Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:23 - ಕನ್ನಡ ಸತ್ಯವೇದವು C.L. Bible (BSI)

23 ಮಣಿಯಿರಿ, ಪ್ರಭುವಿನಲಿ ಭಯಭಕುತಿಯುಳ್ಳವರೇ I ಭಜಿಸಿರಿ ಇಸ್ರಯೇಲರೇ, ಯಾಕೋಬ ಕುಲಜರೇ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; ಯಾಕೋಬ ವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. ಇಸ್ರಾಯೇಲ್ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಯೆಹೋವನ ಭಕ್ತರೇ, ಆತನನ್ನು ಸ್ತುತಿಸಿರಿ; ಯಾಕೋಬವಂಶದವರೇ, ನೀವೆಲ್ಲರೂ ಆತನನ್ನು ಕೊಂಡಾಡಿರಿ. ಇಸ್ರಾಯೇಲ ವಂಶಸ್ಥರೇ, ನೀವೆಲ್ಲರೂ ಆತನಲ್ಲಿ ಭಯಭಕ್ತಿಯುಳ್ಳವರಾಗಿರ್ರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಯೆಹೋವನನ್ನು ಆರಾಧಿಸುವವರೇ, ಆತನಿಗೆ ಸ್ತೋತ್ರಮಾಡಿರಿ. ಯಾಕೋಬನ ಸಂತತಿಗಳವರೇ, ಯೆಹೋವನಿಗೆ ಘನಮಾನವನ್ನು ಸಲ್ಲಿಸಿರಿ! ಇಸ್ರೇಲರೇ, ಆತನಲ್ಲಿ ಭಯಭಕ್ತಿಯಿಂದಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಯೆಹೋವ ದೇವರಿಗೆ ಭಯಪಡುವವರೇ, ಅವರನ್ನು ಸ್ತುತಿಸಿರಿ; ಯಾಕೋಬನ ಎಲ್ಲಾ ಸಂತತಿಯವರೇ, ಅವರನ್ನು ಕೊಂಡಾಡಿರಿ; ಇಸ್ರಾಯೇಲರ ಎಲ್ಲಾ ಸಂತತಿಯವರೇ, ಅವರಲ್ಲಿ ಭಯಭಕ್ತಿಯುಳ್ಳವರಾಗಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:23
22 ತಿಳಿವುಗಳ ಹೋಲಿಕೆ  

ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಆತನಲ್ಲಿ ಭಯಭಕ್ತಿಯುಳ್ಳವರಿಗೆ I ಆತನ ಪ್ರೀತಿ ತಲತಲಾಂತರದವರೆಗೆ II


ಪ್ರಭುವಿನಲ್ಲಿದೆ ಭರವಸೆ ಆತನ ಭಕ್ತಜನರಿಗೆ I ಆತನೇ ಸಹಾಯಕ, ರಕ್ಷಾಕವಚ ಅವರಿಗೆ II


ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II


ಅದಕ್ಕೆ ನನ್ನ ಉತ್ತರ ಇದು: ನೀವು ಉಂಡರೂ ಕುಡಿದರೂ ಏನು ಮಾಡಿದರೂ ಎಲ್ಲವನ್ನೂ ದೇವರ ಮಹಿಮೆಗಾಗಿ ಮಾಡಿ.


ಇತ್ತ, ಕುರುಬರು ತಾವು ಕೇಳಿದ್ದನ್ನು ನೆನೆಯುತ್ತಾ, ದೇವರ ಮಹಿಮೆಯನ್ನು ಸಾರುತ್ತಾ, ಕೊಂಡಾಡುತ್ತಾ ಹಿಂದಿರುಗಿದರು. ದೇವದೂತನು ಅವರಿಗೆ ತಿಳಿಸಿದಂತೆ ಎಲ್ಲವೂ ಸಂಭವಿಸಿತ್ತು.


ಹೊಗಳುವುವು ನಿನ್ನನ್ನು ಬಲಿಷ್ಟ ರಾಷ್ಟ್ರಗಳು, ನಿನಗಂಜುವುವು ಕ್ರೂರಿಗಳ ಪಟ್ಟಣಗಳು.


ಹತ್ತಿರ ಇಹನು ಪ್ರಭು ಕರೆಯುವವರೆಲ್ಲರಿಗೆ I ಯಥಾರ್ಥವಾಗಿ ಆತನನು ಅರಸುವವರಿಗೆ II


ಆಶೀರ್ವದಿಸುವನು ಪ್ರಭು ತನ್ನಲಿ ಭಯಭಕ್ತಿಯುಳ್ಳವರನು I ಚಿಕ್ಕವರು ದೊಡ್ಡವರೆನ್ನದೆ ಭಯಭಕ್ತಿಯುಳ್ಳವರನು II


ನೀನಾರಿಸಿಕೊಂಡಿರುವ ಪ್ರಗತಿಯನು ನಾ ಕಾಣಮಾಡು I ನಿನ್ನ ಜನಾಂಗದವರ ಸಂತಸವನು ನಾ ಸವಿಯಮಾಡು I ನಿನ್ನ ಸ್ವಕೀಯರ ಮಹಿಮೆಯಲ್ಲೆನಗೆ ಪಾಲನ್ನು ನೀಡು II


ಮಾಡುವೆ ದೇವಾ, ನಿನ್ನ ಗುಣಗಾನವನು ಶ್ರದ್ಧೆಯಿಂದ I ಘನಪಡಿಸುವೆ ಸ್ವಾಮಿ, ನಿನ್ನ ಶ್ರೀನಾಮವನು ಅನವರತ II


ಪೊಡವಿಯೆಲ್ಲವು ಭಯಪಡಲಿ ಪ್ರಭುವಿಗೆ I ಅಡಗಿ ನಡೆಯಲಿ ನಾಡಿಗರೆಲ್ಲ ಆತನಿಗೆ II


ವಂದಿಪುದು ಪ್ರಭುವನು ಮುಂದಿನ ಪೀಳಿಗೆ I ಸಾರುವುದಾತನ ವದಂತಿಯನು ಜನರಿಗೆ II


ಸಮತಳದಲಿ ನಿಂತಿವೆ ನನ್ನ ಪಾದಗಳು I ಸ್ತುತಿಸುವೆ ನಾ ಪ್ರಭುವನು ಭಕ್ತರ ಸಭೆಯೊಳು II


ಮಹಾಸಭೆಯಲ್ಲಾಗ ನಿನ್ನನು ಕೊಂಡಾಡುವೆ I ಬಹುಜನರ ಮುಂದೆ ನಿನ್ನ ಗುಣಗಾನ ಮಾಡುವೆ II


ಕೊಂಡಾಡುವೆನು ಪ್ರಭುವನು ಬಹಳವಾಗಿ I ಕೀರ್ತಿಸುವೆನು ಆತನನು ಸಾಮೂಹಿಕವಾಗಿ II


ಅಲ್ಲೆಲೂಯI ಸಜ್ಜನರ ಸಂಘದೊಳು, ಸಭಾಸದಸ್ಯರೊಳು ಕೂಡಿ I ಹೊಗಳುವೆ ಪ್ರಭುವನು ಮನಃಪೂರ್ವಕವಾಗಿ ಹಾಡಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು