Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 26:8 - ಕನ್ನಡ ಸತ್ಯವೇದವು C.L. Bible (BSI)

8 ಪ್ರಿಯವಾದುದೆನಗೆ ನಿನ್ನ ನಿವಾಸದ ಮಂದಿರ I ಸುಪ್ರೀತವಾದುದು ನಿನ್ನ ಮಹಿಮೆಯ ಆಗರ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವ ಸ್ಥಾನವು ನನಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಯೆಹೋವನೇ, ನಿನ್ನ ನಿವಾಸವು ನನಗೆ ಎಷ್ಟೋ ಪ್ರಿಯ; ನಿನ್ನ ಪ್ರಭಾವಸ್ಥಾನವು ನನಗೆ ಇಷ್ಟ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೆಹೋವನೇ, ನಿನ್ನ ಆಲಯವೂ ನಿನ್ನ ಮಹಿಮಾಗುಡಾರವೂ ನನಗೆ ಎಷ್ಟೋ ಪ್ರಿಯವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೆಹೋವ ದೇವರೇ, ನೀವು ವಾಸಿಸುವ ಆಲಯವನ್ನೂ, ನಿಮ್ಮ ಮಹಿಮೆಯ ನಿವಾಸವನ್ನೂ ಪ್ರೀತಿಸುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 26:8
22 ತಿಳಿವುಗಳ ಹೋಲಿಕೆ  

ಅದಕ್ಕೆ ಉತ್ತರವಾಗಿ ಯೇಸು, “ನೀವು ನನ್ನನ್ನು ಹುಡುಕಿದ್ದೇಕೆ? ನಾನು ನನ್ನ ತಂದೆಯ ಆಲಯದಲ್ಲೇ ಇರಬೇಕೆಂದು ನಿಮಗೆ ತಿಳಿಯದೆಹೋಯಿತೇ?” ಎಂದರು.


ಮೂರು ದಿನಗಳ ಮೇಲೆ ಮಹಾದೇವಾಲಯದಲ್ಲಿ ಅವರನ್ನು ಕಂಡಾಗ ಅಲ್ಲಿ ಯೇಸು, ಬೋಧಕರ ಮಧ್ಯೆ ಕುಳಿತುಕೊಂಡು ಅವರ ಉಪದೇಶವನ್ನು ಆಲಿಸುತ್ತಾ ಅವರಿಗೆ ಪ್ರಶ್ನೆಹಾಕುತ್ತಾ ಇದ್ದರು.


ಹಿಜ್ಕೀಯನು, “ನಾನು ಗುಣಹೊಂದಿ ಸರ್ವೇಶ್ವರ ಸ್ವಾಮಿಯ ಆಲಯವನ್ನು ಸೇರುವೆನು ಎಂಬುದಕ್ಕೆ ಗುರುತೇನು?” ಎಂದು ಕೇಳಿದನು.


ಸರ್ವೇಶ್ವರಾ, ನೀ ನನ್ನ ಉದ್ಧಾರಕ ಹೊಗಳುವೆ ನಿನ್ನ ನಾ ತಂತಿವಾದ್ಯ ಸಮೇತ ದಿನನಿತ್ಯ, ನಿನ್ನಾಲಯದೊಳು, ಜೀವವಿರುವ ತನಕ.


ನಮ್ಮ ಸ್ವಾಮಿದೇವರ ಮಂದಿರದ ನಿಮಿತ್ತ I ಹರಸುವೆ ನಿನ್ನ ಸುಕ್ಷೇಮವನು ಹಾರೈಸುತ II


ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II


ಜನಸಮೂಹದೊಡನೆ ನಾ ಜಯಜಯಕಾರ ಮಾಡುತ I ಸ್ತುತಿಗೀತೆಗಳ ಹಾಡುತ, ತೀರ್ಥಯಾತ್ರೆ ಗೈಯುತ I ದೇಗುಲಕೆ ತೆರಳಿದಾ ಸವಿನೆನಪು ಮನಕರಗಿಪುದು ನಿರುತ II


ಸರ್ವೇಶ್ವರನ ತೇಜಸ್ಸಿನಿಂದ ವ್ಯಾಪ್ತವಾಗಿದ್ದ ಆ ಮೇಘವು ದೇವಾಲಯದಲ್ಲಿ ತುಂಬಿಕೊಂಡದ್ದರಿಂದ ಯಾಜಕರು ಅಲ್ಲಿ ನಿಂತು ಸೇವೆಮಾಡಲಾರದೆ ಹೋದರು.


ಪವಿತ್ರಾಲಯಕ್ಕೆ ಇವುಗಳನ್ನೆಲ್ಲಾ ಸಂಗ್ರಹಿಸಿದ್ದಲ್ಲದೆ, ನನ್ನ ದೇವರಾಲಯದ ಮೇಲಣ ಅಭಿಮಾನದಿಂದ ಅದಕ್ಕಾಗಿ ನನ್ನ ಸ್ವಂತ ಸೊತ್ತಿನಿಂದ


ಅರಸನು ಚಾದೋಕನಿಗೆ, “ನೀನು ದೇವರ ಒಡಂಬಡಿಕೆಯ ಮಂಜೂಷವನ್ನು ಹಿಂದಕ್ಕೆ ತೆಗೆದುಕೊಂಡುಹೋಗು; ಸರ್ವೇಶ್ವರನ ದೃಷ್ಟಿಯಲ್ಲಿ ನನಗೆ ದಯೆದೊರಕಿದರೆ ನಾನು ಅವರನ್ನೂ ಅವರ ಆಲಯವನ್ನೂ ನೋಡುವ ಹಾಗೆ ತಾವೇ ನನ್ನನ್ನು ಹಿಂದಕ್ಕೆ ಬರಮಾಡುವರು.


ಸೊಲೊಮೋನನು ತನ್ನ ಪ್ರಾರ್ಥನೆಯನ್ನು ಮುಗಿಸಿದ ಕೂಡಲೆ ಆಕಾಶದಿಂದ ಬೆಂಕಿ ಇಳಿದು ಬಂದು ದಹನಬಲಿದ್ರವ್ಯಗಳನ್ನೂ ಬಲಿಮಾಂಸವನ್ನೂ ದಹಿಸಿಬಿಟ್ಟಿತು; ಸರ್ವೇಶ್ವರನ ತೇಜಸ್ಸು ಆಲಯದಲ್ಲಿ ತುಂಬಿಕೊಂಡಿತು.


ಸರ್ವೇಶ್ವರನ ಆ ತೇಜಸ್ಸು ಆಲಯದಲ್ಲಿ ತುಂಬಿಕೊಂಡಿದ್ದರಿಂದ ಯಾಜಕರು ಒಳಗೆ ಪ್ರವೇಶಿಸಲಾರದೆ ಹೋದರು.


ಆಮೇಲೆ ದೇವರಾತ್ಮ ನನ್ನನ್ನು ಎತ್ತಿಕೊಂಡುಹೋಯಿತು. “ಮಹಿಮಾಭರಿತ ಸರ್ವೇಶ್ವರ ಸ್ವಾಮಿಗೆ ಆತನಾಲಯದಲ್ಲಿ ಸ್ತೋತ್ರ; ಸ್ತೋತ್ರ;” ಎಂಬ ಮಹಾಶಬ್ದ ನನ್ನ ಹಿಂದೆ ಭರಭರನೆ ಕೇಳಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು