Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:4 - ಕನ್ನಡ ಸತ್ಯವೇದವು C.L. Bible (BSI)

4 ನಿನ್ನ ಮಾರ್ಗವನು ಪ್ರಭು ನನಗೆ ತೋರಿಸು I ನೀನೊಪ್ಪುವ ಪಥದಲಿ ನಾ ನಡೆಯ ಕಲಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಯಪಡಿಸು; ನೀನು ಒಪ್ಪುವ ದಾರಿಯನ್ನು ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ತಿಳಿಸು; ನೀನು ಒಪ್ಪುವ ದಾರಿಯನ್ನು ತೋರಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೆಹೋವನೇ ನಿನ್ನ ಮಾರ್ಗಗಳನ್ನು ನನಗೆ ತಿಳಿಸು. ನಿನ್ನ ಮಾರ್ಗಗಳನ್ನು ನನಗೆ ಉಪದೇಶಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರೇ, ನಿಮ್ಮ ಮಾರ್ಗಗಳನ್ನು ನನಗೆ ತೋರಿಸಿರಿ; ನಿಮ್ಮ ದಾರಿಗಳನ್ನು ನನಗೆ ಕಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:4
11 ತಿಳಿವುಗಳ ಹೋಲಿಕೆ  

ನಿನ್ನ ಸತ್ಯಪಥದಲಿ ನಾ ನಡೆವಂತೆ I ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು II ನಿನ್ನ ನಾಮದಲಿ ಭಯಭಕ್ತಿಯಿರುವಂತೆ I ಅನುಗ್ರಹಿಸೆನಗೆ ನೀ ಏಕಾಗ್ರತೆಯನು II


ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು I ಶತ್ರುರಹಿತ ಹಾದಿಯಲಿ ನಡೆಸು ಎನ್ನನು II


ಬೆಳಿಗ್ಗೆ ಸ್ಮರಿಸಮಾಡು ನಿನ್ನಚಲ ಪ್ರೀತಿಯನು I ನಿನ್ನಲ್ಲಿಯೆ ಇಟ್ಟಿರುವೆನು ನನ್ನ ನಂಬಿಕೆಯನು I ತೋರಿಸು ನನಗೆ ನಾ ಹಿಡಿಯಬೇಕಾದ ಮಾರ್ಗವನು I ನಿನ್ನ ಕಡೆಗೆ ಎತ್ತಿರುವೆನು ನನ್ನ ಹೃನ್ಮನಗಳನು II


ಶತ್ರುಗಳು ಮುತ್ತಿಹರು, ಸತ್ಯ ಪಥದಲಿ ನಡೆಸೆನ್ನನು I ನೇರಮಾಡೆನಗೆ ದೇವಾ, ನಿನ್ನ ಸಿರಿಮಾರ್ಗವನು II


ನನಗೆ ನಿಮ್ಮ ದಯೆ ದೊರಕಿದೆಯಾದರೆ ನಾನು ನಿಮ್ಮನ್ನು ಬಲ್ಲವನಾಗಿರುವಂತೆ ನಿಮ್ಮ ಮಾರ್ಗವನ್ನು ನನಗೆ ತೋರಿಸಿರಿ. ಆಗ ನಿಮ್ಮ ದಯೆ ನನಗೆ ದೊರಕಿದೆಯೆಂದು ತಿಳಿದುಕೊಳ್ಳುತ್ತೇನೆ. ಈ ಜನ ನಿಮ್ಮ ಪ್ರಜೆಯೆಂಬುದನ್ನು ನೆನಪಿನಲ್ಲಿಡಿ,” ಎಂದು ಅರಿಕೆ ಮಾಡಿದನು.


ನಿನ್ನ ನಿಯಮಗಳ ಪಥವನೆನಗೆ ತಿಳಿಯಪಡಿಸಯ್ಯಾ I ನಿನ್ನ ಅದ್ಭುತಕಾರ್ಯಗಳನು ನಾ ಧ್ಯಾನಿಸುವೆನಯ್ಯಾ II


ಸರ್ವೇಶ್ವರ ಸ್ವಾಮಿ ತಮ್ಮ ಜನರಿಗೆ : “ನೀವು ದಾರಿಗಳು ಕೂಡುವ ಸ್ಥಳಗಳಲ್ಲಿ ನಿಂತು ನೋಡಿ. ಸನಾತನ ಮಾರ್ಗಗಳು ಯಾವುವು? ಸನ್ಮಾರ್ಗ ಎಲ್ಲಿದೆ? ಎಂದು ವಿಚಾರಿಸಿರಿ. ಅದರಲ್ಲೆ ಮುನ್ನಡೆಯಿರಿ. ಆಗ ನಿಮಗೆ ಮನನೆಮ್ಮದಿ ದೊರಕುವುದು.” ಆದರೆ ಆ ಜನರು : “ಇಲ್ಲ, ನಾವು ಅದರಲ್ಲಿ ನಡೆಯುವುದೇ ಇಲ್ಲ” ಎಂದರು.


ದೇಶವಿದೇಶಗಳವರು ಬಂದು ಹೇಳುವರು ಹೀಗೆ : “ಬನ್ನಿ, ಹೋಗೋಣ ಸರ್ವೇಶ್ವರಸ್ವಾಮಿಯ ಪರ್ವತಕ್ಕೆ ಇಸ್ರಯೇಲರ ದೇವರ ಮಂದಿರಕ್ಕೆ. ಬೋಧಿಸುವನಾತ ನಮಗೆ ತನ್ನ ಮಾರ್ಗಗಳನು ನಾವು ಹಿಡಿದು ನಡೆವಂತೆ ಆತನ ಪಥವನು ಹೊರಡುವುದು ಧರ್ಮಶಾಸ್ತ್ರ ಸಿಯೋನಿನಿಂದ ಸ್ವಾಮಿಯ ದಿವ್ಯವಾಣಿ ಜೆರುಸಲೇಮಿನಿಂದ.


ನಾನು ಹಿಡಿದಿರುವ ಹಾದಿ ನೀತಿಯುತ ನಾನು ನಡೆಯುವುದು ನ್ಯಾಯಪಥ.


ಕಿವಿಗೊಡು ಪ್ರಭು, ಎನ್ನ ನುಡಿಗೆ I ಬಗೆಗೊಡು ಎನ್ನಾತ್ಮದ ಮೊರೆಗೆ II


ಪರಲೋಕದಲ್ಲಿರುವ ನೀವು ಆಲಿಸಿ ನಿಮ್ಮ ಭಕ್ತರೂ ಪ್ರಜೆಗಳೂ ಆದ ಇಸ್ರಯೇಲರ ಪಾಪಗಳನ್ನು ಕ್ಷಮಿಸಿರಿ; ಅವರು ನಡೆಯಬೇಕಾದ ಮಾರ್ಗವನ್ನು ತೋರಿಸಿರಿ; ನಿಮ್ಮ ಪ್ರಜೆಗೆ ಸ್ವಂತ ಸೊತ್ತಾಗಿ ಕೊಟ್ಟ ನಾಡಿಗೆ ಮಳೆಯನ್ನು ಅನುಗ್ರಹಿಸಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು