯೋತ್ಸವಕ್ಕಾಗಿ II


ಅದಕ್ಕೆ ದಾವೀದನು, “ನೀನು ಈಟಿ, ಕತ್ತಿ, ಭರ್ಜಿಗಳೊಡನೆ ನನ್ನ ಬಳಿಗೆ ಬರುತ್ತಿರುವೆ; ನೀನು ಹೀಯಾಳಿಸಿದ ಸೇನಾಧೀಶ್ವರರು ಹಾಗು ಇಸ್ರಯೇಲ್ ಯೋಧರ ದೇವರು ಆದಂಥ ಸರ್ವೇಶ್ವರನ ನಾಮದೊಡನೆ ನಾನು ನಿನ್ನ ಬಳಿಗೆ ಬರುತ್ತಿದ್ದೇನೆ.


ನೀನಾತನನು ಸ್ವಾಗತಿಸಿದೆ ಶುಭಾಶಯದೊಂದಿಗೆ I ಚಿನ್ನದ ಕಿರೀಟವನು ಮುಡಿಸಿದೆ ಆತನ ಶಿರಸ್ಸಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು