Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 24:8 - ಕನ್ನಡ ಸತ್ಯವೇದವು C.L. Bible (BSI)

8 ಯಾರಿವನು ಮಹಿಮಾವಂತ ರಾಜಾಧಿರಾಜನು? I ಇವನೇ ಪ್ರಭು, ಯುದ್ಧವೀರನು, ಶಕ್ತಿಸಮರ್ಥನು! II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮಹಾಮಹಿಮೆಯುಳ್ಳ ಈ ಅರಸನು ಯಾರು? ಮಹಾ ಬಲಿಷ್ಠನೂ, ವಿಶೇಷ ಪರಾಕ್ರಮಿಯೂ ಆಗಿರುವ ಯೆಹೋವ, ಯುದ್ಧವೀರನಾಗಿರುವ ಯೆಹೋವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಮಹಾಪ್ರಭಾವವುಳ್ಳ ಈ ಅರಸನು ಯಾರು? ಮಹಾ ಬಲಿಷ್ಠನೂ ವಿಶೇಷ ಪರಾಕ್ರವಿುಯೂ ಆಗಿರುವ ಯೆಹೋವ, ಯುದ್ಧವೀರನಾಗಿರುವ ಯೆಹೋವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮಹಿಮಾಸ್ವರೂಪನಾದ ಈ ರಾಜನು ಯಾರು? ಬಲಿಷ್ಠನೂ ಮಹಾಪರಾಕ್ರಮಿಯೂ ಆಗಿರುವ ಯೆಹೋವನೇ ಆತನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಈ ಮಹಿಮೆಯ ಅರಸ ಯಾರು? ಬಲವೂ ಪರಾಕ್ರಮವೂ ಉಳ್ಳ ಯೆಹೋವ ದೇವರೇ ಆಗಿರುತ್ತಾರೆ. ಯೆಹೋವ ದೇವರು ಯುದ್ಧದಲ್ಲಿ ಪರಾಕ್ರಮವುಳ್ಳವರು ಆಗಿರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 24:8
11 ತಿಳಿವುಗಳ ಹೋಲಿಕೆ  

ಆಗ ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಕುಳಿತಿದ್ದವನ ಕೈಯಲ್ಲಿ ಬಿಲ್ಲೊಂದು ಇತ್ತು. ಅವನಿಗೆ ಜಯಮಾಲೆಯನ್ನು ಹಾಕಲಾಗಿತ್ತು. ಅವನು ಜಯಪ್ರದನಾಗಿ, ಜಯದ ಮೇಲೆ ಜಯಗಳಿಸುವ ಸಲುವಾಗಿ ಹೊರಟುಹೋದನು.


ಸರ್ವೇಶ್ವರನು ಯುದ್ಧಶೂರನು ‘ಸರ್ವೇಶ್ವರ’ ಎಂಬುದು ಆತನ ನಾಮಧೇಯವು.


ಬಲಾಢ್ಯ ಒಡೆಯರನ್ನೂ ಅಧಿಕಾರಿಗಳನ್ನೂ ನಿರಾಯುಧರನ್ನಾಗಿ ಮಾಡಿ, ತಾವು ಗಳಿಸಿದ ಜಯದ ನಿಮಿತ್ತ ಜನರೆಲ್ಲರ ಮುಂದೆ ಶಿಲುಬೆಯ ವಿಜಯೋತ್ಸವದಲ್ಲಿ ಅವರನ್ನು ಸೆರೆಯಾಳುಗಳನ್ನಾಗಿ ಪ್ರದರ್ಶಿಸಿದ್ದಾರೆ.


ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II


ಮಗುವೊಂದು ಹುಟ್ಟಿತೆಮಗೆ ವರಪುತ್ರನನು ಕೊಟ್ಟರೆಮಗೆ. ಆತನ ಕೈಯಲ್ಲಿಹುದು ರಾಜ್ಯಾಡಳಿತ ‘ಅದ್ಭುತಶಾಲಿ’, ಮಂತ್ರಿಶ್ರೇಷ್ಠ’ ‘ಪರಾಕ್ರಮದೇವ’, ‘ಅನಂತ ಪಿತ’, ‘ಶಾಂತಿ ನೃಪ’ - ಇವು ಆತನ ನಾಮಾಂಕಿತ.


ದೇವಾಧಿದೇವನಾದ ಪ್ರಭುವಿನ ನುಡಿ ಇಡೀ ಜಗಕೆ I ಆತನ ಸನ್ನಿಧಿಗೆ ಕರೆ, ಪೂರ್ವದಿಂದ ಪಶ್ಚಿಮದವರೆಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು