Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 22:3 - ಕನ್ನಡ ಸತ್ಯವೇದವು C.L. Bible (BSI)

3 ಆದರೂ ದೇವಾ, ನೀನಂತು ಪರಮಪೂಜ್ಯನು I ಇಸ್ರಯೇಲರ ಸ್ತುತ್ಯ ಸಿಂಹಾಸನದಲಿ ಆಸೀನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇಸ್ರಾಯೇಲರ ಸ್ತೋತ್ರಸಿಂಹಾಸನದಲ್ಲಿ ಇರುವಾತನೇ, ನೀನು ಪವಿತ್ರಸ್ವರೂಪನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಇಸ್ರಾಯೇಲ್ಯರ ಸ್ತೋತ್ರಸಿಂಹಾಸನದಲ್ಲಿರುವಾತನೇ, ನೀನು ಪವಿತ್ರಸ್ವರೂಪನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ದೇವರೇ, ಪರಿಶುದ್ಧನು ನೀನೇ. ನೀನು ರಾಜನಂತೆ ಕುಳಿತಿರುವೆ. ಇಸ್ರೇಲರ ಸ್ತುತಿಗಳೇ ನಿನ್ನ ಸಿಂಹಾಸನ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನೀವು ಪರಿಶುದ್ಧರು; ನೀವು ಇಸ್ರಾಯೇಲರ ಸ್ತೋತ್ರ ಸಿಂಹಾಸನದಲ್ಲಿರುವಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 22:3
11 ತಿಳಿವುಗಳ ಹೋಲಿಕೆ  

ಧನ್ಯವಾದದ ಬಲಿಯನರ್ಪಿಸುವವನೇ ನನಗೆ ಸನ್ಮಾನಿತನು I ಸನ್ಮಾರ್ಗ ಹಿಡಿದವನಿಗೆ ತೋರುವೆ ಪರಮ ಜೀವೋದ್ಧಾರವನು II


ಅವರೊಬ್ಬರೇ ನಿಮ್ಮ ಸ್ತುತಿಸ್ತೋತ್ರಕ್ಕೆ ಪಾತ್ರರು; ಅವರು ನಿಮ್ಮ ದೇವರು; ನೀವು ನೋಡಿದ ಆ ಮಹಾಭಯಂಕರವಾದ ಮಹತ್ಕಾರ್ಯಗಳನ್ನು ನಿಮ್ಮ ಪರವಾಗಿ ನಡೆಸಿದವರು ಅವರೇ.


ಅವರಲ್ಲಿ ಒಬ್ಬನು ಮತ್ತೊಬ್ಬನಿಗೆ : “ಪವಿತ್ರ, ಪವಿತ್ರ, ಪವಿತ್ರ ಸೇನಾಧೀಶ್ವರ ಸರ್ವೇಶ್ವರ ಜಗವೆಲ್ಲ ಆತನ ಪ್ರಭಾವಭರಿತ” ಎಂದು ಕೂಗಿ ಹೇಳಿದನು.


ಆ ನಾಲ್ಕು ಜೀವಿಗಳಲ್ಲಿ ಪ್ರತಿಯೊಂದಕ್ಕೂ ಆರು ರೆಕ್ಕೆಗಳಿದ್ದವು. ಅವುಗಳ ಸುತ್ತಲು ಮತ್ತು ಒಳಗು ಅನೇಕ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳೂ : “ಪರಿಶುದ್ಧರು, ಪರಿಶುದ್ಧರು, ಪರಿಶುದ್ಧರು! ಸರ್ವಶಕ್ತರಾದ ಪ್ರಭು ದೇವರು ವರ್ತಮಾನಕಾಲದಲ್ಲಿ ಇರುವವರೂ ಭೂತಕಾಲದಲ್ಲಿ ಇದ್ದವರೂ ಭವಿಷ್ಯತ್‍ಕಾಲದಲ್ಲಿ ಬರುವವರೂ ಆಗಿದ್ದಾರೆ,” ಎಂದು ಹಾಡುತ್ತಿದ್ದವು.


ಘನಪಡಿಸಿರೆಮ್ಮ ಸ್ವಾಮಿ ದೇವನನು I ಶ್ರೀಪರ್ವತದಲಿ ವಂದಿಸಿ ಆತನನು I ಪರಮಪವಿತ್ರನು ಆ ನಮ್ಮ ದೇವನು II


ಸಿಯೋನಿನಲ್ಲಿ ಸಲ್ಲತಕ್ಕವು ನಿನಗೆ ಸ್ತುತಿಸ್ತೋತ್ರಗಳು I ಪೂರೈಸತಕ್ಕವು ದೇವಾ, ಜನರು ನಿನಗೆ ಹೊತ್ತ ಹರಕೆಗಳು II


ಎಲ್ಲ ಜೀವಿಗಳಿಗೆ ನೀ ಕೈ ನೀಡುವವನು I ಎಲ್ಲರ ಕೋರಿಕೆಗಳನು ಈಡೇರಿಸುವವನು II


‘ಇದೋ ಹಿಂಸಾಚಾರ’ ಎಂದು ನಾನು ಕೂಗಿಕೊಂಡರೂ ಕೇಳುವವರಿಲ್ಲ ನಾನು ಮೊರೆಯಿಟ್ಟರೂ ನನಗೆ ನ್ಯಾಯ ದೊರಕುವುದಿಲ್ಲ.


ದೇವರೇ, ನಾನು ಮೊರೆಯಿಟ್ಟರೂ ಉತ್ತರಕೊಡದಿರುವೆ ನಾನೆದ್ದು ನಿಂತರೂ ನೀನು ಸುಮ್ಮನೆ ನೋಡುತ್ತಿರುವೆ.


ನನ್ನ ಯೋಚನೆ ನಿನ್ನ ಬಳಿಸೇರಲಿ I ನನ್ನ ಕೂಗು ನಿನ್ನ ಕಿವಿಗೆ ಬೀಳಲಿ II


ನಾನೆಷ್ಟು ಕಾಲ ಸರ್ವೇಶ್ವರಾ, ಮೊರೆ ಇಡುತ್ತಿರಬೇಕು ನಿನಗೆ? ನೀನೆಷ್ಟು ಕಾಲ ಸುಮ್ಮನಿರುವೆ ಕಿವಿಗೊಡದೆ ನನಗೆ? ಹಿಂಸೆಯಾಗುತ್ತಿದೆಯೆಂದು ನಾ ಕೂಗಿದೆ; ಆದರೂ ನೀ ಸುಮ್ಮನಿರುವೆ, ರಕ್ಷಣೆ ನೀಡದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು