Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:11 - ಕನ್ನಡ ಸತ್ಯವೇದವು C.L. Bible (BSI)

11 ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು I ಶತ್ರುರಹಿತ ಹಾದಿಯಲಿ ನಡೆಸು ಎನ್ನನು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡೆಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನೇ, ನಿನ್ನ ಮಾರ್ಗವನ್ನು ನನಗೆ ಬೋಧಿಸು; ಹೊಂಚುಹಾಕಿರುವವರಿಗೆ ಸಿಕ್ಕದ ಹಾಗೆ ನನ್ನನ್ನು ಸಮವಾದ ದಾರಿಯಲ್ಲಿ ನಡಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಯೆಹೋವನೇ, ನನಗೆ ವೈರಿಗಳಿರುವುದರಿಂದ ನಿನ್ನ ಮಾರ್ಗವನ್ನು ನನಗೆ ಉಪದೇಶಿಸಿ ನಿನ್ನ ಚಿತ್ತಾನುಸಾರವಾಗಿ ನನ್ನನ್ನು ನಡೆಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರೇ, ನಿಮ್ಮ ಮಾರ್ಗವನ್ನು ನನಗೆ ಬೋಧಿಸಿರಿ; ನನ್ನ ವಿರೋಧಿಗಳ ನಿಮಿತ್ತ ಸಮಹಾದಿಯಲ್ಲಿ ನನ್ನನ್ನು ನಡೆಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:11
22 ತಿಳಿವುಗಳ ಹೋಲಿಕೆ  

ಶತ್ರುಗಳು ಮುತ್ತಿಹರು, ಸತ್ಯ ಪಥದಲಿ ನಡೆಸೆನ್ನನು I ನೇರಮಾಡೆನಗೆ ದೇವಾ, ನಿನ್ನ ಸಿರಿಮಾರ್ಗವನು II


ನಿನ್ನ ಸತ್ಯಪಥದಲಿ ನಾ ನಡೆವಂತೆ I ಬೋಧಿಸೆನಗೆ ಪ್ರಭು, ನಿನ್ನ ಮಾರ್ಗವನು II ನಿನ್ನ ನಾಮದಲಿ ಭಯಭಕ್ತಿಯಿರುವಂತೆ I ಅನುಗ್ರಹಿಸೆನಗೆ ನೀ ಏಕಾಗ್ರತೆಯನು II


ಸಮತಳದಲಿ ನಿಂತಿವೆ ನನ್ನ ಪಾದಗಳು I ಸ್ತುತಿಸುವೆ ನಾ ಪ್ರಭುವನು ಭಕ್ತರ ಸಭೆಯೊಳು II


ತುಂಬುಹೃದಯದಿಂದ ಹಂಬಲಿಸುತ್ತಿರುವೆನಯ್ಯಾ I ನಿನ್ನಾಜ್ಞೆಯಿಂದ ನಾ ತಪ್ಪದಂತೆ ಕಾಯಯ್ಯಾ II


ಅವರು ಹೂಡಿರುವುದು ಕುತಂತ್ರವನು I ಕೊಚ್ಚಿಕೊಳ್ವುದು ಚತುರೋಪಾಯವನು I ಅಶೋಧ್ಯ ಮಾನವನ ಹೃನ್ಮನಗಳು! II


ಅಲ್ಲಿರುವುದೊಂದು ರಾಜಮಾರ್ಗ ಅದೆನಿಸಿಕೊಳ್ಳುವುದು ಪವಿತ್ರಮಾರ್ಗ ನಡೆಯನು ಅದರೊಳು ಪಾಪಾತ್ಮನು; ಅದಾಗುವುದು ಜನರಿಗೆ ಮೀಸಲು ದಾರಿತಪ್ಪನು ಅಲ್ಲಿ ನಡೆಯುವ ಮೂಢನು.


ಸುತ್ತಮುತ್ತಲು ದಿಗಿಲೆಂದರೆ ದಿಗಿಲು ! ‘ಬನ್ನಿ, ಇವನ ಮೇಲೆ ಚಾಡಿ ಹೇಳಿ, ನಾವೂ ಹೇಳುವೆವು’ ಎಂದು ಗುಸುಗುಟ್ಟುತ್ತಿರುವರು ಬಹುಜನರು. ‘ಇವನು ಎಡವಿಬೀಳಲಿ, ನಾವು ಹೊಂಚಿನೋಡುವೆವು’ ಎನ್ನುತ್ತಿರುವರು ನನ್ನಾಪ್ತ ಮಿತ್ರರೆಲ್ಲರು. ‘ಇವನು ಸಿಕ್ಕಿಬೀಳಲಿ, ಆಗ ಗೆದ್ದು ಮುಯ್ಯಿತೀರಿಸಿಕೊಳ್ಳುವೆವು.’ ಎಂದುಕೊಳ್ಳುತ್ತಿರುವರು ತಮ್ಮತಮ್ಮೊಳಗೆ.


ದೀನರನು ನಡೆಸುವನು ತನ್ನ ವಿಧಿಗನುಸಾರ I ದಲಿತರಿಗೆ ಕಲಿಸುವನು ತನ್ನ ಧರ್ಮಾಚಾರ II


ಆದುದರಿಂದ ಸೂಕ್ತ ಸಂದರ್ಭ ಹುಡುಕತೊಡಗಿದರು. ಯೇಸುವನ್ನು ರಾಜ್ಯಪಾಲನ ವಶಕ್ಕೂ ನ್ಯಾಯಾಧಿಕಾರಕ್ಕೂ ಒಪ್ಪಿಸುವ ಉದ್ದೇಶದಿಂದ ಗೂಢಚಾರರನ್ನು ಕಳುಹಿಸಿದರು. ಇವರು ನಿಷ್ಕಪಟಿಗಳಂತೆ ನಟಿಸುತ್ತಾ ಯೇಸುವಿನ ಮಾತಿನಲ್ಲಿ ತಪ್ಪು ಕಂಡುಹಿಡಿಯಲು ಪ್ರಯತ್ನಿಸಿದರು.


ತಿಳುವಳಿಕೆ ಉಳ್ಳವನಿಗೆ ಅವೆಲ್ಲ ಸರಳ ಗ್ರಹಿಕೆ ಉಳ್ಳವನಿಗೆ ಅವು ಯಥಾರ್ಥ.


ಪ್ರಭುವಿನ ಭಯಭಕುತಿಯುಳ್ಳವನಿಗೆ I ಲಭಿಪುದು ಖಚಿತ ಋಜುಮಾರ್ಗದ ಕಲಿಕೆ II


ಸೋಮಾರಿಯ ದಾರಿ ಮುಳ್ಳಿನ ಬೇಲಿ; ಸಜ್ಜನರ ಮಾರ್ಗ ರಾಜಬೀದಿ.


ತಿರುಗುಬಾಣವಾಗಲಿ ಶತ್ರುಗಳೆನಗೆ ಬಯಸುವ ಕೇಡು I ಸತ್ಯಸ್ವರೂಪಿಯಾದ ನೀನು ಅವರನು ನಾಶಮಾಡು II


ಅವರ ಬಾಯಲಿ ಹುಸಿನುಡಿ, ಹೃದಯವಾದರೊ ವಿನಾಶದ ಶರಧಿ I ಅವರ ಜಿಹ್ವೆಯಲಿ ಮುಖಸ್ತುತಿ, ಕಂಠವಾದರೋ ತೆರೆದ ಸಮಾಧಿ II


ಕೇಡಿದೆಯೇ ನೋಡು ನನ್ನ ಮಾರ್ಗದಲಿ I ನಡೆಸೆನ್ನನು ಆ ಸನಾತನ ಪಥದಲಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು