Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:15 - ಕನ್ನಡ ಸತ್ಯವೇದವು C.L. Bible (BSI)

15 ಎನ್ನ ಗೋಣು ಒಣಗಿಹೋಗಿದೆ ಒಡೆದ ಮಡಕೆಯಂತೆ I ಅಂಗುಳಕೆ ಜಿಹ್ವೆ ಅಂಟಿದೆ; ಮಣ್ಣಿಗೆನ್ನ ಸೇರಿಸಿದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಬಾಯಿಯ ಅಂಗಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ನನ್ನ ಶಕ್ತಿಯು ಬೋಕಿಯ ಹಾಗೆ ಒಣಗಿಹೋಗಿದೆ; ನನ್ನ ನಾಲಿಗೆಯು ಅಂಗುಳಕ್ಕೆ ಹತ್ತಿಹೋಗಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸುತ್ತೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ನನ್ನ ಶಕ್ತಿಯು ಒಡೆದುಹೋದ ಮಡಿಕೆಯ ಒಣ ತುಂಡಿನಂತಿದೆ. ನನ್ನ ನಾಲಿಗೆಯು ಬಾಯಿ ಮೇಲ್ಭಾಗಕ್ಕೆ ಅಂಟಿಕೊಳ್ಳುತ್ತಿದೆ. ನೀನು ನನ್ನನ್ನು ಮಣ್ಣಿಗೆ ಸೇರಿಸಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ನನ್ನ ಬಾಯಿ ಬೋಕಿಯ ಹಾಗೆ ಒಣಗಿಹೋಗಿದೆ, ನನ್ನ ನಾಲಿಗೆ ಅಂಗಳಕ್ಕೆ ಹತ್ತಿದೆ, ನೀವು ನನ್ನನ್ನು ಮಣ್ಣಿಗೆ ಸೇರಿಸುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:15
22 ತಿಳಿವುಗಳ ಹೋಲಿಕೆ  

ಇದಾದ ಮೇಲೆ ಯೇಸು ಸ್ವಾಮಿ ನೆರವೇರಬೇಕಾದುದೆಲ್ಲವೂ ನೆರವೇರಿದೆ ಎಂದು ತಿಳಿದು ಪವಿತ್ರಗ್ರಂಥದಲ್ಲಿ ಬರೆದುದು ಈಡೇರುವಂತೆ, “ನನಗೆ ದಾಹವಾಗಿದೆ,” ಎಂದು ನುಡಿದರು.


ಕಾಯ್ದು ಕಾಯ್ದು ಕಣ್ಣು ಗುಳಿಬಿದ್ದಿದೆ ದೇವಾ, ನಿನಗಾಗಿ I ಗಂಟಲು ಒಣಗಿದೆ, ಜೀವ ಸೊರಗಿದೆ, ನಿನ್ನ ಕೂಗಿ ಕೂಗಿ II


ಎಂತಲೆ ನೀಡುವೆ ಇವನಿಗೆ ಪಾಲನ್ನು ದೊಡ್ಡವರ ಸಂಗಡ ಹಂಚಿಕೊಳ್ಳುವನು ಸೂರೆಯನ್ನು ಬಲಿಷ್ಠರ ಸಂಗಡ ಏಕೆನೆ ಪ್ರಾಣವನ್ನೆ ಧಾರೆಯೆರೆದು ಮರಣಹೊಂದಿದ ದ್ರೋಹಿಗಳೊಂದಿಗೆ ತನ್ನನೆ ಒಂದಾಗಿ ಎಣಿಸಿಕೊಂಡ. ಅನೇಕರ ಪಾಪವನ್ನು ಹೊತ್ತು ಅವರಿಗಾಗಿ ಪ್ರಾರ್ಥಿಸಿದ.


ಹಸಿದ ನನಗೆ ವಿಷಬೆರೆತ ಆಹಾರವಿತ್ತರಯ್ಯಾ I ಬಾಯಾರಿದೆನಗೆ ಕಹಿ ಕಾಡಿಯನು ಕೊಟ್ಟರಯ್ಯಾ II


ಬಡಿದುಕೊಳ್ಳುತಿದೆ ಹೃದಯ, ಹುದುಗಿಹೋಗಿದೆ ಚೇತನ I ಮಬ್ಬಾಗಿ ಹೋಗಿದೆ ನನ್ನೆರಡು ನಯನಸಾಧನ II


ನಾನು ಪಡೆದುಕೊಂಡದ್ದನ್ನು ಮುಖ್ಯವಾದುದು ಎಂದೆಣಿಸಿ ನಿಮಗೆ ಒಪ್ಪಿಸಿದ್ದೇನೆ. ಅದು ಯಾವುದೆಂದರೆ, ಪವಿತ್ರಗ್ರಂಥದಲ್ಲಿ ಹೇಳಿರುವ ಪ್ರಕಾರ ಕ್ರಿಸ್ತಯೇಸು ನಮ್ಮ ಪಾಪಗಳ ಪರಿಹಾರಕ್ಕಾಗಿ ಪ್ರಾಣತ್ಯಾಗ ಮಾಡಿದರು.


ತಲ್ಲಣಗೊಳ್ಳುವುವು ನೀ ಮುಖ ಮರೆಮಾಡಿಕೊಳ್ಳಲು I ಮಣ್ಣುಪಾಲಾಗುವುವು ನೀನವುಗಳ ಉಸಿರನಡಗಿಸಲು II


ಯೇಸುಸ್ವಾಮಿ ಮತ್ತೊಮ್ಮೆ ಗಟ್ಟಿಯಾಗಿ ಕೂಗಿ ಅಸುನೀಗಿದರು.


ಹರ್ಷ ಹೃದಯ ಒಳ್ಳೆಯ ಔಷಧ; ಕುಗ್ಗಿದ ಮನದಿಂದ ಅಸ್ಥಿಪಂಜರ.


ಗಣ್ಯ ವ್ಯಕ್ತಿಗಳೂ ನಿಶ್ಯಬ್ದವಾಗುತ್ತಿದ್ದರು ಅವರ ನಾಲಿಗೆ ಅಂಗುಳಕ್ಕೆ ಅಂಟಿರುತ್ತಿತ್ತು.


ಸತ್ತು ಧೂಳಿ ಮಣ್ಣಿನಲ್ಲಿ ‘ದೀರ್ಘನಿದ್ರೆ’ಮಾಡುತ್ತಿರುವ ಅನೇಕರು ಏಳುವರು. ಎಚ್ಚೆತ್ತವರಲ್ಲಿ ಕೆಲವರು ನಿತ್ಯಜೀವವನ್ನು ಅನುಭವಿಸುವರು; ಕೆಲವರು ತಿರಸ್ಕೃತರಾಗಿ ನಿತ್ಯ ನಿಂದನೆಗೆ ಗುರಿಯಾಗುವರು.


ದಾಹದಿಂದ ಸೇದುಹೋಗಿದೆ ಮೊಲೆಕೂಸಿನ ನಾಲಿಗೆ ಅನ್ನವಿಕ್ಕುವರಾರೂ ಇಲ್ಲ, ಹಂಬಲಿಸುವ ಆ ಹಸುಳೆಗಳಿಗೆ.


“ನನ್ನ ಪ್ರಾಣ ನಷ್ಟದಿಂದ ನಿನಗೇನು ಫಲ? I ಸಮಾಧಿಗೆ ನಾನಿಳಿದರೆ ನಿನಗೇನು ಲಾಭ?” II “ಸತ್ತವರ ಬೂದಿ ನಿನ್ನ ಸ್ತುತಿಸಬಲ್ಲುದೆ? I ನಿನ್ನ ಸತ್ಯತೆಯನ್ನದು ಸಾರಲು ಬಲ್ಲುದೆ?” II


ಸಮಸ್ತಜನರು ಒಟ್ಟಾಗಿ ಅಳಿದುಹೋಗುವರು ಮರಳಿ ಮನುಷ್ಯರೆಲ್ಲರೂ ಮಣ್ಣಾಗಿ ಮಾರ್ಪಡುವರು.


ಜೇಡಿಮಣ್ಣಿನಿಂದ ನನ್ನನ್ನು ಮಾಡಿದೆಯೆಂದು ನೆನೆಸಿಕೊ ಆದರೆ ಈಗ ಮರಳಿ ಮಣ್ಣಾಗುವಂತೆ ಮಾಡುವಿಯೋ?


ಆಗ ಅಬ್ರಹಾಮನು, “ನಾನಂತೂ ಮಣ್ಣುಬೂದಿ, ಆದರೂ ಸ್ವಾಮಿಯ ಸಂಗಡ ವಾದಿಸುವುದಕ್ಕೆ ಧೈರ್ಯಗೊಂಡಿದ್ದೇನೆ.


ನೀನುತ್ಪತ್ತಿಯಾದ ಮಣ್ಣಿಗೆ ಮರಳಿ ಸೇರುವ ತನಕ ಗಳಿಸಬೇಕು ಕವಳವನ್ನು ನೆತ್ತಿಬೆವರಿಡುತ. ಮಣ್ಣಿನಿಂದಲೇ ಬಂದವನು ನೀನು ಮರಳಿ ಮಣ್ಣಿಗೆ ಸೇರತಕ್ಕವನು."


ನನ್ನ ಅಪರಾದವನ್ನು ನೀನು ಕ್ಷಮಿಸಬಾರದೆ? ನನ್ನ ದೋಷವನ್ನು ನೀನು ಪರಿಹರಿಸಬಾರದೆ? ಮಣ್ಣಿನೊಳಗೆ ಬಿದ್ದಿರುವೆ ನಾನು ಈಗ ನಾನು ಇಲ್ಲವಾಗಿರುವೆ ನೀ ಹುಡುಕುವಾಗ.


ನೆಲದ ಮೇಲೆ ಚೆಲ್ಲಿ ತಿರುಗಿ ತುಂಬಿಕೊಳ್ಳಲಾಗದ ನೀರಿನಂತೆ ಇದ್ದೇವೆ ನಾವು. ಮನುಷ್ಯರ ಪ್ರಾಣತೆಗೆಯುವುದಕ್ಕೆ ದೇವರಿಗೆ ಇಷ್ಟ ಇಲ್ಲ; ಹೊರದೂಡಲಾದವನು ತಿರುಗಿ ಬಳಿಗೆ ಬರುವ ಹಾಗೆ ಅವರು ಸದುಪಾಯಗಳನ್ನು ಕಲ್ಪಿಸುವವರಾಗಿರುತ್ತಾರೆ.


ಕೇವಲ ಎಲುಬೂ ತೊಗಲೂ ಆಗಿಬಿಟ್ಟಿದ್ದೇನೆ ಮೃತ್ಯುವಿನ ದವಡೆಗೆ ಸಿಕ್ಕಿಕೊಂಡಿದ್ದೇನೆ.


ನನ್ನ ಮನ ಕರಗಿ ನೀರಾಗಿದೆ ಬಾಧೆಗಳು ನನ್ನನು ಬಿಗಿಹಿಡಿದಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು