Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 26:2 - ಕನ್ನಡ ಸತ್ಯವೇದವು C.L. Bible (BSI)

2 ಪರೀಕ್ಷಿಸು ಪ್ರಭು, ಎನ್ನನು ಪರಿಶೀಲಿಸು I ಹೃನ್ಮನಗಳೆಲ್ಲವನು ನೀ ಪರಿಶೋಧಿಸು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು; ನನ್ನ ಅಂತರಿಂದ್ರಿಯವನ್ನೂ, ಹೃದಯವನ್ನೂ ಪರಿಶೋಧಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಯೆಹೋವನೇ, ನನ್ನನ್ನು ಪರೀಕ್ಷಿಸು, ಪರಿಶೀಲಿಸು; ನನ್ನ ಅಂತರಿಂದ್ರಿಯವನ್ನೂ ಹೃದಯವನ್ನೂ ಪರಿಶೋಧಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಯೆಹೋವನೇ, ನನ್ನನ್ನು ಪರೀಕ್ಷಿಸಿ ತಿಳಿದುಕೊ. ನನ್ನ ಹೃದಯವನ್ನೂ ಮನಸ್ಸನ್ನೂ ಸೂಕ್ಷ್ಮವಾಗಿ ಪರಿಶೋಧಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಯೆಹೋವ ದೇವರೇ, ನನ್ನನ್ನು ಶೋಧಿಸಿ, ಪರೀಕ್ಷಿಸಿರಿ; ನನ್ನ ಅಂತರಿಂದ್ರಿಯಗಳನ್ನೂ ನನ್ನ ಹೃದಯವನ್ನೂ ಶೋಧಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 26:2
8 ತಿಳಿವುಗಳ ಹೋಲಿಕೆ  

ಮಾನವರ ಹೃನ್ಮನವನರಿತಿಹ ಸತ್ಯಸ್ವರೂಪಿ ದೇವಾ, I ದುರುಳರ ಕೆಡುಕನಳಿಸಯ್ಯಾ, ಸತ್ಯವಂತರನು ನೀ ಉಳಿಸಯ್ಯಾ II


ಹೃದಯ ವೀಕ್ಷಿಸು, ಇರುಳೆಲ್ಲ ವಿಚಾರಿಸು, ಅಗ್ನಿಪರೀಕ್ಷೆ ಮಾಡಿಸು I ನಾ ದೋಷರಹಿತ, ಮಾತಲಿ ತಪ್ಪದವ, ಎಂದಾಗ ತೀರ್ಮಾನಿಸು II


ನನ್ನ ಅಕ್ರಮಗಳೆಷ್ಟು? ಪಾಪಗಳೆಷ್ಟು? ನನ್ನ ಪಾಪದೋಷಗಳನ್ನು ತಿಳಿಯಪಡಿಸು.


ಹಾಕುವೆನಾ ಮೂರನೇ ಭಾಗದವರನ್ನು ಬೆಂಕಿಗೆ, ಶೋಧಿಸುವೆನು ಅವರನ್ನು ಬೆಳ್ಳಿಯ ಹಾಗೆ. ಶುದ್ಧೀಕರಿಸುವೆನು ಬಂಗಾರದ ಹಾಗೆ. ಕಿವಿಗೊಡುವೆ ನನ್ನ ಹೆಸರೆತ್ತಿ ಪ್ರಾರ್ಥಿಸುವವರಿಗೆ. ಹೇಳುವೆನು, ‘ಇವರೇ ನನ್ನ ಪ್ರಜೆಯೆಂದು. ಹೇಳುವರವರು ‘ಸರ್ವೇಶ್ವರನೇ ನಮ್ಮ ದೇವ’ ಎಂದು.


ಹೇ ದೇವಾ, ನೀ ನಮ್ಮನ್ನು ಪರಿಶೋಧಿಸಿದೆ I ಪುಟಕ್ಕಿಟ್ಟ ಚಿನ್ನದಂತೆ ಶುದ್ಧೀಕರಿಸಿದೆ II


ಸರ್ವಶಕ್ತರಾದ ಸರ್ವೇಶ್ವರಾ, ನೀವು ಸತ್ಪುರುಷರನ್ನು ಪರಿಶೋಧಿಸುವವರು ಅಂತರಿಂದ್ರಿಯಗಳನ್ನೂ ಅಂತರಾಳವನ್ನೂ ವೀಕ್ಷಿಸುವವರು. ನನ್ನ ವ್ಯಾಜ್ಯವನ್ನು ನಿಮಗೆ ಅರಿಕೆಮಾಡಿರುವೆನು ನನ್ನ ಹಿಂಸಕರಿಗೆ ನೀವು ವಿಧಿಸುವ ಪ್ರತಿದಂಡನೆಯನ್ನು ನಾನು ನೋಡುವಂತೆ ಮಾಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು