Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:16 - ಕನ್ನಡ ಸತ್ಯವೇದವು C.L. Bible (BSI)

16 ಮುತ್ತಿದೆ ದುರುಳರ ಹಿಂಡು; ಸುತ್ತಿವೆ ಕುನ್ನಿಗಳು I ಕುತ್ತಿವೆ ನನ್ನ ಕೈಗಳು ಮೇಣ್ ಕಾಲುಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುಷ್ಟರ ಗುಂಪು ನನ್ನನ್ನು ಆವರಿಸಿಕೊಂಡಿದೆ. ನನ್ನ ಕೈಕಾಲುಗಳನ್ನು ತಿವಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ದುಷ್ಟರು ನಾಯಿಗಳಂತೆ ನನ್ನನ್ನು ಸುತ್ತಿಕೊಂಡಿದ್ದಾರೆ. ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾಯಿಗಳು ನನ್ನನ್ನು ಸುತ್ತಿಕೊಂಡಿವೆ; ದುರ್ಮಾರ್ಗಿಗಳ ಗುಂಪು ನನ್ನನ್ನು ಮುತ್ತಿಕೊಂಡಿದೆ; ಅವರು ನನ್ನ ಕೈಗಳನ್ನೂ ಕಾಲುಗಳನ್ನೂ ತಿವಿದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:16
27 ತಿಳಿವುಗಳ ಹೋಲಿಕೆ  

‘ತಾವು ಇರಿದವನನ್ನೇ ಅವರು ನಿರೀಕ್ಷಿಸುವರು’ ಎನ್ನುತ್ತದೆ ಇನ್ನೊಂದು ವಾಕ್ಯ.


ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಅವರ ಉಡುಪಿಗಾಗಿ ಸೈನಿಕರು ಚೀಟುಹಾಕಿ ತಮ್ಮತಮ್ಮೊಳಗೇ ಹಂಚಿಕೊಂಡರು.


“ದಾವೀದನ ವಂಶಜರಲ್ಲೂ ಜೆರುಸಲೇಮಿನ ನಿವಾಸಿಗಳ ಮನದಲ್ಲೂ ಕರುಣಿಸುವ ಹಾಗೂ ಪ್ರಾರ್ಥಿಸುವ ಮನೋಭಾವವನ್ನು ಸುರಿಸುವೆನು. ತಾವು ಇರಿದವನನ್ನೇ ಅವರು ಆಗ ದಿಟ್ಟಿಸಿ ನೋಡುವರು. ಏಕೈಕ ಮಗನನ್ನು ಕಳೆದುಕೊಂಡಂತೆ ಅವನಿಗಾಗಿ ಗೋಳಾಡುವರು. ಕಾಲವಾದ ಜ್ಯೇಷ್ಠ ಪುತ್ರನಿಗಾಗಿ ಎಂಬಂತೆ ಅತ್ತು ಪ್ರಲಾಪಿಸುವರು.


ಉಳಿದ ಶಿಷ್ಯರು, “ನಾವು ಪ್ರಭುವನ್ನು ನೋಡಿದೆವು,” ಎಂದು ಹೇಳಿದರು. ಅದಕ್ಕೆ ಅವನು, “ಅವರ ಕೈಗಳಲ್ಲಿ ಮೊಳೆಗಳಿಂದಾದ ಗಾಯದ ಕಲೆಯನ್ನು ನಾನು ನೋಡಬೇಕು. ಮೊಳೆಗಳು ಜಡಿದಿದ್ದ ಜಾಗದಲ್ಲಿ ನನ್ನ ಬೆರಳನ್ನಿಡಬೇಕು, ಅವರ ಪಕ್ಕೆಯಲ್ಲಿ ನನ್ನ ಕೈಯನ್ನು ಇಟ್ಟು ನೋಡಬೇಕು. ಆ ಹೊರತು ನಾನು ನಂಬುವುದೇ ಇಲ್ಲ,” ಎಂದುಬಿಟ್ಟನು.


ಯೇಸುವನ್ನು ಶಿಲುಬೆಗೇರಿಸಿದ ಬಳಿಕ ಸೈನಿಕರು ಯೇಸುವಿನ ಬಟ್ಟೆಗಳನ್ನು ತೆಗೆದುಕೊಂಡು ಒಬ್ಬೊಬ್ಬರಿಗೆ ಒಂದೊಂದು ಪಾಲಿನಂತೆ ನಾಲ್ಕು ಪಾಲುಮಾಡಿ ಹಂಚಿಕೊಂಡರು. ಅವರ ಒಳ ಅಂಗಿಯಾದರೋ ಹೊಲಿಗೆಯಿಲ್ಲದೆ ಮೇಲಿಂದ ಕೆಳಗಿನವರೆಗೆ ಹೆಣೆದದ್ದಾಗಿತ್ತು.


ಕೊನೆಗೆ ಅವರನ್ನು ಶಿಲುಬೆಗೆ ಏರಿಸಿದರು. ಅವರ ಬಟ್ಟೆಗಳನ್ನು ಯಾವುಯಾವುದು ಯಾರು ಯಾರಿಗೆ ಸಿಗಬೇಕೆಂದು ತಿಳಿಯಲು ಚೀಟುಹಾಕಿ ತಮ್ಮತಮ್ಮೊಳಗೆ ಹಂಚಿಕೊಂಡರು.


ಆದರೂ ಸೈನಿಕರಲ್ಲಿ ಒಬ್ಬನು ಈಟಿಯಿಂದ ಅವರ ಪಕ್ಕೆಯನ್ನು ತಿವಿದನು. ಕೂಡಲೇ ರಕ್ತವೂ ನೀರೂ ಅಲ್ಲಿಂದ ಹೊರಗೆ ಹರಿದುಬಂದವು.


‘ಕಪಾಲ’ ಎಂಬ ಸ್ಥಳಕ್ಕೆ ಬಂದು ಸೇರಿದ ಮೇಲೆ ಯೇಸುಸ್ವಾಮಿಯನ್ನು ಶಿಲುಬೆಗೆ ಏರಿಸಿದರು. ಆ ಇಬ್ಬರು ಅಪರಾಧಿಗಳಲ್ಲಿ ಒಬ್ಬನನ್ನು ಅವರ ಬಲಗಡೆಯಲ್ಲೂ ಮತ್ತೊಬ್ಬನನ್ನು ಎಡಗಡೆಯಲ್ಲೂ ಶಿಲುಬೆಗೇರಿಸಿದರು.


ನಿಮಗೆ ಸುನ್ನತಿಯಾಗಬೇಕೆಂದು ಬೋಧಿಸುವವರ ವಿಷಯದಲ್ಲಿ ಜಾಗರೂಕರಾಗಿರಿ. ಅವರು ದುಷ್ಕರ್ಮಿಗಳು, ಶ್ವಾನಗಳಿಗೆ ಸಮಾನರು.


ಆದರೂ ಅವರು ಅಧಿಕಾಧಿಕವಾಗಿ ಆರ್ಭಟಿಸುತ್ತಾ ಯೇಸುವನ್ನು ಶಿಲುಬೆಗೆ ಏರಿಸಲೇ ಬೇಕೆಂದು ಕೂಗಾಡಿದರು. ಕಟ್ಟಕಡೆಗೆ ಕೂಗಾಟಕ್ಕೇ ಗೆಲುವಾಯಿತು!


ಗಾಯಗೊಂಡನಾತ ನಮ್ಮ ಪಾಪಗಳ ನಿಮಿತ್ತ ಜಜ್ಜರಿತನಾದ ನಮ್ಮ ದ್ರೋಹಗಳ ದೆಸೆಯಿಂದ. ಶಿಕ್ಷೆಗೊಳಗಾದ ನಮ್ಮ ರಕ್ಷೆಗಾಗಿ ಪೆಟ್ಟುತಿಂದ ನಮ್ಮ ಸ್ವಸ್ಥತೆಗಾಗಿ.


ಕತ್ತಿಗೆ ತುತ್ತಾಗದಂತೆ ತಪ್ಪಿಸು I ಕುಕ್ಕುರಗಳಿಂದ ಪ್ರಾಣವನುಳಿಸು II


ದೇವಾ, ಓ ಎನ್ನ ದೇವಾ, ಏಕೆನ್ನ ಕೈಬಿಟ್ಟೆ? I ಕಿವಿಗೊಡದೆ ಏಕೆ ದೂರವಾಗಿಬಿಟ್ಟೆ? II


ಆಮೇಲೆ ತೋಮನಿಗೆ, “ಇಗೋ ನೋಡು, ನನ್ನ ಕೈಗಳು; ನಿನ್ನ ಬೆರಳನ್ನು ತಂದು ಇಲ್ಲಿಡು. ನಿನ್ನ ಕೈಯನ್ನು ಚಾಚಿ ನನ್ನ ಪಕ್ಕೆಯಲ್ಲಿಡು. ವಿಶ್ವಾಸರಹಿತನಾಗಿರಬೇಡ, ವಿಶ್ವಾಸಿಸು,” ಎಂದು ಹೇಳಿದರು.


ಸಂಜೆಯಾದುದೆ ಓಡಿ ಬರುವರು ನಾಯಿಗಳಂತೆI ಗುರುಗುಟ್ಟುತ ಊರ ಸುತ್ತುವರು ಕುನ್ನಿಗಳಂತೆ II


ಆದರೆ ಶುನಕ ಸಮಾನರೂ ಮಾಟಮಂತ್ರಗಾರರೂ ಕಾಮುಕರೂ ಕೊಲೆಗಾರರೂ ವಿಗ್ರಹಾರಾಧಕರೂ ಅಸತ್ಯವಾದಿಗಳೂ ನಗರದ ಹೊರಗೆ ಬಿದ್ದಿರುವರು.


ಗರ್ವಿಗಳೆದ್ದಿಹರು ದೇವಾ, ನನ್ನ ವಿರುದ್ಧವಾಗಿ I ನನ್ನ ಪ್ರಾಣಕೆ ಕಾದಿಹರು ಕ್ರೂರಿಗಳು ಗುಂಪಾಗಿ I ಕಾಣುತ್ತಿಹರವರು ನಿನ್ನನು ಪ್ರಭು, ಅಲಕ್ಷ್ಯವಾಗಿ II


ಬಳಿಕ ಯೇಸುಸ್ವಾಮಿಯನ್ನು ಬಂಧಿಸಿದ್ದವರು ಅವರನ್ನು ಪ್ರಧಾನಯಾಜಕ ಕಾಯಫನ ಬಳಿಗೆ ಕರೆದೊಯ್ದರು.


“ಪವಿತ್ರವಾದುದನ್ನು ನಾಯಿಗಳಿಗೆ ಹಾಕಬೇಡಿ - ಅವು ನಿಮ್ಮ ಮೇಲೆ ತಿರುಗಿಬಿದ್ದು ನಿಮ್ಮನ್ನು ಸೀಳಿಬಿಟ್ಟಾವು; ಮುತ್ತುಗಳನ್ನು ಹಂದಿಗಳ ಮುಂದೆ ಚೆಲ್ಲಬೇಡಿ - ಅವು ಆ ಮುತ್ತುಗಳನ್ನು ಕಾಲಿನಿಂದ ತುಳಿದು ಹಾಕಿಯಾವು.”


ನಿನ್ನ ಸೋದರರೇ, ನಿನ್ನ ತೌರುಮನೆಯವರೇ ನಿನಗೆ ದ್ರೋಹವೆಸಗಿದ್ದಾರೆ. ಇವರೇ ನಿನ್ನ ಬೆನ್ನಟ್ಟಿಬಂದು ಧಿಕ್ಕಾರ ಕೂಗಿದ್ದಾರೆ. ಇಂತಿರಲು ಇವರು ಸವಿನುಡಿದರೂ ನಂಬಲೆಬೇಡ.”


ಸಂಜೆಯಾದುದೆ ಓಡಿಬರುವರು ನಾಯಿಗಳಂತೆ I ಗುರುಗುಟ್ಟುತ ಊರ ಸುತ್ತುವರು ಕುನ್ನಿಗಳಂತೆ II


ನನ್ನ ಜಾಡ್ಯ ನೋಡಿ ದೂರ ಸರಿದರು ನೆಂಟರಿಷ್ಟರು I ಬಳಿಬಾರದೆ ಅಲ್ಲೇ ನಿಂತರು ಬಂಧು ಬಳಗದವರು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು