Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:12 - ಕನ್ನಡ ಸತ್ಯವೇದವು C.L. Bible (BSI)

12 ಸುತ್ತಿಕೊಂಡಿವೆಯೆನ್ನನು ಬಲವಂತ ಹೋರಿಗಳು I ಮುತ್ತಿಕೊಂಡಿವೆ ಬಾಷಾನಿನ ಹಲವು ಗೂಳಿಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

12 ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜನರು ನನ್ನನ್ನು ಸುತ್ತುಗಟ್ಟಿದ್ದಾರೆ; ಅವರು ಬಲಿಷ್ಠವಾದ ಹೋರಿಗಳಂತಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಬಹಳ ಹೋರಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವಾದ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:12
14 ತಿಳಿವುಗಳ ಹೋಲಿಕೆ  

ದಂಡಿಸು ಜಂಡು ಕಾಡುಮೃಗದಂಥಾ ನಾಡನು I ಗದರಿಸು ಹೋರಿ ದನಕುರಿಗಳಂಥಾ ನಾಡುಗಳನು II ಚದರಿಸು ಕಲಹಕಾಳಗ ಪ್ರಿಯ ಜನಾಂಗಗಳನು I ಅಡ್ಡಬೀಳಿಸು ನಿನಗೆ ಬೆಳ್ಳಿಗಟ್ಟಿ ತಂದವರನು II


“ಅಂತೆಯೇ, ನಿಮ್ಮ ಪರಮಪೂಜ್ಯದಾಸ ಯೇಸುವಿನ ವಿರುದ್ಧ ಹೆರೋದನು ಮತ್ತು ಪೊಂತ್ಸಿಯುಸ್ ಪಿಲಾತನು ಅನ್ಯಧರ್ಮದವರೊಡನೆ ಹಾಗೂ ಇಸ್ರಯೇಲಿನ ಜನರೊಡನೆ ಸೇರಿ ಈ ಪಟ್ಟಣದಲ್ಲೇ ಸಮಾಲೋಚನೆ ಮಾಡಿದರು.


ಬೆಳಗಾಯಿತು. ಎಲ್ಲ ಮುಖ್ಯಯಾಜಕರೂ ಜನರ ಪ್ರಮುಖರೂ ಸೇರಿ ಯೇಸುವನ್ನು ಕೊಲ್ಲಿಸುವುದಕ್ಕೆ ಸಮಾಲೋಚನೆಮಾಡಿದರು.


ಟಗರು, ಕುರಿ, ಹೋತ, ಹೋರಿ, ಅಂತು ಬಾಷಾನಿನ ಕೊಬ್ಬಿದ ಪಶುಗಳು, ಅಂದರೆ ಬಲಿಷ್ಠರು, ಭೂಪತಿಗಳು ಇವರ ಮಾಂಸ ಹಾಗೂ ರಕ್ತ ನಿಮಗೆ ಸಿಕ್ಕುವುವು.


“ನನ್ನ ಸೊತ್ತಾದವರನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುತ್ತಿದ್ದೀರಿ! ಕಣ ತುಳಿಯುವ ಕಡಸಿನ ಹಾಗೆ ಕುಣಿದಾಡುತ್ತಿದ್ದೀರಿ. ಕೊಬ್ಬಿದ ಕುದುರೆಗಳಂತೆ ಕೆನೆಯುತ್ತಿದ್ದೀರಿ.


ಕಾಡುಕೋಣಗಳಂತೆ, ಹೋರಿಗೂಳಿಗಳಂತೆ, ಈ ಯಜ್ಞಪಶುಗಳು ಬೀಳುವುವು; ನಾಡು ರಕ್ತದಿಂದು ತೊಯಿದಿರುವುದು, ಅಲ್ಲಿನ ದೂಳು ಕೊಬ್ಬಿನಿಂದ ಜಿಡ್ಡಾಗಿರುವುದು.


ಸ್ವಾಮಿ ದೇವಾ, ನಾನೀಪರಿ ನಡೆದಿರೆ : ಅಕ್ರಮಕ್ಕೆ ಕೈ ಹಾಕಿರೆ I ಮಿತ್ರದ್ರೋಹಿ ಆಗಿರೆ, ನಿಷ್ಕಾರಣ ಶತ್ರು ಸುಲಿಗೆ ಮಾಡಿರೆ II


ನೀನೇ ನೋಡಿರುವೆ ಪ್ರಭು, ಇನ್ನು ಸುಮ್ಮನಿರಬೇಡ I ನನ್ನೊಡೆಯಾ, ನನಗಿನ್ನಾದರು ದೂರವಾಗಿರಬೇಡ II


ಓ ಪ್ರಭುವೇ, ನನ್ನುದ್ಧಾರಕನೆ, I ನನಗೆ ನೆರವಾಗಲು ಬಾ ಬೇಗನೆ II


ನನ್ನ ಕೊಲೆಗೆಂದು ಯತ್ನಿಸುವವರು ನಾಚಿ ಗಲಿಬಿಲಿಗೊಳ್ಳಲಿ I ನನ್ನಳಿವನು ಕೋರುವಂಥವರು ಲಜ್ಜೆಯಿಂದ ಹಿಂದಿರುಗಲಿ II


ಹತ್ತಿರ ಬಂದೆನ್ನ ಉದ್ಧರಿಸಯ್ಯಾ I ಶತ್ರುಗಳ ಕೈಯಿಂದ ರಕ್ಷಿಸಯ್ಯಾ II


ಪಡಲಿ ಮಾನಭಂಗ ನನ್ನ ಹತ್ಯವನು ಕೋರುವವರು I ನಾಚಿ ಓಡಲಿ ಹಿಂದಕೆ ನನಗಾಪತ್ತನು ಬಯಸುವವರು I


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು