Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:27 - ಕನ್ನಡ ಸತ್ಯವೇದವು C.L. Bible (BSI)

27 ಎಚ್ಚೆತ್ತು ಅಭಿಮುಖವಾಗುವುದು ಜಗದಾದ್ಯಂತ ಪ್ರಭುಗೆ I ಸಾಷ್ಟಾಂಗವೆರಗುವುವು ಧರೆಯ ಸರ್ವಜನಾಂಗಗಳು ಆತನಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಭೂಮಂಡಲದವರೆಲ್ಲರೂ ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; ಯೆಹೋವನೇ, ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಭೂಮಂಡಲದವರೆಲ್ಲರು ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; [ಯೆಹೋವನೇ,] ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ದೂರದೇಶಗಳಲ್ಲಿರುವ ಜನರೆಲ್ಲರೂ ಯೆಹೋವನನ್ನು ಜ್ಞಾಪಿಸಿಕೊಂಡು ಆತನ ಬಳಿಗೆ ಹಿಂತಿರುಗಲಿ. ವಿದೇಶಗಳಿಲ್ಲಿರುವ ಜನರೆಲ್ಲರೂ ಆತನನ್ನು ಆರಾಧಿಸಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಲೋಕದಲ್ಲಿರುವ ಎಲ್ಲರೂ ಎಚ್ಚರವಾಗಿ ಯೆಹೋವ ದೇವರ ಕಡೆಗೆ ತಿರುಗಿಕೊಳ್ಳುವರು; ಜನಾಂಗಗಳ ಕುಟುಂಬಗಳೆಲ್ಲಾ ದೇವರ ಮುಂದೆ ಅಡ್ಡಬೀಳುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:27
23 ತಿಳಿವುಗಳ ಹೋಲಿಕೆ  

ಬರುವುವು ನೀನುಂಟುಮಾಡಿದ ಸಕಲ ಜನಾಂಗಗಳು I ನಿನ್ನ ನಾಮವನು ಘನಪಡಿಸಲು, ನಿನಗೆ ಅಡ್ಡಬೀಳಲು II


“ಎಲ್ಲೆ ಎಲ್ಲೆಗಳಲ್ಲಿರುವ ಜನರೇ, ತಿರುಗಿಕೊಳ್ಳಿರಿ ನನ್ನ ಕಡೆಗೆ, ಆಗ ಉದ್ಧಾರವಾಗುವಿರಿ. ದೇವರು ಬೇರಾರೂ ಇಲ್ಲ, ನಾನೊಬ್ಬನೆ ಎಂಬುದನರಿಯಿರಿ.


ಕೇಳಿದೆಯಾದರೆ ನಿನಗಧೀನಮಾಡುವೆನು ರಾಷ್ಟ್ರಗಳನು I ಕೊಡುವೆನು ನಿನಗೆ ಸ್ವಾಸ್ತ್ಯವಾಗಿ ಜಗದ ಆದ್ಯಂತವನು II


ಮತ್ತೆ ಆತ ಇಂತೆಂದನು ನನಗೆ : “ಮಹತ್ಕಾರ್ಯವೇನೂ ಅಲ್ಲ ನನ್ನ ದಾಸನಾದ ನಿನಗೆ ಕುಲಗಳನು ಉದ್ಧರಿಸುವ ಮಾತ್ರಕೆ ಇಸ್ರಯೇಲರಲಿ ರಕ್ಷಿತರಾದವರನ್ನು ಮರಳಿ ಬರಮಾಡುವ ಮಾತ್ರಕೆ. ನೇಮಿಸಿರುವೆನು ನಿನ್ನನ್ನು ಜ್ಯೋತಿಯನ್ನಾಗಿ ಸರ್ವಜನಾಂಗಗಳಿಗೆ ನನ್ನ ರಕ್ಷಣೆ ವ್ಯಾಪಿಸಿರುವಂತೆ ಮಾಡಲು ಜಗದ ಕಟ್ಟಕಡೆಯವರೆಗೆ.”


ಹೇ ಪ್ರಭೂ, ನಿನಗಂಜದವರಾರು? ನಿನ್ನ ನಾಮಸ್ತುತಿ ಮಾಡದವರಾರು? ಪರಮಪವಿತ್ರ ನೀನಲ್ಲದಿನ್ಯಾರು ಪ್ರಕಟವಾಗಿವೆ ನಿನ್ನ ನೀತಿಯುತ ಕಾರ್ಯಗಳು ಬಂದೆರಗಲಿವೆ ನಿನಗೆ ಸಕಲ ಜನಾಂಗಗಳು.”


ಶಕ್ತಿಸಾಮರ್ಥ್ಯ ಪ್ರಭುವಿನದೇ ಎಂದು I ಜಗದ ರಾಷ್ಟ್ರಗಳು ಘನಪಡಿಸಲಿ ಆತನನು ಎಂದೆಂದು II


ರಾಜರುಗಳು ಸಾಷ್ಟಾಂಗವೆರಗಲಿ ಆತನಿಗೆ I ರಾಷ್ಟ್ರ, ಘನರಾಷ್ಟ್ರಗಳು ಸೇವೆಸಲ್ಲಿಸಲಿ ಆತನಿಗೆ II


ಸ್ತುತಿ ಮಾಡಿ ಪ್ರಭುವನು ಸಮಸ್ತ ರಾಷ್ಟ್ರಗಳೇ I ಆತನನು ಹೊಗಳಿ ಹಾಡಿ ಸರ್ವಜನಾಂಗಗಳೇ II


ಹೊಗಳಲಾಗುವುದು ಪ್ರಭುವಿನ ನಾಮ ಸಿಯೋನಿನಲಿ I ಆತನ ಗುಣಗಾನವಿರುವುದು ಆ ಜೆರುಸಲೇಮಿನಲಿ II


ಸಾಗರದಿಂದ ಸಾಗರದವರೆಗಿರಲಿ ಆತನ ಆಧಿಪತ್ಯ I ಮಹಾ ನದಿಯಿಂದ ಬುವಿ ಎಲ್ಲೆಯವರೆಗಿರಲಿ ಆತನ ಪ್ರಭುತ್ವ II


ನಾವು ನಿಮ್ಮಲ್ಲಿಗೆ ಬಂದಾಗ, ನೀವು ನಮ್ಮನ್ನು ಹೇಗೆ ಸ್ವಾಗತಿಸಿದಿರಿ; ವಿಗ್ರಹಗಳನ್ನು ತೊರೆದು, ಸತ್ಯ ಹಾಗೂ ಜೀವಸ್ವರೂಪರಾದ ದೇವರ ಕಡೆಗೆ ಹೇಗೆ ಅಭಿಮುಖರಾದಿರಿ;


ಇದನ್ನು ಬೆಳಕಿಗೆ ತರುವ ನನ್ನ ಸಂದೇಶದ ಮೂಲಕ ಮತ್ತು ಯೇಸುಕ್ರಿಸ್ತರನ್ನು ಕುರಿತ ಬೋಧನೆಯ ಮೂಲಕ ದೇವರು ನಿಮ್ಮನ್ನು ವಿಶ್ವಾಸದಲ್ಲಿ ದೃಢಪಡಿಸಲು ಶಕ್ತರು.


ಪಾಪಕ್ಕೆ ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಬೇಕು, ನಮ್ಮ ಪ್ರಭು ಯೇಸುವಿನಲ್ಲಿ ವಿಶ್ವಾಸವಿಡಬೇಕು, ಎಂದು ಯೆಹೂದ್ಯರಿಗೂ ಗ್ರೀಕರಿಗೂ ಸ್ಪಷ್ಟವಾದ ಎಚ್ಚರಿಕೆಯನ್ನು ಕೊಟ್ಟಿದ್ದೇನೆ.


“ಮಹಾಜನರೇ, ನೀವು ಮಾಡುತ್ತಿರುವುದೇನು? ನಾವು ನಿಮ್ಮಂತೆ ಕೇವಲ ನರಮಾನವರು. ನಾವು ಬಂದಿರುವುದು ನಿಮಗೆ ಶುಭಸಂದೇಶವನ್ನು ಸಾರುವುದಕ್ಕೆ; ನೀವು ಈ ನಿರರ್ಥಕ ಕಾರ್ಯವನ್ನು ಬಿಟ್ಟುಬಿಡಬೇಕು; ಭೂಮ್ಯಾಕಾಶವನ್ನೂ ಸಮುದ್ರ ಸರೋವರವನ್ನೂ ಮತ್ತು ಅವುಗಳಲ್ಲಿರುವ ಸಮಸ್ತ ಸೃಷ್ಟಿಯನ್ನೂ ಉಂಟುಮಾಡಿದ ಜೀವಂತ ದೇವರ ಭಕ್ತರಾಗಬೇಕು.


ನೋಡಿ, ಬರುತಿಹರು ನನ್ನ ಜನರು ದೂರದಿಂದ ಹೌದು, ಬರುತಿಹರು ಉತ್ತರ ಪಶ್ಚಿಮದಿಂದ ದಕ್ಷಿಣದ ಆ ಅಶ್ವಾನ್ ನಾಡಿನಿಂದ.


ಕಂಡುಬಂದಿತು ಜಗದ ಎಲ್ಲೆ ಎಲ್ಲೆಗೆ I ನಮ್ಮ ದೇವ ಸಾಧಿಸಿದ ಜಯಗಳಿಕೆ II ಸ್ಮರಿಸಿಕೊಂಡನಾ ಪ್ರಭು ತನ್ನ ಪ್ರೀತಿಯನು I ಇಸ್ರಯೇಲ್ ಕುಲದ ಬಗ್ಗೆ ತನ್ನ ಸತ್ಯತೆಯನು II


ಆದ್ದರಿಂದ ನೀನು ನಮಗೆ ಕಣ್ಣಾಗಿರಬೇಕು. ನೀನು ನಮ್ಮ ಸಂಗಡ ಬಂದರೆ ಸರ್ವೇಶ್ವರ ನಮಗೆ ಮಾಡುವ ಒಳಿತೆಲ್ಲವನ್ನು ನಿನ್ನೊಂದಿಗೆ ಹಂಚಿಕೊಳ್ಳುತ್ತೇವೆ,” ಎಂದು ಉತ್ತರಕೊಟ್ಟನು.


ಹೆಮ್ಮೆಪಡಿ, ನೆನೆದು ಆತನ ಶ್ರೀನಾಮವನು I ಹಿಗ್ಗಲಿ ಹೃದಯ, ಕೋರಿ ಆತನ ದರ್ಶನವನು II


ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು I ಸೆರೆಯಲ್ಲಿಹ ತನ್ನವರನು ತಿರಸ್ಕರಿಸನು II


ದೀನದಲಿತರು ಸರ್ವೇಶ್ವರನಲ್ಲಿ ಅತಿಯಾಗಿ ಆನಂದಿಸುವರು. ಬಡಬಗ್ಗರು ಇಸ್ರಯೇಲಿನ ಪರಮಪಾವನ ಸ್ವಾಮಿಯಲ್ಲಿ ಉಲ್ಲಾಸಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು