Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 26:3 - ಕನ್ನಡ ಸತ್ಯವೇದವು C.L. Bible (BSI)

3 ಕೈಬಿಡದ ನಿನ್ನೊಲವು ನನ್ನ ಕಣ್ಮುಂದಿದೆ I ನೀ ತೋರಿದ ಸತ್ಯಪಥದಲಿ, ನಾ ನಡೆದೆ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ನಿನ್ನ ಶಾಶ್ವತವಾದ ಪ್ರೀತಿಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ; ನಿನಗೆ ನಂಬಿಗಸ್ತನಾಗಿ ನಡೆದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಿನ್ನ ಕೃಪೆಯನ್ನು ನನ್ನ ದೃಷ್ಟಿಯಲ್ಲೇ ಇಟ್ಟುಕೊಂಡಿದ್ದೇನೆ; ನಿನ್ನ ಸತ್ಯದಲ್ಲಿ ನಡೆದುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ನಿನ್ನ ಶಾಶ್ವತ ಪ್ರೀತಿಯನ್ನು ದೃಷ್ಟಿಯಲ್ಲಿಟ್ಟುಕೊಂಡಿದ್ದೇನೆ. ನಿನ್ನ ಸತ್ಯಕ್ಕನುಸಾರವಾಗಿ ಜೀವಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ನಿಮ್ಮ ಒಡಂಬಡಿಕೆಯ ಪ್ರೀತಿಯು ಯಾವಾಗಲೂ ನನ್ನ ಮನಸ್ಸು ತುಂಬ ಇದೆ; ನಿಮ್ಮ ನಂಬಿಗಸ್ತಿಕೆಯಲ್ಲಿ ನಾನು ಬಾಳುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 26:3
25 ತಿಳಿವುಗಳ ಹೋಲಿಕೆ  

ಬದಲಿಗೆ, ದೇವರು ಬೆಳಕಿನಲ್ಲಿರುವಂತೆ ನಾವೂ ಬೆಳಕಿನಲ್ಲಿ ನಡೆದರೆ ನಮ್ಮಲ್ಲಿ ಪರಸ್ಪರ ಅನ್ಯೋನ್ಯತೆ ಇರುತ್ತದೆ. ಆಗ ದೇವರ ಪುತ್ರನಾದ ಯೇಸುವಿನ ರಕ್ತವು ನಮ್ಮನ್ನು ಎಲ್ಲ ಪಾಪದಿಂದಲೂ ಶುದ್ಧಗೊಳಿಸುತ್ತದೆ.


“ಸರ್ವೇಶ್ವರಾ, ನಾನು ಶ್ರದ್ಧೆಯಿಂದಲೂ ಪ್ರಾಮಾಣಿಕತೆಯಿಂದಲೂ ನಡೆದುಕೊಂಡಿದ್ದೇನೆ. ನಿಮ್ಮ ದೃಷ್ಟಿಯಲ್ಲಿ ಒಳ್ಳೆಯವನಾಗಿದ್ದುದನ್ನು ನೆನಪಿಗೆ ತಂದುಕೊಳ್ಳಿ,” ಎಂದು ಬಹಳವಾಗಿ ಕಣ್ಣೀರಿಡುತ್ತಾ ಪ್ರಾರ್ಥಿಸಿದನು.


ನಿನ್ನ ಮಕ್ಕಳಲ್ಲಿ ಕೆಲವರು ಪಿತನು ವಿಧಿಸಿದಂತೆ ಸತ್ಯಸಂಧರಾಗಿ ನಡೆಯುವುದನ್ನು ಕಂಡು ನನಗಾದ ಆನಂದ ಅಷ್ಟಿಷ್ಟಲ್ಲ.


ಪರಸ್ಪರ ಕರುಣೆಯಿಂದಲೂ ಕನಿಕರದಿಂದಲೂ ವರ್ತಿಸಿರಿ. ಯೇಸುಕ್ರಿಸ್ತರಲ್ಲಿ ದೇವರು ನಿಮ್ಮನ್ನು ಕ್ಷಮಿಸಿದಂತೆಯೇ, ನೀವು ಸಹ ಒಬ್ಬರನ್ನೊಬ್ಬರು ಕ್ಷಮಿಸಿರಿ.


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


ಅದಕ್ಕೆ ಯೇಸು, “ಮಾರ್ಗವೂ ಸತ್ಯವೂ ಜೀವವೂ ನಾನೇ. ನನ್ನ ಮುಖಾಂತರ ಬಾರದ ಹೊರತು ಯಾರೂ ಪಿತನ ಬಳಿಗೆ ಬರಲಾರರು.


ನಿಮ್ಮ ತಂದೆಯಾದ ದೇವರಂತೆ ನೀವೂ ದಯಾವಂತರಾಗಿರಿ.


‘ದೇವರ ಉಪದೇಶವನ್ನೂ ದೇವರ ಬೋಧನೆಯನ್ನೂ ವಿಚಾರಿಸೋಣ’ ಎಂದು ಅವರು ಹೇಳುವತನಕ ಅವರಿಗೆ ಜ್ಞಾನೋದಯವಾಗುವುದಿಲ್ಲ.


ಯಕೋಬ ಮನೆತನದವರೇ, ಬನ್ನಿ, ಸ್ವಾಮಿಯ ಬೆಳಕಿನಲ್ಲಿ ನಡೆಯೋಣ.


ನಿನ್ನ ನೀತಿ ನಿತ್ಯ I ನಿನ್ನ ಶಾಸ್ತ್ರ ಸತ್ಯ II


ಸನ್ಮಾರ್ಗದಲೇ ನಾ ನಡೆಯುವೆನು I ನನಗೆಂದು ನೀಡುವೆ ದರ್ಶನವನು? I ಮನೆಯೊಳಗೂ ಶುದ್ಧಹೃದಯಿ ನಾನು II


ನಿನ್ನ ಸತ್ಯಪಥದಲಿ ನಾ ನಡೆವಂತೆ I ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು II ನಿನ್ನ ನಾಮದಲಿ ಭಯಭಕ್ತಿಯಿರುವಂತೆ I ಅನುಗ್ರಹಿಸೆನಗೆ ನೀ ಏಕಾಗ್ರತೆಯನು II


ನೀಚಕಾರ್ಯವೆಸಗಿ ಹಿಗ್ಗುವ ಘನ ಮಾನವನೆ I ದೇವರ ಅನಂತ ಕೃಪೆಯನು ಪ್ರತಿಭಟಿಸುವವನೆ I ದೇವರ ದೃಷ್ಟಿಯಲಿ ನೀನು ಹೀನಾಯನೆ II


ಸನ್ಮಾರ್ಗದಲಿ ಮುನ್ನಡೆಸೆನ್ನ ದೇವಾ, ಮುಕ್ತಿದಾತ I ಕಲಿಸೆನಗೆ, ನಿನಗಾಗಿ ಕಾದಿರುವೆ ಸತತ II


ಪ್ರಿಯನೇ, ನೀನು ಕೆಟ್ಟದ್ದನ್ನು ಅನುಸರಿಸದೆ ಒಳ್ಳೆಯದನ್ನೇ ಅನುಸರಿಸಿ ನಡೆ. ಒಳಿತನ್ನು ಮಾಡುವವನು ದೇವರಿಗೆ ಸೇರಿದವನು. ಕೆಡುಕನ್ನು ಮಾಡುವವನು ದೇವರನ್ನು ಕಾಣದವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು