Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 21:7 - ಕನ್ನಡ ಸತ್ಯವೇದವು C.L. Bible (BSI)

7 ಅರಸನಿಗಿದೆ ಭರವಸೆ ಪ್ರಭುವಿನಲಿ I ಅವನಚಲನು, ಪರಾತ್ಪರನ ಕೃಪೆಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಪರಾತ್ಪರನಾದ ದೇವರ ಶಾಶ್ವತ ಪ್ರೀತಿಯ ನಿಮಿತ್ತ ಅವನು ಕದಲುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ಅರಸನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಪರಾತ್ಪರನ ಕೃಪೆಯ ದೆಸೆಯಿಂದ ಅವನು ಕದಲುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ರಾಜನು ಯೆಹೋವನಲ್ಲಿಯೇ ಭರವಸವಿಟ್ಟಿದ್ದಾನೆ; ಮಹೋನ್ನತನಾದ ದೇವರು ಅವನನ್ನು ನಿರಾಶೆಗೊಳಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಏಕೆಂದರೆ ಅರಸನು ಯೆಹೋವ ದೇವರಲ್ಲಿ ಭರವಸೆ ಇಡುತ್ತಾನೆ; ಮಹೋನ್ನತರ ಒಡಂಬಡಿಕೆಯ ಪ್ರೀತಿಯಿಂದ ಅರಸನು ಕದಲದೆ ಇರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 21:7
17 ತಿಳಿವುಗಳ ಹೋಲಿಕೆ  

ಇರಿಸಿಕೊಳ್ಳುವೆ ಪ್ರಭುವನು ಸತತ ನನ್ನೆದುರಿಗೆ I ಆತನಿರಲು ಬಲಕ್ಕೆ ನನಗೆಲ್ಲಿಯದು ಹೆದರಿಕೆ II


ನಾನಾತನಿಗೆ, ‘ನೀನೇ ನನ್ನ ರಕ್ಷಕನೂ I ದುರ್ಗವೂ ನಾ ನಂಬಿದ ದೇವನು’ ಎನ್ನುವೆನು II


ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II


ಪ್ರಭುವೇ ನನ್ನ ಕಲ್ಲುಕೋಟೆ, ನನಗೆ ವಿಮೋಚಕ I ಆತನೇ ನನ್ನ ದೇವ, ನನ್ನಾಶ್ರಯ ದುರ್ಗ I ಆತನೆನಗೆ ಗುರಾಣಿ, ಗಿರಿ, ರಕ್ಷಣಾಶೃಂಗ II


ಪರಾತ್ಪರನೇ, ಮಾಡುವೆನು ನಿನ್ನ ನಾಮಸ್ತುತಿ I ಹರ್ಷಾನಂದಗೊಳ್ವೆನು‍ ದೇವಾ, ನಿನ್ನಲ್ಲತಿ II


“ದೇವರಲ್ಲಿ ಭರವಸೆಯಿಡುವೆನು ನಾನು,” ಎಂದೂ “ಇಗೋ, ಇರುವೆವು ನಾನು ಮತ್ತು ದೇವರೆನಗಿತ್ತ ಕುವರರು,” ಎಂದು ಹೇಳಿದ್ದಾರೆ.


ಸಕಲ ರಾಷ್ಟ್ರ-ಕುಲ-ಭಾಷೆಗಳವರು ಅವನಿಗೆ ಸೇವೆ ಸಲ್ಲಿಸಲೆಂದು ಅವನಿಗೆ ದೊರೆತನ, ಘನತೆ, ರಾಜ್ಯತ್ವ ಇವುಗಳನ್ನು ಕೊಡಲಾಯಿತು. ಅವನ ಆಳ್ವಿಕೆಗೆ ಅಂತ್ಯವಿಲ್ಲ, ಅದು ಶಾಶ್ವತವಾದುದು, ಅವನ ರಾಜ್ಯ ಎಂದಿಗೂ ಅಳಿಯದು!


ಇದಲ್ಲದೆ ಜನರು ತಮ್ಮ ಗಂಡುಹೆಣ್ಣು ಮಕ್ಕಳಿಗಾಗಿ ಮನಸ್ಸಿನಲ್ಲಿ ಬಹಳವಾಗಿ ನೊಂದುಕೊಂಡರು. ಮಾತ್ರವಲ್ಲ, ದಾವೀದನನ್ನು ಕಲ್ಲೆಸೆದು ಕೊಲ್ಲಬೇಕೆಂದಿದ್ದರು. ಆದುದರಿಂದ ಅವನು ಬಲು ಇಕ್ಕಟ್ಟಿಗೆ ಸಿಕ್ಕಿಕೊಂಡಿದ್ದನು.


ದೇವರಲ್ಲಿ ಭರವಸೆಯಿಟ್ಟಿದ್ದ; ತಾನು ‘ದೇವರ ಪುತ್ರ’ ಎಂದು ಹೇಳಿಕೊಳ್ಳುತ್ತಿದ್ದ; ದೇವರಿಗೆ ಇಷ್ಟವಾದವನು ಇವನಾಗಿದ್ದರೆ ದೇವರೇ ಬಂದು ಇವನನ್ನು ಬಿಡುಗಡೆಮಾಡಲಿ,” ಎಂದು ಅಪಹಾಸ್ಯಮಾಡುತ್ತಿದ್ದರು.


ನಿನ್ನ ಗುಡಾರವಾಗಲಿ ನನಗೆ ನಿರಂತರ ಬಿಡಾರ I ನಿನ್ನ ರೆಕ್ಕೆಗಳ ಮರೆಯೆ ನನಗೆ ಆಶ್ರಯದಾಗರ II


ನಿನ್ನಚಲ ಪ್ರೀತಿಯಲ್ಲಿದೆ ನನಗಿದೆ ವಿಶ್ವಾಸ I ನಿನ್ನ ರಕ್ಷಣೆ ತಂದಿದೆ ನನ್ನ ಮನಕೆ ಹರುಷ II


ಕಟ್ಟಿಕೋ ಶೂರನೇ, ಪಟ್ಟಗತ್ತಿಯನು ಸೊಂಟಕೆ I ಸಂಭ್ರಮ,‍ ಶೋಭೆ, ಸಡಗರ ಸಲ್ಲತಕ್ಕವು ನಿನಗೆ II


ಶಾಶ್ವತವಾಗಲಿ ಶ್ರೀನಾಮ ಆತನಿಗೆ I ಬೆಳಗಲಿ ಆತನ ಕೀರ್ತಿ ಸೂರ್ಯನಿರುವವರೆಗೆ I ಆತನಾಶೀರ್ವಾದ ಕೋರಲಿ ಸರ್ವರು ತಮಗೆ I ಶುಭವೆನ್ನಲಿ ಸಕಲ ರಾಷ್ಟ್ರಗಳು ಆತನಿಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು