Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 26:7 - ಕನ್ನಡ ಸತ್ಯವೇದವು C.L. Bible (BSI)

7 ದನಿಯೆತ್ತಿ ನಿನಗೆ ಧನ್ಯಗೀತೆ ಹಾಡುವೆನಯ್ಯಾ I ನಿನ್ನದ್ಭುತ ಕಾರ್ಯಗಳೆಲ್ಲವನು ಘೋಷಿಸುವೆನಯ್ಯಾ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನಿನ್ನ ಅದ್ಭುತಕೃತ್ಯಗಳ ವರ್ಣನೆಯ ಸ್ತೋತ್ರ ಮಾಡುತ್ತಾ, ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನಿನ್ನ ಅದ್ಭುತಕೃತ್ಯವರ್ಣನೆಯ ಪದಗಳನ್ನು ಹಾಡುತ್ತಾ ನಿನ್ನ ಯಜ್ಞವೇದಿಯನ್ನು ಪ್ರದಕ್ಷಿಣೆಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನಾನು ನಿನಗೆ ಸ್ತುತಿಗೀತೆಗಳನ್ನು ಹಾಡುವೆನು. ನಿನ್ನ ಅದ್ಭುತಕಾರ್ಯಗಳ ಕುರಿತು ಹಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಸ್ತೋತ್ರ ಧ್ವನಿಯೆತ್ತಿ ಸಾರುತ್ತಾ ನಿಮ್ಮ ಅದ್ಭುತಗಳನ್ನೆಲ್ಲಾ ತಿಳಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 26:7
23 ತಿಳಿವುಗಳ ಹೋಲಿಕೆ  

ಮನಃಪೂರ್ವಕವಾಗಿ ಪ್ರಭು, ನಿನ್ನ ಕೊಂಡಾಡುವೆನು I ನಿನ್ನದ್ಭುತಕಾರ್ಯಗಳೆಲ್ಲವನು ನಾ ವರ್ಣಿಸುವೆನು II


ಧ್ಯಾನಿಸುವೆನು ನಿನ್ನ ಅದ್ಭುತಕಾರ್ಯಗಳನು I ನಿನ್ನ ಮಹೋನ್ನತ ಮಹಿಮಾಪ್ರಭಾವವನು II


ಭಜಿಸಿರಿ ಪ್ರಭುವನು ಕರಗಳನೆತ್ತಿ I ಪವಿತ್ರಾಲಯದಲಿ ಕೈಗಳನೆತ್ತಿ II


ನಿನ್ನ ನಿಯಮಗಳ ಪಥವನೆನಗೆ ತಿಳಿಯಪಡಿಸಯ್ಯಾ I ನಿನ್ನ ಅದ್ಭುತಕಾರ್ಯಗಳನು ನಾ ಧ್ಯಾನಿಸುವೆನಯ್ಯಾ II


ಪ್ರಭುವೆ ದೇವನು, ನಮ್ಮ ಮೇಲೆ ಜ್ಯೋತಿಯನು ಬೆಳಗಿದವನು I ಪ್ರದಕ್ಷಿಣೆ ಮಾಡಿರಿ, ಬಲಿಪೀಠದ ಸುತ್ತ, ಹಿಡಿದು ರೆಂಬೆಗಳನು II


ತೆರೆಯಿರಿ ಎನಗೆ ನೀತಿದ್ವಾರಗಳನು I ಒಳನುಗ್ಗಿ ಹೊಗಳುವೆನು ಪ್ರಭುವನು II


ಹಾಡಿ ಪಾಡಿ ಹೊಗಳಿರಿ ಪ್ರಭುವನು I ಧ್ಯಾನಿಸಿ ನೀವು ಆತನ ಪವಾಡಗಳನು II


ಆತನ ಸನ್ನಿಧಿ ಸೇರೋಣ ಕೃತಜ್ಞತಾಸ್ತುತಿಯೊಂದಿಗೆ I ಜಯಜಯಕಾರ ಮಾಡೋಣ ಕೀರ್ತನೆಗಳಿಂದಾತನಿಗೆ II


ಸುತ್ಯರ್ಹನು ಸ್ವಾಮಿದೇವನು, ಇಸ್ರಯೇಲರ ದೇವನು I ಆತನೋರ್ವನೇ ಮಹತ್ಕಾರ್ಯಗಳನು ಎಸಗುವಂತವನು II


ಆಗ ಸಿಯೋನ್ ನಗರಿಯ ದ್ವಾರದಲೆ ನಿಲ್ಲುವೆನು I ನಿನ್ನ ಗುಣಾತಿಶಯಗಳನು ಪ್ರಸಿದ್ಧಪಡಿಸುವೆನು I ನೀನಿತ್ತ ಮುಕ್ತಿಗಾಗಿ ಆನಂದಗೊಳ್ಳುವೆನು II


ಸರ್ವೇಶ್ವರ ನನ್ನ ಪ್ರಾರ್ಥನೆಯ ಫಲವಾಗಿ ಅನುಗ್ರಹಿಸಿದ ಮಗನು ಇವನೇ.


ಅನಂತರ ಆಕೆ ಮಗನನ್ನು ಶಿಲೋವಿನಲ್ಲಿದ್ದ ಸರ್ವೇಶ್ವರನ ಮಂದಿರಕ್ಕೆ ತಂದಳು. ಅವನು ಇನ್ನೂ ಚಿಕ್ಕವನು ಆಗಿದ್ದನು. ಜೊತೆಗೆ ಅವರು ಮೂರು ವರ್ಷದ ಹೋರಿಯೊಂದನ್ನು, ಹತ್ತು ಕಿಲೋಗ್ರಾಂ ಹಿಟ್ಟನ್ನು ಹಾಗೂ ಒಂದು ತಿತ್ತಿ ದ್ರಾಕ್ಷಾರಸವನ್ನೂ ತಂದಿದ್ದರು.


ಪ್ರಸಿದ್ಧಪಡಿಸಿರಿ ಆತನ ಘನತೆಯನು ರಾಷ್ಟ್ರಗಳಿಗೆ I ಆತನದ್ಭುತ ಕಾರ್ಯಗಳನು ಸಕಲ ಜನಾಂಗಗಳಿಗೆ II


ಪರಾತ್ಪರನೇ, ಮಾಡುವೆನು ನಿನ್ನ ನಾಮಸ್ತುತಿ I ಹರ್ಷಾನಂದಗೊಳ್ವೆನು‍ ದೇವಾ, ನಿನ್ನಲ್ಲತಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು