Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:29 - ಕನ್ನಡ ಸತ್ಯವೇದವು C.L. Bible (BSI)

29 ತಲೆಬಾಗುವರಾತನಿಗೆ ಧರೆಯ ಗರ್ವಿಗಳೆಲ್ಲರು I ಅಡ್ಡಬೀಳುವರವನಿಗೆ ಮರ್ತ್ಯಮಾನವರೆಲ್ಲರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣು ಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಭೂಲೋಕದಲ್ಲಿರುವ ಪುಷ್ಟರೆಲ್ಲರೂ ಉಂಡು ಆರಾಧಿಸುವರು; ತಮ್ಮ ಜೀವವನ್ನು ಉಳಿಸಿಕೊಳ್ಳಲಾರದೆ ಮಣ್ಣುಪಾಲಾಗುವವರೆಲ್ಲರೂ ಆತನಿಗೆ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಬಲಿಷ್ಠರೂ ದೃಢಕಾಯರೂ ತಿಂದು ದೇವರಮುಂದೆ ಅಡ್ಡಬೀಳುವರು. ಸಾಯುವವರೂ ಸತ್ತುಹೋಗಿರುವವರೂ ಆತನ ಮುಂದೆ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಭೂಮಿಯ ಶ್ರೀಮಂತರೆಲ್ಲರು ಉಂಡು ಆರಾಧಿಸುವರು; ತಮ್ಮ ಪ್ರಾಣವನ್ನು ಬದುಕಿಸಲಾರದೆ ಧೂಳಿನಲ್ಲಿ ಇಳಿಯುವವರೆಲ್ಲರು ಅವರ ಮುಂದೆ ಅಡ್ಡಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:29
20 ತಿಳಿವುಗಳ ಹೋಲಿಕೆ  

ಯೇಸುವಿನ ಹೆಸರಿಗೆಂದೇ ಮೊಣಕಾಲೂರಿ ಮಣಿವರು ಸ್ವರ್ಗವಾಸಿಗಳು, ಭೂನಿವಾಸಿಗಳು, ಪಾತಾಳ ಜೀವರಾಶಿಗಳು.


ಟೈರ್ ನಾಡಿಗರು ನಿನಗೆ ಕಾಣಿಕೆಯಿತ್ತು ಸನ್ಮಾನಿಸುವರು I ಸಿರಿವಂತ ಪ್ರಜೆಗಳು ನಿನ್ನುಪಕಾರವನು ಕೋರಿಬರುವರು II


ಬದುಕುವರು ನಿಧನರಾದ ನಮ್ಮ ಜನರು ಜೀವದಿಂದೇಳುವುವು ನಮ್ಮವರ ಶವಗಳು. ಎದ್ದು ಹರ್ಷಧ್ವನಿಗೈಯಲಿ ನೆಲದಲಿ ಬಿದ್ದಿರುವವರು. ನೀ ಸುರಿಸುವ ಇಬ್ಬನಿ ಜ್ಯೋತಿರ್ಮಯ, ಆದುದರಿಂದ ಸತ್ತವರು ಪುನರುತ್ಥಾನಹೊಂದುವರು ನೆಲದಿಂದ.


ದೀನರನು ಎಬ್ಬಿಸುವನು ಧೂಳಿನಿಂದ I ಬಡವರನು ಎತ್ತುವನು ತಿಪ್ಪೆಯಿಂದ II


ಪ್ರತಿಯೊಬ್ಬರು ಮೊಣಕಾಲೂರುವರು ನನಗೆ ಎಲ್ಲರು ನಾನೇ ದೇವರೆಂದು ಮಾಡುವರು ಪ್ರತಿಜ್ಞೆ. ಆ ನುಡಿ ಹೊರಟಿದೆ ನನ್ನ ಸತ್ಯದ ಬಾಯಿಂದ ಅದನ್ನು ಹಿಂತೆಗೆಯೆನು ನನ್ನ ಮೇಲಿಟ್ಟ ಆಣೆಯಿಂದ.


ಅದರ ಬೆಳಕಿನಲ್ಲಿ ಸರ್ವಜನಾಂಗಗಳು ಸಂಚರಿಸುವರು. ಭೂರಾಜರು ತಮ್ಮ ಸಿರಿಸಂಪತ್ತನ್ನು ಅಲ್ಲಿಗೆ ತರುವರು.


ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.


“ಇಸ್ರಯೇಲ್, ನಿನ್ನನ್ನು ನಾಶಮಾಡುವೆನು, ನಿನಗೆ ನೆರವಾಗಬಲ್ಲವರು ಯಾರು?


ಮೊಲೆಯೂಡಿಸುವರು ಜನಾಧಿಪತಿಗಳು ನಿನಗೆ ಮೊಲೆಗೂಸಾಗುವೆ ನೀನು ಜನಾಂಗಗಳಿಗೆ. ಆಗ ತಿಳಿಯುವೆ ನಿನ್ನನುದ್ಧರಿಸಿದ ಸರ್ವೇಶ್ವರ ನಾನೆಂದು ನಿನ್ನ ವಿಮೋಚಕನು, ಯಕೋಬ್ಯರ ಪರಾಕ್ರಮಿಯು ನಾನೆಂದು.


ನೀನು ಕುಗ್ಗಿ ಭೂಮಿಯೊಳಗಿಂದ ಮಾತಾಡುವೆ. ನಿನ್ನ ನುಡಿ ಮಣ್ಣಿನೊಳಗಿಂದ ಶಿಥಿಲ ಸ್ವರವಾಗಿ ಹೊರಡುವುದು. ನಿನ್ನ ಧ್ವನಿ ಭೂತದ ಧ್ವನಿಯಂತೆ ನೆಲದೊಳಗಿಂದ ಬರುವುದು. ಧೂಳಿನೊಳಗಿಂದ ನಿನ್ನ ಮಾತು ಲೊಚಗುಟ್ಟುವಂತೆ ಕೇಳಿಸುವುದು.


ಆದಕಾರಣ, ಒಡೆಯರಾದ ಸೇನಾಧೀಶ್ವರ ಸರ್ವೇಶ್ವರ ಅಸ್ಸೀರಿಯಾದ ಕೊಬ್ಬಿದ ಯೋಧರಿಗೆ ಕ್ಷಯರೋಗವನ್ನು ಬರಮಾಡುವರು. ಅವರ ದೇಹಕ್ಕೆ ಬೆಂಕಿಯಂತೆ ಉರಿಯುವ ಜ್ವರವನ್ನು ಉಂಟುಮಾಡುವರು.


ದೈವಕೋಪವೆದ್ದಿತು ಅವರಿಗೆ ವಿರುದ್ಧ I ಮಾಡಿತವರಲಿ ಕೊಬ್ಬಿದವರ ವಧ I ನೆಲಕುರುಳಿತು ಇಸ್ರಯೇಲ ಸಿರಿಜನ II


ದೋಷ ಹೊರಸೂಸುತ್ತಿದೆ ಕೊಬ್ಬಿನಾ ಕಣ್ಗಳಿಂದ I ದುಷ್ಕಲ್ಪನೆಗಳು ತುಳುಕುತಿವೆ ಹೃನ್ಮನಗಳಿಂದ II


ಉದ್ಧಾರಕನು ಏಸಾವಿನ ಪರ್ವತವನ್ನು ಆಳಲು ಸಿಯೋನ್ ಪರ್ವತವನ್ನು ಏರುವನು. ಆಗ ರಾಜ್ಯಭಾರವು ಸರ್ವೇಶ್ವರಸ್ವಾಮಿಯದಾಗಿರುವುದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು