Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:26 - ಕನ್ನಡ ಸತ್ಯವೇದವು C.L. Bible (BSI)

26 ಹರಿವುದು ಸ್ತುತಿ ಭಕ್ತರ ಬಾಯಿಂದ; ತುಂಬುವುದು ದಲಿತರುದರ I ಇರಲಿ ಚೈತನ್ಯಭರಿತ ನಿಮ್ಮಂತರಂಗವು ನಿರಂತರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ಅವರ ಅಂತರಾತ್ಮವು ಯಾವಾಗಲು ಚೈತನ್ಯವುಳ್ಳದ್ದಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ದೀನರು ಉಂಡು ತೃಪ್ತರಾಗುವರು; ಯೆಹೋವನ ಭಕ್ತರೆಲ್ಲರೂ ಆತನನ್ನು ಕೊಂಡಾಡುವರು. ನಿಮ್ಮ ಅಂತರಾತ್ಮವು ಯಾವಾಗಲೂ ಚೈತನ್ಯವುಳ್ಳದ್ದಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಬಡವರು ತಿಂದು ತೃಪ್ತರಾಗುವರು. ಯೆಹೋವನಿಗಾಗಿ ಹುಡುಕುತ್ತಾ ಬಂದವರೇ, ಆತನಿಗೆ ಸ್ತೋತ್ರಮಾಡಿರಿ! ನಿಮ್ಮ ಹೃದಯವು ಯಾವಾಗಲೂ ಸಂತೋಷವಾಗಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ದೀನರು ಉಂಡು ತೃಪ್ತರಾಗುವರು; ಯೆಹೋವ ದೇವರನ್ನು ಹುಡುಕುವವರು ಅವರನ್ನು ಸ್ತುತಿಸುವರು; ಅಂಥವರ ಹೃದಯವು ಎಂದೆಂದಿಗೂ ಚೈತನ್ಯ ಹೊಂದಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:26
15 ತಿಳಿವುಗಳ ಹೋಲಿಕೆ  

ಇದನರಿತು ದೀನದಲಿತರು ಆನಂದಗೊಳ್ಳಲಿ I ದೇವನನು ಅರಸುವವರು ಪುನಶ್ಚೇತನಗೊಳ್ಳಲಿ II


ಇಗೋ, ನನ್ನ ಭಕ್ತರು ಊಟಮಾಡುವರು, ನೀವಾದರೋ ಹಸಿದಿರುವಿರಿ. ನನ್ನ ಭಕ್ತರು ಪಾನಮಾಡುವರು, ನೀವಾದರೋ ದಾಹಗೊಳ್ಳುವಿರಿ. ನನ್ನ ಭಕ್ತರು ಉಲ್ಲಾಸಗೊಳ್ಳುವರು; ನೀವಾದರೋ ಲಜ್ಜೆಗೊಳ್ಳುವಿರಿ.


ನಿನ್ನನು ಅರಸುವವರೆಲ್ಲರು ಹರ್ಷಾನಂದಗೊಳ್ಳಲಿ I ನಿನ್ನ ರಕ್ಷಣಾಪ್ರಿಯರು ಸತತ “ಪ್ರಭು ಪರಾಕ್ರಮಿ” ಎನ್ನಲಿ II


ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.


ಆದರೆ ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ದಾಹವಾಗದು; ಆ ನೀರು ಅವನಲ್ಲಿ ಉಕ್ಕಿ ಹರಿಯುವ ಬುಗ್ಗೆಯಾಗಿ, ನಿತ್ಯಜೀವವನ್ನು ತರುತ್ತದೆ,” ಎಂದು ಉತ್ತರಕೊಟ್ಟರು.


ಬಾಯಾರಿದವರ ಆಸೆಯನ್ನಾತ ಪೂರೈಸಿದನು I ಹಸಿದವರನು ಮೃಷ್ಟಾನ್ನದಿಂದ ತೃಪ್ತಿಪಡಿಸಿದನು II


ಅನಂತರ ದಾವೀದನು ನೆರೆದ ಸಭೆಯ ಮುಂದೆ ಸರ್ವೇಶ್ವರನನ್ನು ಹೀಗೆ ಸ್ತುತಿಸಿದನು:


ಬಚ್ಚಿಟ್ಟುಕೊಳ್ಳಲಿಲ್ಲ ನನ್ನೆದೆಯೊಳು ನಿನ್ನ ಸತ್ಸಂಬಂಧವನು I ಪ್ರಕಟಿಸಿದೆನು ಜೀವೋದ್ಧಾರವನು, ನಿನ್ನ ಪ್ರಾಮಾಣಿಕತೆಯನು I ಮಹಾಸಭೆಗೆ ಮರೆಯಿಸದೆ ಸಾರಿದೆನು ನಿನ್ನ ಪ್ರೀತಿ ಸತ್ಯತೆಯನು II


ದೇವರಿಗೆ ಧನ್ಯವಾದವೆ ನಿನ್ನ ಬಲಿಯರ್ಪಣೆಯಾಗಿರಲಿ I ಪರಾತ್ಪರನಿಗೆ ಮಾಡಿದ ಹರಕೆಗಳು ಸಮರ್ಪಿತವಾಗಲಿ II


ಆತನಿಗೆ ನಾ ಹೊತ್ತ ಹರಕೆಗಳನು I ಆತನ ಸಭೆಮುಂದೆಯೆ ತೀರಿಸುವೆನು II


ಹೇ ಜೆರುಸಲೇಮೇ, ನಿನ್ನ ಮಧ್ಯದೊಳು I ಆತನಿರುವ ಮಂದಿರದ ಅಂಗಳದೊಳು I ತೀರಿಸುವೆನು ಆತನ ಸಭೆಯ ಸಮ್ಮುಖದೊಳು I ಅರ್ಪಿಸುವೆನು ನಾ ಹೊತ್ತ ಆ ಹರಕೆಗಳನು II


ಸರ್ವೇಶ್ವರಸ್ವಾಮಿಯ ಆಜ್ಞೆಯ ಪ್ರಕಾರ ಆ ಮೀನು ಯೋನನನ್ನು ದಡದ ಮೇಲೆ ಕಕ್ಕಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು