Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 26:4 - ಕನ್ನಡ ಸತ್ಯವೇದವು C.L. Bible (BSI)

4 ದುಷ್ಟರ ಕೂಟದಲಿ ನಾ ಕೂರುವವನಲ್ಲ I ಕಪಟಿಗಳ ಸಂಘವನು ನಾ ಸೇರುವವನಲ್ಲ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನಾನು ಮೋಸಗಾರರ ಸಹವಾಸ ಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನಾನು ಕುಟಿಲಸ್ವಭಾವಿಗಳ ಸಹವಾಸಮಾಡುವವನಲ್ಲ; ಕಪಟಿಗಳನ್ನು ಸೇರುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಅಯೋಗ್ಯರಾದ ಅವರಲ್ಲಿ ನಾನೂ ಒಬ್ಬನಲ್ಲ. ನಾನು ಕಪಟಿಗಳ ಜೊತೆ ಸೇರುವವನಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮೋಸಗಾರರ ಸಂಗಡ ನಾನು ಕುಳಿತುಕೊಳ್ಳಲಿಲ್ಲ; ವಂಚಕರ ಸಂಗಡ ನಾನು ಹೋಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 26:4
11 ತಿಳಿವುಗಳ ಹೋಲಿಕೆ  

ವಿನೋದಗಾರರ ಕೂಟದಲ್ಲಿ ಭಾಗವಹಿಸಿ ನಾನು ಉಲ್ಲಾಸಪಟ್ಟವನಲ್ಲ. ನಿಮ್ಮ ಕೈ ನನ್ನ ಮೇಲೆ ಇದ್ದುದರಿಂದ ನಾನು ಒಬ್ಬಂಟಿಗನಾದೆ. ಕೋಪಾವೇಶದಿಂದ ತುಂಬಿದವನಾದೆ.


ದುರ್ಜನರ ಆಲೋಚನೆಯಂತೆ ನಡೆಯದೆ I ಪಾಪಾತ್ಮರ ಪಥದಲಿ ಕಾಲೂರದೆ I ಧರ್ಮನಿಂದಕರ ಕೂಟದಲಿ ಕೂರದೆ II


ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.


ತೊಲಗು ನನ್ನಿಂದ ದುರುಳ ಜನಾಂಗವೆ I ದೈವಾಜ್ಞೆಗಳನು ನಾನು ಪಾಲಿಸುವೆ II


ಇದಲ್ಲದೆ: ಅನ್ಯಜನರನ್ನು ಬಿಟ್ಟು ಹೊರಬನ್ನಿ ಅವರಿಂದ ಬೇರ್ಪಟ್ಟು ಬಾಳಿರಿ ಮಲಿನವಾದುದನ್ನು ಮುಟ್ಟದಿರಿ.


ಗೆಳೆಯ ನಾನು ನಿನ್ನಲಿ ಭಯಭಕ್ತಿಯುಳ್ಳವರಿಗೆ I ನಿನ್ನ ನಿಯಮಗಳ ಕೈಗೊಂಡು ನಡೆಯುವವರಿಗೆ II


ಮೋಸಹೋಗದಿರಿ. ಏಕೆಂದರೆ, “ದುರ್ಜನರ ಸಂಗ ಸದಾಚಾರದ ಭಂಗ,”


ಉತ್ತು ವ್ಯವಸಾಯ ಮಾಡುವವನು ಹೊಟ್ಟೆತುಂಬ ಉಣ್ಣುವನು; ವ್ಯರ್ಥಕಾರ್ಯಗಳಲ್ಲಿ ಆಸಕ್ತಿಯುಳ್ಳವನು ಮತಿಹೀನನು.


ಮೂಢರೇ, ನಿಮ್ಮ ಮೂಢತ್ವವನ್ನು ಬಿಟ್ಟುಬಾಳಿರಿ, ವಿವೇಕ ಮಾರ್ಗದಲ್ಲಿ ನೆಟ್ಟಗೆ ನಡೆಯಿರಿ,” ಎಂದು ಪ್ರಬೋಧಿಸುತ್ತಾಳೆ.


ನಾನು ಕಪಟ ಮಾರ್ಗದಲಿ ನಡೆದಿದ್ದರೆ ಮೋಸವನ್ನು ಹಿಂಬಾಲಿಸಿ ಓಡಿದ್ದರೆ,


ನನ್ನ ಬಿಟ್ಟು ತೊಲಗಲಿ ಮೂರ್ಖತನ I ನನಗೆ ಹತ್ತದೆಯಿರಲಿ ಕೆಟ್ಟತನ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು