Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:24 - ಕನ್ನಡ ಸತ್ಯವೇದವು C.L. Bible (BSI)

24 ತೃಣೀಕರಿಸನು, ತಿರಸ್ಕರಿಸನು ದಲಿತನನು I ವಿಮುಖನಾಗನು, ಪ್ರಾರ್ಥನೆಗೆ ಕಿವಿಗೊಡುವನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, ಅದಕ್ಕೆ ಅಸಹ್ಯಪಡಲಿಲ್ಲ; ತನ್ನ ಮುಖವನ್ನು ಅವನಿಗೆ ಮರೆಮಾಡದೆ, ಅವನ ಪ್ರಾರ್ಥನೆಗೆ ಕಿವಿಗೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಆತನು ಕುಗ್ಗಿಹೋದವನ ದುರವಸ್ಥೆಯನ್ನು ತಿರಸ್ಕರಿಸಲಿಲ್ಲ, ಅದಕ್ಕೆ ಅಸಹ್ಯಪಡಲಿಲ್ಲ; ತನ್ನ ಮುಖವನ್ನು ಅವನಿಗೆ ಮರೆಮಾಡದೆ ಅವನ ಪ್ರಾರ್ಥನೆಗೆ ಕಿವಿಗೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಯಾಕೆಂದರೆ ಇಕ್ಕಟ್ಟಿನಲ್ಲಿರುವ ಬಡವರಿಗೆ ಆತನು ಸಹಾಯಮಾಡುತ್ತಾನೆ; ಅವರ ವಿಷಯದಲ್ಲಿ ಆತನು ನಾಚಿಕೊಳ್ಳುವುದಿಲ್ಲ; ಆತನು ಅವರನ್ನು ದ್ವೇಷಿಸುವುದಿಲ್ಲ. ಅವರು ಆತನನ್ನು ಕೂಗಿಕೊಳ್ಳುವಾಗ ಆತನು ಅವರಿಗೆ ಮರೆಯಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಏಕೆಂದರೆ ಸಂಕಟಪಡುವವನ ಸಂಕಟವನ್ನು ಅವರು ತಿರಸ್ಕರಿಸಲಿಲ್ಲ, ಅಸಹ್ಯಪಡಲಿಲ್ಲ; ತಮ್ಮ ಮುಖವನ್ನು ಅವನಿಂದ ಮರೆಮಾಡಲಿಲ್ಲ; ಆದರೆ ಆತನು ಮೊರೆ ಇಡಲು, ಅವರು ಕೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:24
11 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸು ಈ ಭೂಲೋಕದಲ್ಲಿದ್ದಾಗ, ತಮ್ಮನ್ನು ಮರಣದಿಂದ ಕಾಪಾಡಲು‍ ಶಕ್ತರಾದ ದೇವರನ್ನು ಉಚ್ಚಸ್ವರದಿಂದ ಕೂಗುತ್ತಾ ಕಣ್ಣೀರಿಡುತ್ತಾ ವಿನಂತಿಸಿ ಪ್ರಾರ್ಥಿಸಿದರು. ಅವರ ಭಯಭಕ್ತಿಯನ್ನು ನೋಡಿ ದೇವರು ಅವರ ಮೊರೆಯನ್ನು ಆಲಿಸಿದರು.


ಇಕ್ಕಟ್ಟಿನಲ್ಲಿ ಮೊರೆಯಿಟ್ಟೆನು ಪ್ರಭುವಿಗೆ I ಕಿವಿಗೊಟ್ಟು ಬಿಡುಗಡೆಯಿತ್ತನು ಆತನೆನಗೆ II


ನಿರ್ಗತಿಕನು ಮೊರೆಯಿಡಲು ಪ್ರಭು ಕಿವಿಗೊಟ್ಟನು I ಸರ್ವಾಪತ್ತಿನಿಂದವನು ಮುಕ್ತಗೊಂಡನು II


ಹಗಲೆಲ್ಲ ಕೂಗಿಕೊಂಡರೂ ನೀ ಬರಲಿಲ್ಲವಲ್ಲಾ I ಇರುಳೆಲ್ಲಾ ಮೊರೆಯಿಟ್ಟರೂ ನೆಮ್ಮದಿಯಿಲ್ಲವಲ್ಲಾ II


ಮನುಜ ನಾನು, ಕ್ರಿಮಿಕೀಟಕೆ ಸಮಾನನು I ಅಲಕ್ಷಿತನು, ಪರರಿಂದ ತಿರಸ್ಕೃತನು II


ಯೇಸುಸ್ವಾಮಿ, “ಪಿತನೇ, ನನ್ನಾತ್ಮವನ್ನು ನಿಮ್ಮ ಕೈಗೊಪ್ಪಿಸುತ್ತೇನೆ,” ಎಂದು ಗಟ್ಟಿಯಾಗಿ ಕೂಗಿ ಪ್ರಾಣಬಿಟ್ಟರು.


ನಿನ್ನ ದಾಸನಿಗೆ ವಿಮುಖನಾಗಬೇಡಯ್ಯಾ I ಆಪತ್ತಿನಲ್ಲಿರುವೆ, ತಡಮಾಡಬೇಡಯ್ಯಾ II


“ಬಿಡಿಸಿದೆ ಬಡವನನು ದರೋಡೆಗಾರರಿಂದ I ರಕ್ಷಿಸಿದೆ ದುರ್ಬಲನನು ಬಲಾಢ್ಯರಿಂದ I ಹೇ ಪ್ರಭು, ನಿನಗೆ ಸಮಾನರಾರೆಂದು” I ಹೊಗಳುವುವು ನನ್ನೆಲುಬುಗಳೊಂದೊಂದು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು