Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:1 - ಕನ್ನಡ ಸತ್ಯವೇದವು C.L. Bible (BSI)

1 ದೇವಾ, ಓ ಎನ್ನ ದೇವಾ, ಏಕೆನ್ನ ಕೈಬಿಟ್ಟೆ? I ಕಿವಿಗೊಡದೆ ಏಕೆ ದೂರವಾಗಿಬಿಟ್ಟೆ? II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಏಕೆ ನನಗೆ ಸಹಾಯಮಾಡದೆಯೂ, ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ನನ್ನ ದೇವರೇ, ನನ್ನ ದೇವರೇ, ಯಾಕೆ ನನ್ನನ್ನು ಕೈಬಿಟ್ಟಿದ್ದೀ? ನೀನು ಯಾಕೆ ನನಗೆ ಸಹಾಯಮಾಡದೆಯೂ ನನ್ನ ಕೂಗನ್ನು ಕೇಳದೆಯೂ ದೂರವಾಗಿದ್ದೀ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನನ್ನ ದೇವರೇ, ನನ್ನ ದೇವರೇ! ಯಾಕೆ ನನ್ನನ್ನು ತೊರೆದಿರುವೆ? ನನ್ನನ್ನು ರಕ್ಷಿಸದೆ ಯಾಕೆ ಬಹುದೂರವಾಗಿರುವೆ! ಸಹಾಯಕ್ಕಾಗಿ ನಾನು ಗೋಳಾಡುತ್ತಿದ್ದರೂ ಕೇಳದೆ ಯಾಕೆ ಬಹದೂರವಾಗಿರುವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ನನ್ನ ದೇವರೇ, ನನ್ನ ದೇವರೇ, ಏಕೆ ನನ್ನನ್ನು ಕೈಬಿಟ್ಟಿದ್ದೀರಿ? ನನ್ನನ್ನು ರಕ್ಷಿಸದೆ ಏಕೆ ದೂರವಾಗಿದ್ದೀರಿ? ನನ್ನ ನರಳುವಿಕೆಯ ಮೊರೆಗೆ ಉತ್ತರ ಕೊಡದೆ ಏಕೆ ದೂರವಾಗಿದ್ದೀರಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:1
23 ತಿಳಿವುಗಳ ಹೋಲಿಕೆ  

ಮೂರನೆಯ ಗಂಟೆಯ ಸಮಯದಲ್ಲಿ, ಯೇಸುಸ್ವಾಮಿ: “ಎಲೋಹಿ, ಎಲೋಹಿ, ಲಮಾ ಸಬಕ್ತಾನಿ?” ಎಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿದ್ದೀರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.


ಸುಮಾರು ಮೂರು ಗಂಟೆಯ ಸಮಯದಲ್ಲಿ ಯೇಸುಸ್ವಾಮಿ, “ಏಲೀ, ಏಲೀ, ಲಮಾ ಸಬಕ್ತಾನಿ?” ಅಂದರೆ, “ನನ್ನ ದೇವರೇ, ನನ್ನ ದೇವರೇ, ನನ್ನನ್ನೇಕೆ ಕೈಬಿಟ್ಟಿರಿ?” ಎಂದು ಗಟ್ಟಿಯಾಗಿ ಕೂಗಿಕೊಂಡರು.


ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ಮುತ್ತಿದೆ ದುರುಳರ ಹಿಂಡು; ಸುತ್ತಿವೆ ಕುನ್ನಿಗಳು I ಕುತ್ತಿವೆ ನನ್ನ ಕೈಗಳು ಮೇಣ್ ಕಾಲುಗಳು II


ನಿಟ್ಟುಸಿರೇ ನನ್ನ ಮುಂದಿರುವ ಊಟ ಜಲಧಾರೆಯಂತಿದೆ ನನ್ನ ನರಳಾಟ.


ತರುವಾಯ ಯೇಸುಸ್ವಾಮಿ, “ನಾನು ನಿಮ್ಮೊಡನೆ ಇದ್ದಾಗಲೇ ನಿಮಗೆ ತಿಳಿಸಿದ ವಿಷಯ ಇದು: ಮೋಶೆಯ ನಿಯಮದಲ್ಲೂ ಪ್ರವಾದಿಗಳ ಗ್ರಂಥಗಳಲ್ಲೂ ಕೀರ್ತನೆಗಳಲ್ಲೂ ನನ್ನ ವಿಷಯವಾಗಿ ಬರೆದಿರುವುದೆಲ್ಲಾ ನೆರವೇರಲೇಬೇಕಾಗಿತ್ತು,” ಎಂದರು.


ನನ್ನಿಂದೇಕೆ ಪ್ರಭು, ಅಷ್ಟು ದೂರವಿರುವೆ? I ಕಷ್ಟಕಾಲದಲೇಕೆ ಕಣ್ಮರೆಯಾಗಿರುವೆ? II


ಹಣದಾಶೆಗೆ ಬಲಿಯಾಗಬೇಡಿ. ನಿಮಗೆ ಇರುವುದರಲ್ಲಿಯೇ ತೃಪ್ತರಾಗಿರಿ. “ಎಂದೆಂದಿಗೂ ನಾನು ನಿನ್ನ ಕೈಬಿಡಲಾರೆ; ತ್ಯಜಿಸಲಾರೆ,” ಎಂದು ದೇವರೇ ಹೇಳಿದ್ದಾರೆ.


ಸರ್ವೇಶ್ವರನ ದಯೆ ನಿಮ್ಮನ್ನು ಸ್ವಕೀಯ ಜನರನ್ನಾಗಿ ಆರಿಸಿಕೊಂಡ ಮೇಲೆ, ಅವರು ತಮ್ಮ ಮಹೋನ್ನತ ನಾಮದ ನಿಮಿತ್ತ, ನಿಮ್ಮನ್ನು ಖಂಡಿತವಾಗಿ ಕೈಬಿಡುವುದಿಲ್ಲ.


ದುರುಳರು ಅರುಗಲೇ ಇರೆ, ನೆರವಿಗಾರೂ ಇಲ್ಲ I ನನ್ನಿಂದ ನೀ ದೂರಸರಿವುದು ಸರಿಯಲ್ಲ II


“ಹಿಡಿಯಿರಿ ಬೆನ್ನಟ್ಟಿ, ದೇವನವನನ್ನು ಕೈಬಿಟ್ಟಿಹನು I ರಕ್ಷಿಸುವಂಥವರಾರು ಇನ್ನಿಲ್ಲ” ಎನ್ನುತಿಹರು II


ಬರಮಾಡುವೆನು ಮುಕ್ತಿಯನು ಹತ್ತಿರಕೆ ಅದಿನ್ನು ದೂರವಿರದು ನಿಮಗೆ. ತಡವಾಗದು ನಿಮಗೆ ನನ್ನ ರಕ್ಷಣೆ ಸಾಧಿಸುವೆನು ರಕ್ಷಣೆಯನ್ನು ಸಿಯೋನಿನಲೇ, ಬೀರುವೆನು ನನ್ನ ಮಹಿಮೆಯನ್ನು ಇಸ್ರಯೇಲ ಮೇಲೆ.”


ಜೋಮು ಹಿಡಿದಂತಿದೆ, ಜೀವ ಹಿಂಡಿದಂತಿದೆ I ಹೃದಯವೇದನೆಯಿಂದ ನರಳಾಡುತ್ತಿರುವೆ II


ಪ್ರಭುವು ನ್ಯಾಯಪ್ರಿಯನು, ಭಕ್ತಜನರ ಪರಿಪಾಲಕನು I ಚಿರವುಳಿಸುವನು ಇವರನು, ಅಳಿಸುವನು ದುರುಳರ ಪೀಳಿಗೆಯನು II


ನೀಡು ದೇವಾ ರಕ್ಷಣೆಯನು I ನಾ ನಿನಗೆ ಶರಣಾಗತನು II


ಕಡುಯಾತನೆಯಲ್ಲಿದ್ದ ಅವರು ಇನ್ನೂ ಶ್ರದ್ಧೆಯಿಂದ ಪ್ರಾರ್ಥಿಸಿದರು. ಅವರ ಬೆವರು ರಕ್ತದ ಹನಿಯಂತೆ ತೊಟ್ಟುತೊಟ್ಟಾಗಿ ನೆಲದ ಮೇಲೆ ಬೀಳುತ್ತಿತ್ತು.


ಗುರುಗುಟ್ಟುತ್ತೇವೆ ಕರಡಿಗಳಂತೆ, ಮುಲುಗುತ್ತೇವೆ ಪಾರಿವಾಳಗಳಂತೆ. ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಗದಿದೆ; ಜೀವೋದ್ಧಾರವನ್ನು, ನಿರೀಕ್ಷಿಸಿದರೂ ಅದು ನಮ್ಮಿಂದ ದೂರವಿದೆ.


ಪಾಪಿಗಳ ಸಮೇತ ಎನ್ನ ಪ್ರಾಣವನಳಿಸಬೇಡಯ್ಯಾ I ಕೊಲೆಪಾತಕರ ಸಮೇತ ಎನ್ನ ಜೀವ ತೆಗೆಯಬೇಡಯ್ಯಾ II


ಅದನ್ನು ಚೂರುಚೂರಾಗಿ ಮುರಿದು ಅದರ ಮೇಲೆ ಎಣ್ಣೆ ಹೊಯ್ದು ಕಾಣಿಕೆಯಾಗಿ ಕೊಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು