Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 23:5 - ಕನ್ನಡ ಸತ್ಯವೇದವು C.L. Bible (BSI)

5 ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ, ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ವೈರಿಗಳ ಮುಂದೆಯೇ ನೀನು ನನಗೋಸ್ಕರ ಔತಣವನ್ನು ಸಿದ್ಧಪಡಿಸುತ್ತೀ; ನನ್ನ ತಲೆಗೆ ತೈಲವನ್ನು ಹಚ್ಚಿಸುತ್ತೀ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ವೈರಿಗಳ ಎದುರಿನಲ್ಲಿ ನೀನು ನನಗೆ ಔತಣವನ್ನು ಸಿದ್ಧಪಡಿಸಿರುವೆ; ನನ್ನ ತಲೆಗೆ ಎಣ್ಣೆಯನ್ನು ಹಚ್ಚಿರುವೆ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನೀವು ನನ್ನ ವೈರಿಗಳ ಮುಂದೆಯೇ ನನಗೊಂದು ಔತಣವನ್ನು ಸಿದ್ಧಮಾಡುತ್ತೀರಿ. ನೀವು ನನ್ನ ತಲೆಗೆ ತೈಲವನ್ನು ಅಭಿಷೇಕಿಸುತ್ತೀರಿ. ನನ್ನ ಪಾತ್ರೆಯು ತುಂಬಿ ಹೊರಸೂಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 23:5
23 ತಿಳಿವುಗಳ ಹೋಲಿಕೆ  

ನಮ್ಮಲ್ಲಿ ಕಾರ್ಯಸಾಧಿಸುವ ಹಾಗೂ ನಮ್ಮ ಆಶೆ-ಆಕಾಂಕ್ಷೆಗಿಂತಲೂ ಬೇಡಿಕೆ-ಕೋರಿಕೆಗಿಂತಲೂ ಅಧಿಕವಾದುದನ್ನು ಮಾಡಲು ದೇವರು ಶಕ್ತರು. ಅವರಿಗೆ ಧರ್ಮಸಭೆಯಲ್ಲೂ ಕ್ರಿಸ್ತಯೇಸುವಿನಲ್ಲೂ ಯುಗಯುಗಾಂತರಕ್ಕೂ ತಲತಲಾಂತರಕ್ಕೂ ಮಹಿಮೆ ಸಲ್ಲಲಿ! ಆಮೆನ್.


ನಿನ್ನ ಶತ್ರುಗಳ ವಿನಾಶ ನಿಶ್ಚಿತ I ಕೆಡುಕರೆಲ್ಲ ಚದರಿ ಪೋಪುದು ಖಚಿತ II


ಪ್ರೀತಿಸಿದೆ ನೀನು ಧರ್ಮವನು ದ್ವೇಷಿಸಿದೆ ಅಧರ್ಮವನು I ಆನಂದ ತೈಲದಿಂದಭಿಷೇಕಿಸಿಹನು ನಿನ್ನ, ದೇವನು I ಮಿತ್ರರಿಗಿಂತ ಮಿಗಿಲಾಗಿ ಅಭಿಷೇಕಿಸಿಹನು ಆತನು ನಿನ್ನನು II


ನನ್ನ ಸ್ವತ್ತೂ ಸ್ವಾಸ್ತ್ಯವೂ ನೀನೇ I ನಿನ್ನ ಕೈಯಲ್ಲಿದೆ ಪ್ರಭು, ನನ್ನ ವಿಮೆ II


ಅಂತೆಯೆ, ಕಷ್ಟದಿಂದ ನಿನ್ನನ್ನು ತಪ್ಪಿಸಬೇಕೆಂಬುದು ಇಕ್ಕಟ್ಟಿಲ್ಲದ ಬಯಲಿಗೆ ನಿನ್ನನ್ನು ತರಬೇಕೆಂಬುದು ನಿನ್ನ ಊಟದ ಮೇಜು ಸಮೃದ್ಧಿಯಾಗಿರಬೇಕೆಂಬುದು ದೇವರ ಉದ್ದೇಶವಾಗಿರುವುದು.


ನೀವಾದರೋ ಪರಿಶುದ್ಧವಾದವರಿಂದ ಅಭಿಷಿಕ್ತರಾಗಿದ್ದೀರಿ. ಸತ್ಯವನ್ನು ಅರಿತವರಾಗಿದ್ದೀರಿ.


ನೀವು ಕ್ರಿಸ್ತಯೇಸುವಿನಿಂದ ಅಭಿಷಿಕ್ತರಾಗಿದ್ದೀರಿ. ಆ ಅಭಿಷೇಕವು ನಿಮ್ಮಲ್ಲಿ ನೆಲೆಸಿದೆ. ಆದ್ದರಿಂದ ಯಾರೂ ನಿಮಗೆ ಬೋಧಿಸುವ ಅವಶ್ಯಕತೆಯಿಲ್ಲ. ಆ ಅಭಿಷೇಕವೇ ನಿಮಗೆ ಎಲ್ಲವನ್ನೂ ಬೋಧಿಸುತ್ತಾ ಬರುತ್ತದೆ. ಈ ಬೋಧನೆ ಸತ್ಯವಾದುದು, ಮಿಥ್ಯವಾದುದಲ್ಲ. ಅದರ ಪ್ರಕಾರವೇ ಕ್ರಿಸ್ತಯೇಸುವಿನಲ್ಲಿ ನೆಲೆಸಿರಿ.


ನಿಮ್ಮನ್ನೂ ನಮ್ಮನ್ನೂ ಕ್ರಿಸ್ತಯೇಸುವಿನಲ್ಲಿ ಒಂದಾಗಿಸಿ ಸ್ಥಿರಪಡಿಸಿದವರು ದೇವರೇ. ನಮ್ಮನ್ನು ಅಭಿಷೇಕಿಸಿದವರೂ ಮೀಸಲಾಗಿಟ್ಟವರೂ ದೇವರೇ.


ನಾವು ದೇವರಿಗೆ ಕೃತಜ್ಞತಾಸ್ತೋತ್ರವನ್ನು ಸಲ್ಲಿಸಿ ಪಾನಪಾತ್ರೆಯಿಂದ ಕುಡಿಯುವಾಗ ಕ್ರಿಸ್ತಯೇಸುವಿನ ರಕ್ತದಲ್ಲಿ ಪಾಲುಗೊಳ್ಳುತ್ತೇವಲ್ಲವೇ? ರೊಟ್ಟಿಯನ್ನು ಮುರಿದು ತಿನ್ನುವಾಗ ಕ್ರಿಸ್ತಯೇಸುವಿನ ಶರೀರದಲ್ಲಿ ಪಾಲುಗೊಳ್ಳುತ್ತೇವಲ್ಲವೇ?


ನಿಮಗೆ ಈಗ ದುಃಖವಿದೆ; ನಾನು ನಿಮ್ಮನ್ನು ಮರಳಿ ಕಂಡಾಗ, ಹರ್ಷಿಸುವಿರಿ. ಆ ಹರ್ಷವನ್ನು ಯಾರೂ ನಿಮ್ಮಿಂದ ಕಸಿದುಕೊಳ್ಳುವುದಿಲ್ಲ.


ಒದಗಿಸುವೆ ಬೇಸಾಯದ ಆಹಾರವನು I ಹೃದಯವನು ಮುದಗೊಳಿಸುವ ದ್ರಾಕ್ಷಾರಸವನು I ಮುಖಕೆ ಮೆರಗನ್ನೀಯುವ ತಿಳಿತೈಲಗಳನು I ದೇಹವನು ಗಟ್ಟಿಮುಟ್ಟಾಗಿಸುವ ರೊಟ್ಟಿಯನು II


ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.


ಎತ್ತಿ ಹಿಡಿವೆನು ರಕ್ಷಣೆಯ ಪಾನಪಾತ್ರೆಯನು I ಪ್ರಖ್ಯಾತಪಡಿಸುವೆನು ಪ್ರಭುವಿನ ನಾಮವನು II


ಹರಿವುದು ಸ್ತುತಿ ಭಕ್ತರ ಬಾಯಿಂದ; ತುಂಬುವುದು ದಲಿತರುದರ I ಇರಲಿ ಚೈತನ್ಯಭರಿತ ನಿಮ್ಮಂತರಂಗವು ನಿರಂತರ II


ಜರೆವ ಮಾತಿನಲಿ ಆಡಿಕೊಂಡರಿಂತು : I “ಅಡವಿಯಲ್ಲಿ ದೇವನೂಟ ಬಡಿಸುವನೆಂತು?” II


ನನ್ನ ತಲೆಗೆ ನೀನು ಎಣ್ಣೆ ಹಚ್ಚಲಿಲ್ಲ; ಈಕೆಯೋ ನನ್ನ ಪಾದಗಳಿಗೆ ಸುಗಂಧ ತೈಲವನ್ನು ಹಚ್ಚಿರುವಳು.


ಬೋಗುಣಿಬಟ್ಟಲುಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುವವರೇ, ಅತ್ಯುತ್ತಮ ಸುಗಂಧತೈಲಗಳನ್ನು ಲೇಪಿಸಿಕೊಳ್ಳುವವರೇ, ನಿಮಗೆ ಧಿಕ್ಕಾರ! ಏಕೆಂದರೆ ನೀವು ಜೋಸೆಫನ ವಂಶದವರ ವಿನಾಶದ ಬಗ್ಗೆ ನಿಶ್ಚಿಂತರಾಗಿದ್ದೀರಿ.


ತಲೆಬಾಗುವರಾತನಿಗೆ ಧರೆಯ ಗರ್ವಿಗಳೆಲ್ಲರು I ಅಡ್ಡಬೀಳುವರವನಿಗೆ ಮರ್ತ್ಯಮಾನವರೆಲ್ಲರು II


ಆದರೆ ನೀನು ಉಪವಾಸ ಕೈಗೊಂಡಾಗ ಮುಖ ತೊಳೆದುಕೊ, ತಲೆಬಾಚಿಕೊ.


ನಾ ಕಣ್ಣಾರೆ ಕಂಡಿರುವೆ ಶತ್ರುಗಳಿಗಾದ ದುರ್ಗತಿಯನು I ಕಿವಿಯಾರೆ ಕೇಳಿರುವೆ ನನ್ನ ವಿರೋಧಿಗಳಿಗಾದ ವಿಪತ್ತನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು