Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:2 - ಕನ್ನಡ ಸತ್ಯವೇದವು C.L. Bible (BSI)

2 ಕೇಡು ಮಾಡಬಂದರೆನಗೆ ಕೊಲೆಗಡುಕರು I ಎಡವಿಬಿದ್ದರು, ತಾವೇ ಅಳಿದುಹೋದರು II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು, ತಾವೇ ನೆಲಕ್ಕೆ ಬಿದ್ದುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ನನ್ನನ್ನು ಬಾಧಿಸುತ್ತಿರುವ ದುರ್ವೈರಿಗಳು ನನ್ನನ್ನು ನುಂಗಿಬಿಡಬೇಕೆಂದು ಬಂದು ತಾವೇ ನೆಲಕ್ಕೆ ಬಿದ್ದುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ದುಷ್ಟರು ನನ್ನನ್ನು ಕೊಲ್ಲಲು ಆಕ್ರಮಣಮಾಡುವಾಗ ತಾವೇ ಮುಗ್ಗರಿಸಿ ಬೀಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದುಷ್ಟರು ನನ್ನನ್ನು ಬೀಳಿಸಬೇಕೆಂದು ನನಗೆ ವಿರೋಧವಾಗಿ ಸಮೀಪಿಸುವಾಗ, ನನ್ನ ವೈರಿಗಳು ತಾವೇ ಎಡವಿಬಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:2
13 ತಿಳಿವುಗಳ ಹೋಲಿಕೆ  

ಅನೇಕರು ಎಡವಿಬೀಳುವರು, ಮುಗ್ಗರಿಸಿ ಮೂಳೆ ಮುರಿದುಕೊಳ್ಳುವರು, ಬೋನಿಗೆ ಸಿಕ್ಕಿಕೊಳ್ಳುವರು, ಬಲೆಗೆ ಬೀಳುವರು.”


ಕವಿದಿದ್ದರು ಎನ್ನನು ಜೇನುನೊಣಗಳಂತೆ I ಪ್ರಭುವಿನ ನಾಮಬಲದಲಿ ಅವರನು ಸಂಹರಿಸಿದೆ I ಮುಳ್ಳುಗಿಡವನು ಬೆಂಕಿ ಸುಟ್ಟುಹಾಕುವಂತೆ II


ದುರ್ಜನರೆನ್ನ ಜನರನು ಅನ್ನದಂತೆ ನುಂಗುವುದೇಕೆ? I ಪ್ರಭುವನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? I


ನಿನ್ನ ಕಂಡು ನನ್ನ ವೈರಿಗಳು ಗೈದರು ಪಲಾಯನ I ಎದ್ದು ಬಿದ್ದು ಅವರೆಲ್ಲರೂ ಹೊಂದಿದರು ವಿನಾಶನ II


ಎದ್ದೇಳು ದೇವ, ಕಾಪಾಡ ಬಾ ಪ್ರಭುವೆ I ವೈರಿಗಳ ದವಡೆ ಬಡಿದವನು ನೀನಲ್ಲವೇ I ದುರುಳರ ಹಲ್ಲುದುರಿಸಿದವನು ನೀನಲ್ಲವೆ? II


ದೇವರಂತೆ ನೀವೂ ನನ್ನನು ದಂಡಿಸುವುದೇಕೆ? ನನ್ನನ್ನು ಛಿನ್ನಪನ್ನವಾಗಿಸಿದ್ದೀರಿ, ಇದು ಸಾಲದೆ ನಿಮಗೆ?


ಮುತ್ತಿದೆ ದುರುಳರ ಹಿಂಡು; ಸುತ್ತಿವೆ ಕುನ್ನಿಗಳು I ಕುತ್ತಿವೆ ನನ್ನ ಕೈಗಳು ಮೇಣ್ ಕಾಲುಗಳು II


ನನಗೆ ಸುತ್ತಿಕೊಂಡವು ಮೃತ್ಯುಪಾಶಗಳು I ನಡುಕ ಹುಟ್ಟಿಸಿದ್ದವು ವಿನಾಶಪ್ರವಾಹಗಳು II


‘ಆತ ಬಡಿಸಿದ ಭೋಜನದಿಂದ ತೃಪ್ತರಾಗದವರು ಎಲ್ಲಾದರೂ ಉಂಟೆ?’ ಎಂದು ನನ್ನ ಗುಡಾರದ ಆಳುಗಳೇ ಹೇಳಿಕೊಳ್ಳುತ್ತಿದ್ದರಲ್ಲವೆ?


ದುರ್ಜನರು ನನ್ನ ಜನರನು ಕೂಳಿನಂತೆ ನುಂಗುವುದೇಕೆ? I ದೇವರನು ನೆನೆಯದಾ ದುಷ್ಕರ್ಮಿಗಳಿಗೆ ಅರಿವಿಲ್ಲವೇಕೆ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು