Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 23:4 - ಕನ್ನಡ ಸತ್ಯವೇದವು C.L. Bible (BSI)

4 ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀನು ಹತ್ತಿರವಿರುವುದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ಮತ್ತು ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ಹತ್ತಿರವಿರುವದರಿಂದ ಕೇಡಿಗೆ ಹೆದರೆನು; ನಿನ್ನ ದೊಣ್ಣೆಯೂ ನಿನ್ನ ಕೋಲೂ ನನಗೆ ಧೈರ್ಯ ಕೊಡುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ ನೀನು ನನ್ನೊಂದಿಗಿರುವುದರಿಂದ ಭಯಪಡುವುದಿಲ್ಲ. ನಿನ್ನ ದೊಣ್ಣೆಯೂ ಊರುಗೋಲೂ ನನ್ನನ್ನು ಸಂತೈಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಾನು ಕಾರ್ಗತ್ತಲಿನ ಕಣಿವೆಯಲ್ಲಿ ನಡೆಯುವಾಗಲೂ, ನೀವು ನನ್ನೊಂದಿಗಿರುವುದರಿಂದ ನಾನು ಕೇಡಿಗೆ ಹೆದರೆನು; ನಿಮ್ಮ ದೊಣ್ಣೆಯೂ ನಿಮ್ಮ ಕೋಲೂ ನನ್ನನ್ನು ಸಂತೈಸುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 23:4
26 ತಿಳಿವುಗಳ ಹೋಲಿಕೆ  

ಹೆದರಬೇಡ, ನಾನಿದ್ದೇನೆ ನಿನ್ನೊಂದಿಗೆ ಭಯಭ್ರಾಂತನಾಗಬೇಡ, ನಾನೇ ದೇವರು ನಿನಗೆ. ಶಕ್ತಿ ನೀಡುವೆ, ಸಹಾಯಮಾಡುವೆ ನಿನಗೆ ನನ್ನ ವಿಜಯಹಸ್ತದ ಆಧಾರ ಇದೆ ನಿನಗೆ.


ಪ್ರಭು ನನ್ನ ಕಡೆ ಇರಲು ಭಯಪಡೆನು I ನನಗೇನು ಮಾಡಿಯಾನು ಮನುಜನು? II


ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II


ಶತ್ರುಗಳು ಸಾವಿರಾರಿದ್ದರೂ ನಾನವರಿಗಂಜೆನು II ಸುತ್ತುವರಿದು ಸನ್ನದ್ಧರಾಗಿದ್ದರೂ ಭಯಪಡೆನು II


ಬೆಳಗಿಸಲು ಇರುಳಿನಲು, ಮರಣದ ಮುಸುಕಿನಲು ಬಾಳುವವರನು I ನಮ್ಮ ಕಾಲುಗಳನ್ನೂರಿಸಿ ನಡೆಯಲು ಶಾಂತಿಪಥದೊಳು II


ಸರ್ವೇಶ್ವರಾ, ನಿಮ್ಮ ಮಂದೆಗೆ ಸೇರಿದ ಜನರನ್ನು ಕುರಿಗಾಹಿಯಂತೆ ಪರಿಪಾಲಿಸಿರಿ. ನಿಮ್ಮ ಸ್ವಾಸ್ತ್ಯವಾಗಿ, ಮಂದೆಯಾಗಿ ಇರುವಂಥ ಜನರು, ಸುತ್ತಮುತ್ತಲು ಫಲವತ್ತಾದ ಹಸಿರು ಭೂಮಿಯಿದ್ದರೂ ಮರಳುಗಾಡಿನಲ್ಲಿ ಪ್ರತ್ಯೇಕವಾಗಿ ಜೀವಿಸುತ್ತಿರುವರು. ಪೂರ್ವಕಾಲದಲ್ಲಿದ್ದಂತೆ, ಈಗ ಅವರು ಬಾಷಾನ್ ಮತ್ತು ಗಿಲ್ಯಾದ್ ನಾಡುಗಳಿಗೆ ತೆರಳಿ ಪೋಷಣೆ ಪಡೆಯಲಿ.


ನಮ್ಮ ಕಡೆಯಿರುವನು ಸೇನಾಧೀಶ್ವರ ಪ್ರಭುವು I ಯಕೋಬ ಕುಲದೇವರು ನಮಗಾಶ್ರಯ ದೇವರು II


ನಾನು ನಿಮಗೆ ಆಜ್ಞಾಪಿಸಿದ ಸಕಲವನ್ನೂ ಅನುಸರಿಸುವಂತೆ ಅವರಿಗೆ ಬೋಧಿಸಿರಿ. ಇಗೋ, ಲೋಕಾಂತ್ಯದವರೆಗೂ ಸದಾ ನಾನು ನಿಮ್ಮೊಡನೆ ಇರುತ್ತೇನೆ,” ಎಂದರು


“ಇಮ್ಮಾನುವೇಲ್” ಎಂದರೆ, “ದೇವರು ನಮ್ಮೊಡನೆ ಇದ್ದಾರೆ” ಎಂದು ಅರ್ಥ.


ಪ್ರಭು ನಿನ್ನೊಂದಿಗಿರಲಿ, ದೇವರ ಅನುಗ್ರಹ ನಿಮ್ಮೆಲ್ಲರಲ್ಲೂ ಇರಲಿ!


ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?


ಆದರೂ ನಮ್ಮನ್ನು ತಂದು ನಾಯಿನರಿಗಳ ಪಾಲಾಗಿಸಿರುವೆ I ಕಾರ್ಗತ್ತಲೆಮ್ಮನು ಸುತ್ತುವರಿಯುವಂತೆ ಮಾಡಿರುವೆ II


ಸಜ್ಜನರ ಸಂಗದೊಳು ದೇವನಿರಲು I ದುರ್ಜನರಿದೋ ದಿಗ್ಭ್ರಾಂತರಾಗುವರು II


ಕಾರ್ಮೋಡಗಳು ಅದನ್ನು ಕವಿಯಲಿ ಇರುಳೂ ಮರಣದ ನೆರಳೂ ಅದನ್ನು ಆಕ್ರಮಿಸಲಿ ಹಗಲನ್ನೇ ಮಬ್ಬಾಗಿಸುವ ಮುಸುಕು ಅದನ್ನು ಹೆದರಿಸಲಿ.


ಬಳಿಕ ಎಲ್ಲ ರಾಷ್ಟ್ರಗಳೊಂದಿಗೆ ನಾನು ಮಾಡಿಕೊಂಡಿದ್ದ ಒಡಂಬಡಿಕೆಯನ್ನು ರದ್ದುಗೊಳಿಸಬೇಕೆಂದು ‘ಕೃಪೆ’ ಎಂಬ ಕೋಲನ್ನು ಮುರಿದುಬಿಟ್ಟೆ.


ಸಿಯೋನಿನ ಹೊರಗು ವಿಸ್ತರಿಸುವನು ಪ್ರಭು ನಿನ್ನ ರಾಜ್ಯದಾಳಿಕೆಯನು I ನಿನ್ನ ವೈರಿ ವಿರೋಧಿಗಳ ನಟ್ಟನಡುವೆಯೆ ದೊರೆತನ ಮಾಡುವೆ ನೀನು II


ಅಂಥವರಿಗೆ ಕಾರ್ಗತ್ತಲೇ ಬೆಳಗಿನ ಜಾವ ಕಾರ್ಗತ್ತಲಿನ ಅಪಾಯಗಳೇ ಅವರಿಗೆ ಪರಿಚಯ.


ಆ ದಿನದಲ್ಲಿ ವಿವಿಧ ಭಾಷೆಗಳನ್ನಾಡುವ ರಾಷ್ಟ್ರಗಳಿಂದ ಹತ್ತು ಹತ್ತು ಮಂದಿ ಬಂದು ಯೆಹೂದ್ಯನೊಬ್ಬನ ಸೆರಗನ್ನು ಹಿಡಿದುಕೊಂಡು, ‘ನಾವೂ ನಿಮ್ಮೊಂದಿಗೆ ಬರುತ್ತೇವೆ. ಏಕೆಂದರೆ ದೇವರು ನಿಮ್ಮೊಡನೆ ಇದ್ದಾರೆ ಎಂಬ ಸುದ್ದಿಯನ್ನು ಕೇಳಿದ್ದೇವೆ’ ಎಂದು ಹೇಳುವರು. ಇದು ಸೇನಾಧೀಶ್ವರ ಸರ್ವೇಶ್ವರಸ್ವಾಮಿಯ ನುಡಿ.”


ಕೂಡಲೆ ಜುದೇಯ ಮತ್ತು ಇಸ್ರಯೇಲ್ ನಡುವೆ ಇದ್ದ ಸೋದರ ಸಂಬಂಧವನ್ನು ಮುರಿಯಬೇಕೆಂದು ‘ಐಕ್ಯ’ವೆಂಬ ನನ್ನ ಎರಡನೇ ಕೋಲನ್ನು ಮುರಿದುಬಿಟ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು