Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:2 - ಕನ್ನಡ ಸತ್ಯವೇದವು C.L. Bible (BSI)

2 ಹಗಲೆಲ್ಲ ಕೂಗಿಕೊಂಡರೂ ನೀ ಬರಲಿಲ್ಲವಲ್ಲಾ I ಇರುಳೆಲ್ಲಾ ಮೊರೆಯಿಟ್ಟರೂ ನೆಮ್ಮದಿಯಿಲ್ಲವಲ್ಲಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನ ದೇವರೇ, ಹಗಲಿನಲ್ಲಿ ಮೊರೆಯಿಡುತ್ತೇನೆ; ಪ್ರತ್ಯುತ್ತರವೇ ಇಲ್ಲ; ರಾತ್ರಿಯಲ್ಲಿಯೂ ನನಗೆ ಉಪಶಮನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನ ದೇವರೇ, ಹಗಲಿನಲ್ಲಿ ಮೊರೆಯಿಡುತ್ತೇನೆ; ಪ್ರತ್ಯುತ್ತರವೇ ಇಲ್ಲ; ಇರುಳಿನಲ್ಲಿಯೂ ನನಗೆ ಉಪಶಮನವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ನನ್ನ ದೇವರೇ, ಹಗಲಿನಲ್ಲಿ ನಾನು ನಿನ್ನನ್ನು ಕೂಗಿಕೊಂಡೆನು, ಆದರೂ ನೀನು ನನಗೆ ಉತ್ತರಿಸಲಿಲ್ಲ. ರಾತ್ರಿಯಲ್ಲೂ ನಿನ್ನನ್ನು ಕೂಗಿಕೊಳ್ಳುತ್ತಲೇ ಇದ್ದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಓ ನನ್ನ ದೇವರೇ, ಹಗಲಿನಲ್ಲಿ ಕರೆಯುತ್ತೇನೆ, ಆದರೆ ನೀವು ಉತ್ತರ ಕೊಡುವುದಿಲ್ಲ; ರಾತ್ರಿಯಲ್ಲಿಯೂ ನನಗೆ ವಿಶ್ರಾಂತಿ ಇರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:2
12 ತಿಳಿವುಗಳ ಹೋಲಿಕೆ  

ಹೀಗಿರುವಲ್ಲಿ ದೇವರು, ತಾವಾಗಿ ಆಯ್ಕೆಮಾಡಿಕೊಂಡ ಜನರು ಹಗಲುರಾತ್ರಿ ತಮಗೆ ಮೊರೆಯಿಡುವಾಗ ನ್ಯಾಯ ತೀರಿಸದೆ ಹೋಗುವರೆ? ತಡಮಾಡಿಯಾರೆ?


“ಎಲ್ಲಿ? ನಿನ್ನ ದೇವನೆಲ್ಲಿ?” ಎಂದು ಜನ ಜರೆಯುತಿರಲು I ಕಂಬನಿಯೆ ನನಗನ್ನಪಾನವಾಗಿಹುದು ಹಗಲಿರುಳು II


ಪ್ರಭು, ಜೀವೋದ್ಧಾರಕನೇ ಕೇಳು I ನಿನಗೆ ಮೊರೆಯಿಡುವೆ ಹಗಲಿರುಳು II


ನಾನು ಹಗಲಿರುಳೂ ನನ್ನ ಪ್ರಾರ್ಥನೆಯಲ್ಲಿ ತಪ್ಪದೆ ನಿನ್ನನ್ನು ಸ್ಮರಿಸಿಕೊಳ್ಳುತ್ತೇನೆ. ನನ್ನ ಪೂರ್ವಿಕರ ಹಾಗೆ ಶುದ್ಧಮನಸ್ಸಾಕ್ಷಿಯಿಂದ ನನ್ನ ಆರಾಧ್ಯ ದೇವರಿಗೆ ನಿನ್ನ ವಿಷಯವಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ. ಅಂದು ನೀನು ಸುರಿಸಿದ ಕಣ್ಣೀರನ್ನು ನಾನು ಇನ್ನೂ ಮರೆತಿಲ್ಲ. ನಿನ್ನನ್ನು ಪುನಃ ನೋಡಿ ಆನಂದಪಡಬೇಕೆಂದು ಹಂಬಲಿಸುತ್ತಿದ್ದೇನೆ.


ನಿಮ್ಮನ್ನು ಕಣ್ಣಾರೆ ಕಂಡು ನಿಮ್ಮ ವಿಶ್ವಾಸದಲ್ಲಿರುವ ಕುಂದುಕೊರತೆಗಳನ್ನು ನಿವಾರಿಸಬೇಕೆಂದು ನಾವು ದೇವರಲ್ಲಿ ಹಗಲಿರುಳು ಪ್ರಾರ್ಥಿಸುತ್ತಿದ್ದೇವೆ.


ಒಮ್ಮೆ ಯೇಸುಸ್ವಾಮಿ ಪ್ರಾರ್ಥನೆ ಮಾಡಲು ಬೆಟ್ಟವನ್ನೇರಿದರು. ರಾತ್ರಿಯೆಲ್ಲಾ ದೇವರ ಪ್ರಾರ್ಥನೆಯಲ್ಲಿ ಕಳೆದರು.


ಪುನಃ ಅವರನ್ನು ಬಿಟ್ಟು ಹಿಂದಿರುಗಿ ಮೂರನೆಯ ಬಾರಿ ಅದೇ ಮಾತುಗಳನ್ನು ಹೇಳಿ ಪ್ರಾರ್ಥಿಸಿದರು.


ನಮ್ಮ ಪ್ರಾರ್ಥನೆ ನಿನಗೆ ಮುಟ್ಟಬಾರದೆಂದೆ ಮೋಡಗಳ ಹಿಂದೆ ಮರೆಮಾಡಿಕೊಂಡೆ.


ಎಷ್ಟೋ ಮೊರೆಯಿಟ್ಟು ಕೂಗಿಕೊಂಡೆ. ಕಿವಿಗೊಡಲಿಲ್ಲ ಆತ ನನ್ನ ಮೊರೆಗೆ.


ಸ್ವಾಮಿ ದೇವನೇ, ಸರ್ವಶಕ್ತನೆ I ಅದೆನಿತು ಕಾಲ ನೀ ಮುನಿದಿರುವೆ I ನಿನ್ನವರ ಮೊರೆಯನಾಲಿಸದಿರುವೆ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು