Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:21 - ಕನ್ನಡ ಸತ್ಯವೇದವು C.L. Bible (BSI)

21 ನಿರ್ದೋಷ, ನಿಷ್ಕಪಟ ನಡತೆ ನನಗೆ ರಕ್ಷೆ I ನೀನೆ ಪ್ರಭು ನನಗಿರುವ ದೃಢ ನಿರೀಕ್ಷೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಮತ್ತು ಯಥಾರ್ಥತ್ವವೂ ನನ್ನನ್ನು ಕಾಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇನೆ; ನಿರ್ದೋಷಭಕ್ತಿಯೂ ಯಥಾರ್ಥತ್ವವೂ ನನ್ನನ್ನು ಕಾಯಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 ದೇವರೇ, ನೀನು ನಿಜವಾಗಿಯೂ ಒಳ್ಳೆಯವನು. ನಾನು ನಿನ್ನಲ್ಲಿ ಭರವಸವಿಟ್ಟಿರುವೆ, ಆದ್ದರಿಂದ ನನ್ನನ್ನು ಕಾಪಾಡು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ಯಥಾರ್ಥತೆಯೂ ನಿಷ್ಕಪಟವೂ ನನ್ನನ್ನು ಕಾಯಲಿ, ಏಕೆಂದರೆ ನನ್ನ ನಿರೀಕ್ಷೆಯು ನಿಮ್ಮ ಮೇಲೆ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:21
12 ತಿಳಿವುಗಳ ಹೋಲಿಕೆ  

ಸಜ್ಜನರಿಗೆ ಸರಳತೆ ಮಾರ್ಗದರ್ಶನ, ದುರ್ಜನರಿಗೆ ಅವರ ವಕ್ರತೆ ಸಂಹಾರಕ.


ನಿರ್ದೋಷಿಯಾದೆನ್ನನು ನೀನುದ್ಧರಿಸುವೆ I ಚಿರಕಾಲ ನಿನ್ನ ಸನ್ನಿಧಿಯಲ್ಲೆನ್ನನು ಇರಿಸುವೆ II


ಅಂತೆಯೇ, ದೇವರ ಹಾಗೂ ಮಾನವರ ಮುಂದೆ ಶುದ್ಧ ಮನಸ್ಸಾಕ್ಷಿಯುಳ್ಳವನಾಗಿ ಬಾಳಲು ಪ್ರಯತ್ನಿಸುತ್ತಿದ್ದೇನೆ.


ನೀತಿಯ ಪಥದೊಳು ನಾ ನಡೆವೆನಯ್ಯಾ I ಕರುಣೆ ತೋರುತ ಪ್ರಭು, ರಕ್ಷಿಸಯ್ಯಾ II


ಸಾಚವಾದುದೆನ್ನ ನಡತೆ, ಅಚಲವಾದುದೆನ್ನ ನಂಬುಗೆ I ನೀಚ ನಾನಲ್ಲವೆಂದು ಪ್ರಭು, ನ್ಯಾಯ ತೀರಿಸೆನಗೆ II


ನಿರ್ದೋಷಿಗಳಾಗಿ ನಡೆಯುತ್ತಾರೆ ನೀತಿವಂತರು; ಅವರು ಗತಿಸಿದ ಮೇಲೂ ಅವರ ಸಂತತಿಯವರು ಭಾಗ್ಯವಂತರು.


ಹೇ ಪ್ರಭು, ಜಗದ ಜನಾಂಗಕೆ ನ್ಯಾಯ ದೊರಕಿಸುವವನು ನೀನು I ನನಗೂ ನ್ಯಾಯ ದೊರಕಿಸು : ನಿರಪರಾಧಿ, ನೀತಿವಂತ ನಾನು II


ನನ್ನ ದೇವರು ತಮ್ಮ ದೂತನನ್ನು ಕಳಿಸಿ, ಸಿಂಹಗಳ ಬಾಯನ್ನು ಬಂಧಿಸಿದರು. ಅವುಗಳಿಂದ ನನಗೆ ಯಾವ ಹಾನಿಯೂ ಆಗಲಿಲ್ಲ. ಏಕೆಂದರೆ ಆ ದೇವರ ದೃಷ್ಟಿಯಲ್ಲಿ ನಾನು ನಿರ್ಮಲನು. ರಾಜರಾದ ತಮಗೂ ನಾನು ಯಾವ ದ್ರೋಹವನ್ನೂ ಮಾಡಲಿಲ್ಲ,” ಎಂದು ಹೇಳಿದನು.


ಸರ್ವೇಶ್ವರ ಪ್ರತಿಯೊಬ್ಬನಿಗೂ ಅವನವನ ನೀತಿಸತ್ಯತೆಗಳಿಗೆ ಅನುಸಾರ ಫಲವನ್ನು ಕೊಡುವರು. ಅವರು ಈ ದಿನ ನಿಮ್ಮನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದರೂ ನೀವು ಸರ್ವೇಶ್ವರನ ಅಭಿಷಿಕ್ತರೆಂದು ನಾನು ನಿಮ್ಮ ಮೇಲೆ ಕೈಹಾಕಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು