Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 25:8 - ಕನ್ನಡ ಸತ್ಯವೇದವು C.L. Bible (BSI)

8 ಸತ್ಯಸ್ವರೂಪನು, ದಯಾವಂತನು ಪ್ರಭು I ದಾರಿತಪ್ಪಿದವರಿಗೆ ಬೋಧಕನು ವಿಭು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನು ದಯಾಳುವೂ, ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡೆಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನು ದಯಾಳುವೂ ಸತ್ಯಸ್ವರೂಪನೂ ಆಗಿದ್ದಾನೆ; ದಾರಿತಪ್ಪಿದವರನ್ನು ಬೋಧಿಸಿ ಸನ್ಮಾರ್ಗದಲ್ಲಿ ನಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನು ಒಳ್ಳೆಯವನೂ ಸತ್ಯಸ್ವರೂಪನೂ ಆಗಿದ್ದಾನೆ. ಆತನು ಪಾಪಿಗಳಿಗೆ ಜೀವಮಾರ್ಗವನ್ನು ಬೋಧಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರು ಒಳ್ಳೆಯವರೂ ನ್ಯಾಯವುಳ್ಳವರೂ ಆಗಿದ್ದಾರೆ; ಆದ್ದರಿಂದ ಅವರು ಪಾಪಿಗಳಿಗೆ ತಮ್ಮ ಮಾರ್ಗಗಳನ್ನು ಬೋಧಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 25:8
15 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ಪ್ರಭು ಇಂತೆಂದನು : “ಕಲಿಸುವೆನು, ನಾ ನಿನಗೆ ತಿಳಿಸುವೆನು ಸನ್ಮಾರ್ಗವನು I ಕಟಾಕ್ಷಿಸಿ ನಿನ್ನನು, ಈವೆನು ಸದಾಲೋಚನೆಯನು II


ಈ ಪರಿ ಪಡೆವುದು ಸಾಕ್ಷ್ಯ ಪ್ರಭುವಿನಾ ಸತ್ಯಸಂಧತೆ I ಆತನೇ ನನಗೆ ಪೊರೆಬಂಡೆ, ಆತನಲ್ಲಿಲ್ಲ ವಕ್ರತೆ II


ನೀವು ಹೋಗಿ, ನನಗೆ ಬೇಕಾದುದು ದಯೆ, ಯಜ್ಞಬಲಿಯಲ್ಲ’ ಎಂದು ಪವಿತ್ರಗ್ರಂಥದಲ್ಲಿ ಬರೆದಿರುವ ವಾಕ್ಯದ ಅರ್ಥವನ್ನು ಕಲಿತುಕೊಳ್ಳಿ. ನಾನು ಕರೆಯಲು ಬಂದಿರುವುದು ಧರ್ಮಿಷ್ಠರನ್ನಲ್ಲ, ಪಾಪಿಷ್ಠರನ್ನು,” ಎಂದರು.


ನೇರವಾಗಿದೆ ಸಜ್ಜನನ ದಾರಿ ಸುಗಮವಾಗಿದೆ ನಿನ್ನಿಂದ ಆತನ ಹಾದಿ.


ಒಳ್ಳೆಯವ, ಒಳ್ಳೆಯದ ಗೈಕೊಳ್ಳುವ ನೀನು I ಬೋಧಿಸೆನಗೆ ನಿನ್ನಾ ನಿಬಂಧನೆಗಳನು II


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಕೆಟ್ಟವರಾದ ನೀವು ನಿಮ್ಮ ಮಕ್ಕಳಿಗೆ ಒಳ್ಳೆಯ ಪದಾರ್ಥಗಳನ್ನು ಕೊಡಬಲ್ಲವರಾದರೆ, ಅವಕ್ಕಿಂತಲೂ ಹೆಚ್ಚಾಗಿ ಸ್ವರ್ಗದಲ್ಲಿರುವ ನಿಮ್ಮ ತಂದೆ ತಮ್ಮನ್ನು ಕೇಳಿಕೊಳ್ಳುವವರಿಗೆ ಪವಿತ್ರಾತ್ಮ ಅವರನ್ನೇ ಅನುಗ್ರಹಿಸಬಲ್ಲರು! ಎಂದು ನಾನು ನಿಮಗೆ ಹೇಳುತ್ತೇನೆ.”


ಈ ಪರಿ ಬಂದ ಹಲವು ನಾಡಿಗರು ಪೇಳ್ವರು ಜನರಿಗೆ; ಬನ್ನಿ, ಹೋಗೋಣ, ಸರ್ವೇಶ್ವರನ ಪರ್ವತಕೆ ಯಕೋಬ್ಯರಾ ದೇವರ ಮಂದಿರಕೆ. ಬೋಧಿಸುವನಾತ ತನ್ನ ಮಾರ್ಗವನು ನಮಗೆ ನಡೆಯುವೆವು ನಾವು ಆತನ ದಾರಿಗನುಗುಣವಾಗ್ಗೆ. ಬರುವುದು ಧರ್ಮೋಪದೇಶ ಸಿಯೋನಿಂದ ಸರ್ವೇಶ್ವರನಾ ವಾಕ್ಯ ಜೆರುಸಲೇಮಿನಿಂದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು