Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 24:6 - ಕನ್ನಡ ಸತ್ಯವೇದವು C.L. Bible (BSI)

6 ಇಂಥವರೆ ದೇವರ ದರ್ಶನಾಭ್ಯರ್ಥಿಗಳು I ಇಂಥವರೆ ಯಕೋಬ ದೇವನ ಭಕ್ತಾದಿಗಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಇಂಥವರೇ ಆತನ ದರ್ಶನವನ್ನು ಬಯಸುವವರು. ಯಾಕೋಬ್ಯರ ದೇವರೇ, ನಿನ್ನ ಸಾನ್ನಿಧ್ಯವನ್ನು ಸೇರುವವರು ಇಂಥವರೇ. ಸೆಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆತನನ್ನು ಅನುಸರಿಸುವವರು ಇಂಥವರೇ. ಸಹಾಯಕ್ಕಾಗಿ ಯಾಕೋಬನ ದೇವರ ಬಳಿಗೆ ಹೋಗುವವರು ಇಂಥವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇಂಥವರೇ ದೇವರನ್ನು ಹುಡುಕುವ ಸಂತತಿಯು; ಯಾಕೋಬನ ದೇವರೇ, ನಿಮ್ಮನ್ನು ಹುಡುಕುವವರು ಇಂಥವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 24:6
8 ತಿಳಿವುಗಳ ಹೋಲಿಕೆ  

“ಅರಸೆನ್ನ ಮುಖದರುಶನವನು", ಎಂದೆ ನೀನು I “ಅರಸುವೆನು ಅದನೆ", ಎಂದು ಮರುನುಡಿದೆ ನಾನು II


ಅರಸಿರಿ ಪ್ರಭುವನೂ ಆತನ ಶಕ್ತಿಯನೂ I ಅಪೇಕ್ಷಿಸಿ ನಿತ್ಯವೂ ಆತನ ದರ್ಶನವನು II


ದೈವವಾಗ್ದಾನಕ್ಕೆ ವಿಶ್ವಾಸವೇ ಆಧಾರ. ಇವೆಲ್ಲಕ್ಕೂ ದೈವಾನುಗ್ರಹವೇ ಮೂಲ. ಇವು ಅಬ್ರಹಾಮನ ಸಂತತಿಯವರಿಗೆ, ಅಂದರೆ ಧರ್ಮಶಾಸ್ತ್ರವನ್ನು ಅನುಸರಿಸಿ ನಡೆಯುವವರಿಗೆ ಮಾತ್ರವಲ್ಲ, ಅಬ್ರಹಾಮನಂತೆ ದೇವರಲ್ಲಿ ವಿಶ್ವಾಸ ಇಟ್ಟವರೆಲ್ಲರಿಗೂ ಖಚಿತವಾಗಿ ದೊರೆಯುತ್ತದೆ. ಏಕೆಂದರೆ, ಅಬ್ರಹಾಮನೇ ನಮ್ಮೆಲ್ಲರಿಗೂ ಮೂಲಪಿತ.


ವಂದಿಪುದು ಪ್ರಭುವನು ಮುಂದಿನ ಪೀಳಿಗೆ I ಸಾರುವುದಾತನ ವದಂತಿಯನು ಜನರಿಗೆ II


ನೀವು ದೇವರು ಆಯ್ದುಕೊಂಡ ಜನಾಂಗ, ರಾಜಯಾಜಕರು, ಪವಿತ್ರ ಪ್ರಜೆ, ದೇವರ ಸ್ವಕೀಯ ಜನ; ಅವರ ಅದ್ಭುತ ಕಾರ್ಯಗಳನ್ನು ಪ್ರಚುರಪಡಿಸುವುದಕ್ಕಾಗಿಯೇ ಆಯ್ಕೆಯಾದವರು. ಕಾರ್ಗತ್ತಲಿನಿಂದ ತಮ್ಮ ಅದ್ಭುತಕರವಾದ ಬೆಳಕಿಗೆ ನಿಮ್ಮನ್ನು ಕರೆತಂದವರು ಅವರೇ.


ತಮ್ಮ ಬಳಿಗೆ ಬರುತ್ತಿದ್ದ ನತಾನಿಯೇಲನನ್ನು ಕಂಡ ಯೇಸು, “ಇಗೋ ನೋಡಿ, ನಿಜವಾದ ಇಸ್ರಯೇಲನು, ಈತನಲ್ಲಿ ಕಪಟವಿಲ್ಲ,” ಎಂದು ನುಡಿದರು.


ಸರ್ವೇಶ್ವರನ ಚಿತ್ತದಂತೆ ಜಜ್ಜರಿತನಾದ ಹಿಂಸೆಬಾಧೆಗಳಿಂದ ಪಾಪ ಪ್ರಾಯಶ್ಚಿತ್ತಕ್ಕಾಗಿ ತನ್ನ ಪ್ರಾಣವನೆ ಸಮರ್ಪಿಸಿದ. ಈ ಪರಿ ಕಾಣುವನು ತನ್ನ ಸಿರಿಸಂತಾನವನು ಪಡೆಯುವನು ಚಿರಜೀವವನು ತಾನೇ ನೆರವೇರಿಸುವೆನು ಸರ್ವೇಶ್ವರನ ಸಂಕಲ್ಪವನು.


ನಾ ಬಾಯ್ದೆರೆದು ನುಡಿದಿದ್ದೆನಾದರೆ ಈ ಪರಿ I ನಿನ್ನ ಭಕ್ತಕುಲಕೆ ನಾ ದ್ರೋಹಿಯೇ ಸರಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು