Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:13 - ಕನ್ನಡ ಸತ್ಯವೇದವು C.L. Bible (BSI)

13 ಪ್ರಭುವಿನೊಳಿತನು ನಾ ಕಾಣುವೆ ಜೀವಲೋಕದೊಳು I ನಾನಿಟ್ಟಿರುವೆ ನಂಬಿಕೆ ನಿರೀಕ್ಷೆ ಅದರೊಳು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನು ಎಂದು ದೃಢವಾಗಿ ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಜೀವಲೋಕದಲ್ಲಿಯೇ ಯೆಹೋವನ ದಯೆಯನ್ನು ಅನುಭವಿಸುವೆನೆಂದು ದೃಢವಾಗಿ ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೆಹೋವನ ಒಳ್ಳೆಯತನವನ್ನು ನಾನು ಸಾಯುವುದಕ್ಕಿಂತ ಮುಂಚೆ ನೋಡುತ್ತೇನೆ ಎಂಬ ದೃಢನಂಬಿಕೆ ನನ್ನಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಇದೊಂದು ನನ್ನ ಭರವಸೆಯಾಗಿರುವುದು: ನಾನಂತೂ ಯೆಹೋವ ದೇವರ ಒಳಿತನ್ನು ಜೀವಿತರ ದೇಶದಲ್ಲಿ ಕಾಣುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:13
18 ತಿಳಿವುಗಳ ಹೋಲಿಕೆ  

ಪ್ರಭುವೇ, ನನಗಾಶ್ರಯ ನೀನೇ I ನನ್ನ ಬಾಳಿನ ಸೊತ್ತು ನೀನೇ I ಕೂಗಿ ನಿನಗೆ ಮೊರೆಯಿಡುತ್ತೇನೆ II


ಹೀಗಿರಲು, ನಾವು ಎದೆಗುಂದುವುದಿಲ್ಲ. ನಮ್ಮ ಭೌತಿಕ ದೇಹವು ನಶಿಸುತ್ತಿದ್ದರೂ ನಮ್ಮ ಅಂತರಂಗವು ದಿನೇದಿನೇ ನೂತನವಾಗುತ್ತದೆ.


ಹೆದರಿಕೆ ಉಂಟಾದಾಗ I ನೀನೆ ನನಗೆ ಆಶ್ರಯ II


ನಿನಗಂಜಿ ನಡೆವರಿಗೆ ನೀ ಕಟ್ಟಿಟ್ಟಿರುವ ಬುತ್ತಿ ಅದೆಷ್ಟು ಅಗಾಧ I ನಿನ್ನ ನಂಬಿದವರಿಗೆ ಬಟ್ಟ ಬಯಲಾಗಿ ನೀಡುವ ನೆರವದೆಷ್ಟು ಅಪಾರ II


ಎನ್ನ ಮನವೆ, ಚಿಂತಿಸುವೆಯೇಕೆ? I ವ್ಯಥೆಪಡುವುದೇಕೆ? ದೇವನಲ್ಲಿಡು ನಂಬಿಕೆ I ಮತ್ತೆ ಸ್ತುತಿಸುವೆ ನಾನಾತನನು, ಮುಕ್ತಿದಾತ, ಪರಮಾತ್ಮ ಆತನೆನಗೆ II


ದೇವರ ಕರುಣೆಯಿಂದ ಈ ಸೇವೆಯನ್ನು ಕೈಗೊಂಡಿರುವ ನಾವು ಧೈರ್ಯಗೆಟ್ಟು ಹಿಂಜರಿಯುವುದಿಲ್ಲ.


ಸುಜ್ಞಾನದ ಕ್ರಯ ಯಾರಿಗೂ ಗೊತ್ತಿಲ್ಲ ಜೀವಿತರಲ್ಲಿ ಅದನ್ನು ಕಂಡವರಿಲ್ಲ.


ದೈವಾನುಗ್ರಹದಿಂದಲೇ ನೀವು ವಿಶ್ವಾಸದ ಮೂಲಕ ಜೀವೋದ್ಧಾರ ಹೊಂದಿದ್ದೀರಿ. ಇದು ನಿಮ್ಮ ಪ್ರಯತ್ನದ ಫಲವಲ್ಲ; ದೇವರಿತ್ತ ವರಪ್ರಸಾದ.


ನಾನಾದರೋ ವಧೆಗೆ ಒಯ್ಯುವ ಸಾಧು ಕುರಿಯಂತೆ ಇದ್ದೆ. “ಮರವನ್ನು ಫಲಸಹಿತ ನಾಶಪಡಿಸೋಣ, ಜೀವಲೋಕದಿಂದ ಇವನನ್ನು ನಿರ್ಮೂಲಮಾಡೋಣ. ಅವನ ಹೆಸರೇ ಇಲ್ಲದಂತಾಗಲಿ,” ಎಂದು ಅವರು ಕುಯುಕ್ತಿ ಕಲ್ಪಿಸಿದ್ದರು. ಆದರೆ ನನಗೆ ಅದು ತಿಳಿದಿರಲಿಲ್ಲ.


ಆಗ ಪುರಾತನ ಕಾಲದಲ್ಲಿ ಹಾಳಾದ ಪಟ್ಟಣಗಳಂತೆ, ನಿನ್ನನ್ನು ಅಧೋಲೋಕಕ್ಕೆ ತಳ್ಳಿ, ಪಾತಾಳಕ್ಕೆ ಇಳಿದ ಪೂರ್ವಕಾಲದವರೊಂದಿಗೆ ವಾಸಿಸಮಾಡುವೆನು; ಹೌದು, ನೀನು ನಿನ್ನ ಮಹಿಮೆಯನ್ನು ಜೀವಲೋಕದಲ್ಲಿ ನೆಲೆಗೊಳಿಸದೆ, ನಿರ್ನಿವಾಸಿಯಾಗುವಂತೆ, ನಿನ್ನನ್ನು ಪಾತಾಳಕ್ಕೆ ಇಳಿದವರ ಸಹವಾಸದಲ್ಲೇ ಸೇರಿಸುವೆನು.


ಜೀವಂತನು, ಜೀವಂತನು ಮಾತ್ರವೇ ನಿನ್ನ ಸ್ತುತಿಮಾಡುವಂತೆ ನಾನಿಂದು ನಿನ್ನನ್ನು ಜೀವಂತನಾಗಿ ಸ್ತುತಿಮಾಡುತ್ತಿರುವೆ ನಿನ್ನ ಸತ್ಯಸಂಧತೆಯನ್ನು ಮಕ್ಕಳಿಗೆ ಬೋಧಿಸುವನು ತಂದೆ.


ಅವನ ಆತ್ಮವನು ಅಧೋಲೋಕದಿಂದ ಹಿಂದಿರುಗಿಸುವನು ಜೀವಲೋಕದ ಬೆಳಕನು ಅನುಭವಿಸುವಂತೆ ಮಾಡುವನು.


ಜೀವಲೋಕದಲ್ಲಿ ಇನ್ನು ದೇವನನ್ನು ಕಾಣೆನೆಂದುಕೊಂಡೆ ಭೂಲೋಕನಿವಾಸಿಗಳಲ್ಲಿ ಒಬ್ಬನನ್ನೂ ನೋಡಲಾರೆನೆಂದುಕೊಂಡೆ.


ನಸುಕುವನು ದೇವರು ನಿನ್ನನು ನಿರುತ I ದೂರಮಾಡುವನು ನಿನ್ನಾ ಗುಡಾರದಿಂದ I ಕಿತ್ತೆಸೆದುಬಿಡುವನು ಜೀವದ ನಾಡಿಂದ II


ಕುಗ್ಗಿ ಹೋಗಿರುವೆ, ನನ್ನ ಕೂಗಿಗೆ ಪ್ರಭು ಕಿವಿಗೊಡು I ಬಲಿಷ್ಠ ಹಿಂಸಾತ್ಮಕರಿಂದ ನನ್ನನು ಪಾರುಮಾಡು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು