ಕೀರ್ತನೆಗಳು 24:1 - ಕನ್ನಡ ಸತ್ಯವೇದವು C.L. Bible (BSI)1 ಪೊಡವಿಯೂ ಅದರಲ್ಲಿರುವುದೆಲ್ಲವೂ ಪ್ರಭುವಿನದೇ I ಜಗವೂ ಅದರ ಜೀವಜಂತುಗಳೆಲ್ಲವೂ ಆತನದೇ II ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಮತ್ತು ಅದರ ನಿವಾಸಿಗಳೂ ಆತನವೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)1 ಭೂವಿುಯೂ ಅದರಲ್ಲಿರುವ ಸಮಸ್ತವೂ ಯೆಹೋವನದು; ಲೋಕವೂ ಅದರ ನಿವಾಸಿಗಳೂ ಆತನವೇ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವನದೇ. ಲೋಕವೂ ಅದರ ನಿವಾಸಿಗಳೂ ಆತನವೇ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಭೂಮಿಯೂ ಅದರಲ್ಲಿರುವ ಸಮಸ್ತವೂ ಯೆಹೋವ ದೇವರದ್ದೇ; ಲೋಕವೂ ಅದರ ನಿವಾಸಿಗಳೂ ಅವರಿಗೇ ಸೇರಿದ್ದು. ಅಧ್ಯಾಯವನ್ನು ನೋಡಿ |
ಸರ್ವೇಶ್ವರ ಇಂತೆನ್ನುತ್ತಾರೆ: “ಸಿಯೋನ್ ನಗರಿಯೇ, ಎದ್ದು ಒಕ್ಕಣೆಮಾಡು. ಇದಕ್ಕಾಗಿ ನಿನ್ನ ಕೊಂಬನ್ನು ಕಬ್ಬಿಣವಾಗಿಸುವೆನು. ನಿನ್ನ ಗೊರಸನ್ನು ಕಂಚನ್ನಾಗಿ ಮಾಡುವೆನು. ಅನೇಕ ರಾಷ್ಟ್ರಗಳನ್ನು ನೀನು ತುಳಿದು ಧ್ವಂಸಮಾಡುವೆ. ಅವುಗಳನ್ನು ಕೊಳ್ಳೆಹೊಡೆದು ತಂದ ಸ್ವತ್ತನ್ನು ಸರ್ವೇಶ್ವರಸ್ವಾಮಿಗೆ ಮೀಸಲಾಗಿಡುವೆ. ಅವುಗಳಿಂದ ಬಂದ ಆಸ್ತಿಯನ್ನು ಲೋಕದೊಡೆಯನಿಗೆ ಪ್ರತ್ಯೇಕಿಸಿಡುವೆ.”