Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:25 - ಕನ್ನಡ ಸತ್ಯವೇದವು C.L. Bible (BSI)

25 ಪ್ರಭು, ನೀನೆ ಸ್ಪೂರ್ತಿ, ತುಂಬುಸಭೆಯಲಿ ನಾ ಮಾಳ್ಪ ಸ್ತುತಿಗೆ I ಭಕ್ತಜನರ ಮುಂದೆ ನಾ ಸಲ್ಲಿಸುವೆ, ನಿನಗೆ ಹೊತ್ತ ಹರಕೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ನಾನು ಮಹಾಸಭೆಯಲ್ಲಿ ಮಾಡುವ ಸ್ತೋತ್ರಕ್ಕೆ ನೀನೇ ಆಧಾರನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆಹೋವನೇ, ನಿನ್ನ ಕಾರ್ಯಗಳಿಗಾಗಿ ಮಹಾಸಭೆಯಲ್ಲಿ ನಿನ್ನನ್ನು ಕೊಂಡಾಡುವೆನು; ನನ್ನ ಹರಕೆಗಳನ್ನು ನಿನ್ನ ಭಕ್ತರ ಮುಂದೆ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಮಹಾಸಭೆಯಲ್ಲಿ ನಿಮ್ಮನ್ನು ಕುರಿತು ನನ್ನ ಸ್ತೋತ್ರವು ನಿಮ್ಮಿಂದ ಬರುವುದು; ನನ್ನ ಹರಕೆಗಳನ್ನು ನಿಮಗೆ ಭಯಪಡುವವರ ಮುಂದೆ ಸಲ್ಲಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:25
11 ತಿಳಿವುಗಳ ಹೋಲಿಕೆ  

ಮಹಾಸಭೆಯಲ್ಲಾಗ ನಿನ್ನನು ಕೊಂಡಾಡುವೆ I ಬಹುಜನರ ಮುಂದೆ ನಿನ್ನ ಗುಣಗಾನ ಮಾಡುವೆ II


ಅಲ್ಲೆಲೂಯI ಸಜ್ಜನರ ಸಂಘದೊಳು, ಸಭಾಸದಸ್ಯರೊಳು ಕೂಡಿ I ಹೊಗಳುವೆ ಪ್ರಭುವನು ಮನಃಪೂರ್ವಕವಾಗಿ ಹಾಡಿ II


ದಹನ ಬಲಿಯನರ್ಪಿಸೆ ದೇಗುಲಕೆ ಧಾವಿಸುವೆ I ನಿನಗೆ ನಾ ಹೊತ್ತ ಹರಕೆಗಳನ್ನು ತೀರಿಸುವೆ II


ನಿನ್ನ ಮುಂದೆ ಜೀವನ್ ಜ್ಯೋತಿಯಲಿ ನಾ ನಡೆಯಮಾಡಿರುವೆ I ಮೃತ್ಯುವಿನಿಂದೆನ್ನ ಪ್ರಾಣವನು ನೀ ಮುಕ್ತಗೊಳಿಸಿರುವೆ I ಜಾರಿ ಬೀಳದಂತೆನ್ನ ಪಾದಗಳನು ಕಾದಿರಿಸಿರುವೆ II ಎಂದೇ ನಿನಗೆ ಹೊತ್ತ ಹರಕೆಗಳನು ಸಲ್ಲಿಸುವೆ I ಕೃತಜ್ಞತಾಬಲಿಗಳನು ದೇವಾ, ನಿನಗರ್ಪಿಸುವೆ II


ಸೋದರರಿಗೆ, ಸಾರುವೆ ನಿನ್ನ ನಾಮ ಮಹಿಮೆಯನ್ನು I ತುಂಬಿದ ಸಭೆಯಲಿ ಮಾಡುವೆ, ನಿನ್ನ ಸ್ತುತಿಯನ್ನು II


ಬಂದು ಕೇಳಿರಿ ದೇವನಲಿ ಭಯಭಕ್ತಿಯುಳ್ಳವರೆ I ದೇವನೆನಗೆ ಮಾಡಿದ ಕಾರ್ಯಗಳ ತಿಳಿಸುವೆ ನಿಮಗೆ II


ಸಿಯೋನಿನಲ್ಲಿ ಸಲ್ಲತಕ್ಕವು ನಿನಗೆ ಸ್ತುತಿಸ್ತೋತ್ರಗಳು I ಪೂರೈಸತಕ್ಕವು ದೇವಾ, ಜನರು ನಿನಗೆ ಹೊತ್ತ ಹರಕೆಗಳು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು