Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:19 - ಕನ್ನಡ ಸತ್ಯವೇದವು C.L. Bible (BSI)

19 ಶತ್ರುಗಳಿಹರು ನೋಡು ಸಹಸ್ರಾರು I ಕ್ರೋಧದಿಂದೆನ್ನ ಹಗೆ ಮಾಡುತಿಹರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ನನಗೆ ಎಷ್ಟೋ ಶತ್ರುಗಳು ಇದ್ದಾರಲ್ಲಾ; ಅವರು ಕಡು ವೈರತ್ವದಿಂದ ನನ್ನನ್ನು ಹಗೆಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ನನಗೆ ಎಷ್ಟೋ ಮಂದಿ ಶತ್ರುಗಳು ಇದ್ದಾರಲ್ಲಾ; ಅವರು ಕಡು ವೈರದಿಂದ ನನ್ನನ್ನು ಹಗೆಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನನ್ನ ವೈರಿಗಳನ್ನೆಲ್ಲ ದೃಷ್ಟಿಸಿನೋಡು. ಅವರು ನನ್ನನ್ನು ದ್ವೇಷಿಸುತ್ತಾ ಕೇಡುಮಾಡಬೇಕೆಂದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನನ್ನ ಶತ್ರುಗಳನ್ನು ನೋಡಿರಿ, ಅವರು ಹೆಚ್ಚಾಗಿದ್ದಾರೆ; ತೀವ್ರ ಹಗೆಯಿಂದ ಅವರು ನನ್ನನ್ನು ದ್ವೇಷಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:19
21 ತಿಳಿವುಗಳ ಹೋಲಿಕೆ  

ಸಿಕ್ಕಿಕೊಂಡಿರುವೆ ನರಭಕ್ಷಕ ಸಿಂಹಗಳ ನಡುವೆ I ಅವುಗಳ ಹಲ್ಲುಗಳೊ ಭರ್ಜಿಬಾಣಗಳಂತಿವೆ I ನಾಲಿಗೆಗಳು ಹದವಾದ ಕತ್ತಿ ಕಠಾರಿಗಳಂತಿವೆ II


ವಿರೋಧಿಗಳು ದಿನವಿಡೀ ಬೆನ್ನಟ್ಟಿ ಬರುತಿಹರು I ಸೊಕ್ಕಿನಿಂದ ನನಗೆದುರಾಗಿ ನಿಂತಿರುವರು ಹಲವರು II


ಕ್ಷೌರಗತ್ತಿಗೂ ಹರಿತ ನಿನ್ನ ನಾಲಿಗೆ, ವಂಚಕನೆ I ಕಲ್ಪಿಸುವೆಯಾ ದಿನವೆಲ್ಲಾ ನಾಶವಿನಾಶವನೆ? II


ಬಲಿಷ್ಠ ವೈರಿಗಳು ವಿರೋಧಿಸುತಿಹರು ನಿಷ್ಕಾರಣವಾಗಿ I ಶತ್ರುಗಳನೇಕರು ದ್ವೇಷಿಸುತಿಹರು ಅನ್ಯಾಯವಾಗಿ II


ಆದರೆ ಅವರು, “ಇವನು ಜುದೇಯ ನಾಡಿನಲ್ಲೆಲ್ಲಾ ಬೋಧನೆಮಾಡುತ್ತಾ ಕ್ರಾಂತಿಗೆ ಕರೆಗೊಡುತ್ತಾನೆ; ಗಲಿಲೇಯದಲ್ಲಿ ಪ್ರಾರಂಭಿಸಿ ಇಲ್ಲಿಯವರೆಗೂ ಬಂದಿದ್ದಾನೆ,” ಎಂದು ಒತ್ತಾಯಪೂರ್ವಕವಾಗಿ ಆರೋಪಿಸಿದರು.


ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಯೇಸುಸ್ವಾಮಿಯನ್ನು ಕೊಲ್ಲಿಸಲು ಆಲೋಚನೆ ಮಾಡುತ್ತಿದ್ದರು; ಜನರ ಭಯ ಅವರಿಗೆ ಇದ್ದುದರಿಂದ ಅದಕ್ಕೆ ಗುಟ್ಟಾದ ಮಾರ್ಗವನ್ನು ಹುಡುಕುತ್ತಿದ್ದರು.


ಮಾಡಿಹನು ನನ್ನ ಪ್ರಾಣ ನೆಲಕಚ್ಚುವಂತೆ ಬೆನ್ನಟ್ಟಿಹಾ ವೈರಿ I ದೂಡಿಹನು ಎಂದೊ ಸತ್ತ ಶವದಂತೆ ಕಾರ್ಗತ್ತಲೆಗಾ ದ್ರೋಹಿ II


ಉಳಿಯದಿರಲಿ ನಾಡೊಳು ಚಾಡಿಕೋರರು I ಕೇಡಿಂದ ನಾಶವಾಗಲಿ ಹಿಂಸಕರು II


ಪ್ರಭು, ತಪ್ಪಿಸೆನ್ನನು ದುಷ್ಟರ ಕೈಯಿಂದ I ಕಾಪಾಡಿ ರಕ್ಷಿಸೆನ್ನನು ಹಿಂಸಕರಿಂದ I ನಾನೆಡವುದನೇ ನಿರೀಕ್ಷಿಸುವವರಿಂದ II


ಬಿಡಿಸೆನ್ನನು ಪ್ರಭು ಕೆಡುಕರಿಂದ I ಕಾಪಾಡೆನ್ನನು ಹಿಂಸಕರಿಂದ II


ಇಕ್ಕಟ್ಟಿನಲಿ ನಡೆವಾಗಲೂ ನೀ ರಕ್ಷಿಸುವೆ ಪ್ರಭು, ಪ್ರಾಣವನು I ಶತ್ರುಕೋಪಕೆ ವಿರುದ್ಧವಾಗಿ ತೋರುವೆ ನೀ ಮುಷ್ಟಿಯನು II


ಗರ್ವಿಗಳೆದ್ದಿಹರು ದೇವಾ, ನನ್ನ ವಿರುದ್ಧವಾಗಿ I ನನ್ನ ಪ್ರಾಣಕೆ ಕಾದಿಹರು ಕ್ರೂರಿಗಳು ಗುಂಪಾಗಿ I ಕಾಣುತ್ತಿಹರವರು ನಿನ್ನನು ಪ್ರಭು, ಅಲಕ್ಷ್ಯವಾಗಿ II


ತಳ್ಳಬೇಡೆನ್ನನು ವೈರಿಗಳ ವಶಕ್ಕೆ I ಸುಳ್ಳುಸಾಕ್ಷಿಗಳು, ಕ್ರೂರಿಗಳವರೆನಗೆ II


ಕೇಡು ಮಾಡಬಂದರೆನಗೆ ಕೊಲೆಗಡುಕರು I ಎಡವಿಬಿದ್ದರು, ತಾವೇ ಅಳಿದುಹೋದರು II


ಶತ್ರುಗಳಿಂದ ನೀನೆನ್ನ ಮುಕ್ತಗೊಳಿಸಿದೆ I ಎದುರಾಳಿಗೆ ತಪ್ಪಿಸಿ ನನ್ನನ್ನುನ್ನತಿಗೇರಿಸಿದೆ I ಹಿಂಸಾತ್ಮಕರಿಂದ ನೀಯೆನ್ನ ಸಂರಕ್ಷಿಸಿದೆ II


ಪರೀಕ್ಷಿಸುವನು ಪ್ರಭು ಸಜ್ಜನ ದುರ್ಜನರನು I ದ್ವೇಷಿಸುವನು ಮನಸಾರೆ ಹಿಂಸಾತ್ಮಕರನು II


ಇದಲ್ಲದೆ ಅವನು ಅಬೀಷೈಗೂ ತನ್ನ ಎಲ್ಲಾ ಸೇವಕರಿಗೂ, “ನೋಡಿ, ನನ್ನಿಂದ ಹುಟ್ಟಿದ ನನ್ನ ಮಗನೇ ನನ್ನ ಪ್ರಾಣವನ್ನು ತೆಗೆಯಬೇಕೆಂದಿರುವಲ್ಲಿ ಈ ಬೆನ್ಯಾಮೀನ್ಯನು ಹೀಗೆ ಮಾಡುವುದು ಯಾವ ಲೆಕ್ಕ? ಬಿಡಿ, ಅವನು ಶಪಿಸಲಿ; ಹೀಗೆ ಮಾಡಬೇಕೆಂದು ಸರ್ವೇಶ್ವರನೇ ಅವನಿಗೆ ಆಜ್ಞಾಪಿಸಿದ್ದಾರೆ.


ಎಸಗಿಹರು ಉಪಕಾರಕೆ ಪ್ರತಿಯಾಗಿ ಅಪಕಾರ I ಎದುರಿಸುತಿಹರೀಗ ನಾ ಹಿಡಿದಿರುವ ಸನ್ಮಾರ್ಗ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು