Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:11 - ಕನ್ನಡ ಸತ್ಯವೇದವು C.L. Bible (BSI)

11 ನಿನ್ನ ನಾಮದ ನಿಮಿತ್ತ ನನ್ನನು ಈಕ್ಷಿಸು I ಎನ್ನ ಘೋರ ಪಾಪವನು ಪ್ರಭು ಕ್ಷಮಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿಮಿತ್ತ ಅದನ್ನು ಕ್ಷಮಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನೇ, ನನ್ನ ಪಾಪವು ಬಹುಘೋರವಾಗಿದೆ; ಆದರೂ ನಿನ್ನ ಹೆಸರಿನ ನಿವಿುತ್ತ ಅದನ್ನು ಕ್ಷವಿುಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನೇ, ನಾನು ಅನೇಕ ಪಾಪಗಳನ್ನು ಮಾಡಿದ್ದೇನೆ. ಆದರೆ ನೀನು ನಿನ್ನ ಹೆಸರಿನ ನಿಮಿತ್ತ ಅವುಗಳನ್ನೆಲ್ಲಾ ಕ್ಷಮಿಸಿಬಿಟ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ನನ್ನ ಅನ್ಯಾಯವು ಬಹು ಘೋರವಾಗಿದ್ದರೂ ನಿಮ್ಮ ಹೆಸರಿನ ನಿಮಿತ್ತ ಯೆಹೋವ ದೇವರೇ ನನ್ನನ್ನು ಮನ್ನಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:11
14 ತಿಳಿವುಗಳ ಹೋಲಿಕೆ  

ದೇವಾ, ಮುಕ್ತಿದಾತ, ನೆರವಾಗು ನಿನ್ನ ನಾಮಮಹಿಮೆಯ ನಿಮಿತ್ತ I ಪಾಪಗಳನು ಅಳಿಸಿ ನಮ್ಮನುದ್ಧರಿಸು ನಿನ್ನ ನಾಮದ ಪ್ರಯುಕ್ತ II


ಬರೆಯುತಿಹೆನು ಪ್ರಿಯಮಕ್ಕಳಿರಾ, ಇದನ್ನು ಏಕೆನೆ, ಕ್ರಿಸ್ತನಾಮದ ನಿಮಿತ್ತ ಕ್ಷಮಿಸಲಾಯಿತು ನಿಮ್ಮ ಪಾಪಗಳನ್ನು.


ಕೈ ಹಿಡಿದು ನಡೆಸೆನ್ನನು ನಿನ್ನ ನಾಮ ನಿಮಿತ್ತ I ನೀನೆನಗೆ ಪೊರೆಬಂಡೆ, ಸ್ಥಿರ ಕೋಟೆಕೊತ್ತಲ II


ಆದರೂ ನಾನೇ ನಾನಾಗಿ ಅಳಿಸಿಬಿಡುವೆ ನಿನ್ನ ದ್ರೋಹಗಳನು, ನನ್ನ ನೆನಪಿನಿಂದ ತೆಗೆದುಹಾಕುವೆ ನಿನ್ನ ಪಾಪಗಳನು.


ಆದರೆ ಆದಾಮನ ಪಾಪಕ್ಕೂ ದೇವರ ಅನುಗ್ರಹಕ್ಕೂ ವ್ಯತ್ಯಾಸವಿದೆ. ಒಬ್ಬ ಮನುಷ್ಯನ ಅಪರಾಧದಿಂದ ಎಲ್ಲರೂ ಮರಣಕ್ಕೊಳಗಾದರು ಎಂಬುದೇನೋ ನಿಜ. ಆದರೆ ದೇವರ ಅನುಗ್ರಹವು ಅದಕ್ಕಿಂತಲೂ ಅತ್ಯಧಿಕವಾದುದು. ಅಂತೆಯೇ, ಯೇಸುಕ್ರಿಸ್ತ ಎಂಬ ಒಬ್ಬ ಮಹಾತ್ಮನ ಅನುಗ್ರಹದಿಂದ ಲಭಿಸುವ ಉಚಿತಾರ್ಥವರಗಳು ಇನ್ನೂ ಅಧಿಕಾಧಿಕವಾದುವು ಎಂಬುದೂ ನಿಜ.


“ಆದಕಾರಣ - ನೀನು ಇಸ್ರಯೇಲ್ ವಂಶದವರಿಗೆ ಹೀಗೆ ನುಡಿ - ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ಇಸ್ರಯೇಲ್ ವಂಶದವರೇ, ನಿಮ್ಮ ನಿಮಿತ್ತವಲ್ಲ, ನೀವು ಜನಾಂಗಗಳೊಳಗೆ ಸೇರಿ ಅಪಕೀರ್ತಿಗೆ ಗುರಿಮಾಡಿದ ನನ್ನ ಪರಿಶುದ್ಧ ನಾಮದ ನಿಮಿತ್ತವೆ, ಈ ರಕ್ಷಣಾಕಾರ್ಯವನ್ನು ಮಾಡುತ್ತೇನೆ.


ಆದರೂ, ‘ನಿಮ್ಮನ್ನು ಈಜಿಪ್ಟಿನಿಂದ ಪಾರುಮಾಡುವೆನು,’ ಎಂಬುದಾಗಿ ಜನಾಂಗಗಳ ಮುಂದೆಯೇ ನನ್ನನ್ನು ಇವರಿಗೆ ಪ್ರಕಟಿಸಿಕೊಂಡೆನಲ್ಲಾ ಎಂದು ಯೋಚಿಸಿ ಅವರ ಸುತ್ತಮುತ್ತಲಿನ ಆ ಜನಾಂಗಗಳ ಮುಂದೆ ನನ್ನ ಹೆಸರು ಅಪಕೀರ್ತಿಗೆ ಗುರಿಯಾಗದಂತೆ ನನ್ನ ಹೆಸರಿನ ನಿಮಿತ್ತವೇ ಸಹಿಸಿಕೊಂಡೆ.


ಆದರೂ ನನ್ನ ಹೆಸರು ಕೆಡದಂತೆ ತಡೆಹಿಡಿವೆನು ನಿನ್ನ ಮೇಲಣ ಕೋಪವನು; ನನ್ನ ಕೀರ್ತಿಗೆ ಕಳಂಕ ಬಾರದಂತೆ ತಾಳಿಕೊಳ್ಳುವೆನು, ನಿರ್ಮೂಲಮಾಡದೆ ನಿನ್ನನು.


ಹೇ ಪ್ರಭು, ದೇವಾ, ನನ್ನನಾದರಿಸು ಅಕ್ಕರೆಯಿಂದ I ನನ್ನ ಪಕ್ಷವಹಿಸಿ ರಕ್ಷಿಸು ನಿನ್ನ ನಾಮದ ಪ್ರಯುಕ್ತ II


ಜೀವಿಸಮಾಡೆನ್ನನು ಪ್ರಭು, ನಿನ್ನ ನಾಮದ ನಿಮಿತ್ತ I ನಿನ್ನ ನೀತಿಗನುಸಾರ ಬಿಡಿಸೆನ್ನ ಪ್ರಾಣವನು ಆಪತ್ತಿನಿಂದ II


ಸಾವಿರಾರು ತಲೆಗಳವರೆಗೂ ಅಚಲಪ್ರೀತಿ ತೋರುವವನು, ದೋಷಾಪರಾಧಗಳನ್ನೂ ಪಾಪಗಳನ್ನೂ ಕ್ಷಮಿಸುವವನು; ಆದರೂ ತಪ್ಪಿತಸ್ಥರನ್ನು ಶಿಕ್ಷಿಸದೆ ಬಿಡದವನು. ಹೆತ್ತವರ ದೋಷಪರಿಣಾಮಗಳನ್ನು ಮಕ್ಕಳ ಮೇಲೆ ಮೂರುನಾಲ್ಕು ತಲೆಗಳವರೆಗೆ ಬರಮಾಡುವವರು.


ಸರ್ವೇಶ್ವರಾ, ನಮ್ಮ ದ್ರೋಹಗಳು ಹಲವು ನಿಮಗೆ ವಿರುದ್ಧ ಪಾಪಮಾಡಿದೆವು. ನಮ್ಮ ಅಪರಾಧಗಳೇ ನಮಗೆ ವಿರುದ್ಧ ಸಾಕ್ಷಿ ನೀಡುತ್ತಿವೆ ಆದರೂ ನಿಮ್ಮ ನಾಮದ ನಿಮಿತ್ತ ಕೈನೀಡು ನಮಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು