Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 21:11 - ಕನ್ನಡ ಸತ್ಯವೇದವು C.L. Bible (BSI)

11 ತಂತ್ರೋಪಾಯಗಳ ಕಲ್ಪಿಸಿದರೂ ನಡೆಯದು I ಕೇಡನು ನಿನಗೆ ಬಗೆದರೂ ಅದು ಕೈಗೂಡದು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ತಂತ್ರೋಪಾಯಗಳನ್ನು ಕಲ್ಪಿಸಿ, ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ತಂತ್ರೋಪಾಯಗಳನ್ನು ಕಲ್ಪಿಸಿ ನಿನಗೆ ಕೇಡನ್ನು ಮಾಡಬೇಕೆಂದು ಆಲೋಚಿಸಿದರೂ ಅದು ನಡೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯಾಕೆಂದರೆ, ಅವರು ನಿನಗೆ ವಿರೋಧವಾಗಿ ದುರಾಲೋಚನೆಗಳನ್ನು ಮಾಡಿದರು. ಅವರು ಕುತಂತ್ರಗಳನ್ನು ಮಾಡಿದರೂ ಯಶಸ್ವಿಯಾಗಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅವರು ನಿಮಗೆ ವಿರೋಧವಾಗಿ ಕೇಡನ್ನು ಯತ್ನಿಸಿದರು, ಅವರು ಕುಯುಕ್ತಿಯನ್ನು ಕಲ್ಪಿಸಿದರೂ ಅದು ಕೈಗೂಡದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 21:11
18 ತಿಳಿವುಗಳ ಹೋಲಿಕೆ  

ಸೊಕ್ಕಿನಿಂದ ಶೋಷಿಸುತಿಹರು ದಲಿತರನು ದುರುಳರು I ಸಿಕ್ಕಿಬೀಳಲಿ ತಾವೇ ಒಡ್ಡಿದ ಉರಿಲಿನೊಳವರು II


ದೊಂಬಿಯೇಳುವುದೇತಕೆ ಅನ್ಯದೇಶವಿದೇಶಗಳು? I ಕುತಂತ್ರ ಹೂಡುವುದೇಕೆ ಅನ್ಯಜಾತಿಜನಾಂಗಗಳು? II


ಜ್ಯೋತಿಷಿಗಳಿಂದ ತಾನು ವಂಚಿತನಾದೆ ಎಂದು ಅರಿತ ಹೆರೋದನು ರೋಷಾವೇಶಗೊಂಡನು. ಬೆತ್ಲೆಹೇಮಿಗೂ ಅದರ ಸುತ್ತಮುತ್ತಲಿಗೂ ಆಳುಗಳನ್ನು ಕಳುಹಿಸಿದನು. ತಾನು ಜ್ಯೋತಿಷಿಗಳಿಂದ ತಿಳಿದುಕೊಂಡಿದ್ದ ಕಾಲದ ಆಧಾರದ ಮೇಲೆ ಅಲ್ಲಿದ್ದ, ಎರಡು ವರ್ಷಗಳಿಗೆ ಮೀರದ, ಎಲ್ಲಾ ಗಂಡುಮಕ್ಕಳನ್ನು ಕೊಂದುಹಾಕಿಸಿದನು.


ನನಗೆ ವಿರುದ್ಧ ಜನರಾಡುವ ಗುಸುಗುಸು ಮಾತು ಕೇಳಿ ಬರುತಿದೆ I ಭಯಭೀತಿ ಎನ್ನನಾವರಿಸಿದೆ, ಒಳಸಂಚು, ಪ್ರಾಣಹರಣ ನಡೆಯುತಿವೆ II


ಅನಂತರ ಅವರನ್ನು ಬೆತ್ಲೆಹೇಮಿಗೆ ಕಳುಹಿಸಿಕೊಡುತ್ತಾ, “ನೀವು ಹೋಗಿ ಆ ಮಗುವನ್ನು ಚೆನ್ನಾಗಿ ಹುಡುಕಿರಿ; ಕಂಡಕೂಡಲೇ ನನಗೆ ಬಂದು ತಿಳಿಸಿರಿ. ನಾನೂ ಹೋಗಿ ಆ ಮಗುವನ್ನು ಆರಾಧಿಸಬೇಕು,” ಎಂದು ಹೇಳಿದನು.


ಇಂತೆನ್ನುತಿಹರು : “ಬನ್ನಿ ಸಂಹರಿಸೋಣ I ಆತನ ಜನಾಂಗ ಉಳಿಯದಂತೆ ಮಾಡೋಣ I ಇಸ್ರಯೇಲೆಂಬ ನಾಮವನಳಿಸಿಬಿಡೋಣ” II


ಸಮಾಧಾನಕರವಲ್ಲ ಅವರಾಡುವ ನುಡಿಗಳು I ಮುಗ್ಧನಾಡಿಗರನು ಮೋಸಗೊಳಿಸುವಾ ಮಾತುಗಳು II


ಆದರೆ ಜನಸಮೂಹಕ್ಕೆ ಭಯಪಟ್ಟರು. ಏಕೆಂದರೆ, ಜನರು ಯೇಸುವನ್ನು ಪ್ರವಾದಿ ಎಂದು ಸನ್ಮಾನಿಸುತ್ತಿದ್ದರು.


ಅಲ್ಲಿ ದೇವರು ನನಗೆ, “ನರಪುತ್ರನೇ, ಪಟ್ಟಣದಲ್ಲಿ ಕುತಂತ್ರಗಳನ್ನು ಕಲ್ಪಿಸಿ ದುರಾಲೋಚನೆಯನ್ನು ಹೇಳಿಕೊಡುವವರು ಈ ಜನರೇ;


ನಿರ್ಮೂಲವಾಗಲಿ ಅವನಾ ಪೀಳಿಗೆ I ನಿರ್ನಾಮವಾಗಲಿ ಮರುವಂಶದೊಳಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು