Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಕೀರ್ತನೆಗಳು 27:4 - ಕನ್ನಡ ಸತ್ಯವೇದವು C.L. Bible (BSI)

4 ನಾನೊಂದನು ಕೋರಿದೆ ಪ್ರಭುವಿನಿಂದ I ನಾನದನ್ನೇ ನಿರೀಕ್ಷಿಸಿದೆ ಆತನಿಂದ : I ವಾಸಿಸಬೇಕು ಜೀವಮಾನವೆಲ್ಲ ನಾನಾತನ ಮಂದಿರದಲಿ I ನಾ ತಲ್ಲೀನನಾಗಬೇಕು ಅಲ್ಲಾತನ ಪ್ರಸನ್ನತೆಯಲಿ II

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ, ಆತನ ಪ್ರಸನ್ನತೆಯನ್ನು ನೋಡುವುದಕ್ಕೂ, ಆತನ ಮಂದಿರದಲ್ಲಿ ಧ್ಯಾನ ಮಾಡುವುದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರು ನೋಡುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಜೀವಮಾನದಲ್ಲೆಲ್ಲಾ ಯೆಹೋವನ ಮನೆಯಲ್ಲಿ ವಾಸಮಾಡುತ್ತಾ ಆತನ ಪ್ರಸನ್ನತೆಯನ್ನು ನೋಡುವದಕ್ಕೂ ಆತನ ಮಂದಿರದಲ್ಲಿ ಧ್ಯಾನಮಾಡುವದಕ್ಕೂ ನನಗೆ ಅಪ್ಪಣೆಯಾಗಬೇಕೆಂಬ ಒಂದೇ ವರವನ್ನು ಯೆಹೋವನಿಂದ ಕೇಳಿಕೊಂಡು ಅದನ್ನೇ ಎದುರುನೋಡುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನನ್ನ ಜೀವಮಾನವೆಲ್ಲಾ ಯೆಹೋವನ ಆಲಯದಲ್ಲಿ ವಾಸಿಸುತ್ತಾ ಆತನ ಪ್ರಸನ್ನತೆಯನ್ನು ವೀಕ್ಷಿಸುತ್ತಾ ಆತನ ಮಾರ್ಗದರ್ಶನವನ್ನು ಎದುರುನೋಡುತ್ತಾ ಇರಬೇಕೆಂಬ ಒಂದೇ ಒಂದು ಕೋರಿಕೆಯನ್ನು ಯೆಹೋವನಲ್ಲಿ ಕೇಳಿಕೊಂಡು ಅದನ್ನೇ ಎದುರುನೋಡುತ್ತಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರ ಮನೆಯಲ್ಲಿ ನಾನು ಜೀವಮಾನವೆಲ್ಲಾ ವಾಸಮಾಡುತ್ತಾ, ಅದರ ದಯೆಯನ್ನು ನೋಡುತ್ತಾ ಅವರ ಮಂದಿರದಲ್ಲಿ ಅವರನ್ನೇ ಧ್ಯಾನಿಸುತ್ತಾ ಇರಬೇಕೆಂಬ ಒಂದೇ ವರವನ್ನು ಯೆಹೋವ ದೇವರಿಂದ ಕೇಳಿಕೊಂಡು ಅದನ್ನೇ ಹುಡುಕುತ್ತಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಕೀರ್ತನೆಗಳು 27:4
30 ತಿಳಿವುಗಳ ಹೋಲಿಕೆ  

ಪ್ರಿಯವಾದುದೆನಗೆ ನಿನ್ನ ನಿವಾಸದ ಮಂದಿರ I ಸುಪ್ರೀತವಾದುದು ನಿನ್ನ ಮಹಿಮೆಯ ಆಗರ II


ಶುಭಶಾಂತಿಯಿಂದ ನಾ ಬಾಳುವೆ ಜೀವಮಾನವೆಲ್ಲ I ದೇವಮಂದಿರದಲಿ ನಾ ವಾಸಿಸುವೆ ಚಿರಕಾಲವೆಲ್ಲ II


ನಿನ್ನ ಆಸ್ಥಾನದಲಿ ನೆಲೆಸಲು ನೀನಾಯ್ದು ತಂದ ದೈವಭಕ್ತ ಧನ್ಯ I ನಮಗೆ ತರಲಿ ತೃಪ್ತಿ ನೀ ವಾಸಿಸುವ ಪವಿತ್ರಾಲಯದ ಸೌಭಾಗ್ಯ II


ನಿನ್ನ ಮಂದಿರದಲಿ ವಾಸಿಸುವವರು ಧನ್ಯರು I ನಿರಂತರವು ನಿನ್ನ ಗುಣಗಾನ ಮಾಡುವರವರು II


ದುರುಳರ ಬಿಡಾರದಲಿ ನಾ ವಾಸಮಾಡುವುದರ ಬದಲು I ನಿನ್ನಾಲಯದ ದ್ವಾರಪಾಲಕನಾಗಿರುವುದೆ ಮೇಲು II


ಆದರೆ ಅಗತ್ಯವಾದುದು ಒಂದೇ. ಮರಿಯಳು ಉತ್ತಮವಾದುದನ್ನೇ ಆರಿಸಿಕೊಂಡಿದ್ದಾಳೆ. ಅದನ್ನು ಆಕೆಯಿಂದ ಕಸಿದುಕೊಳ್ಳಲಾಗದು,” ಎಂದರು.


“ಅರಸೆನ್ನ ಮುಖದರುಶನವನು", ಎಂದೆ ನೀನು I “ಅರಸುವೆನು ಅದನೆ", ಎಂದು ಮರುನುಡಿದೆ ನಾನು II


ನೀವಾದರೋ ಮೊದಲು ದೇವರ ಸಾಮ್ರಾಜ್ಯಕ್ಕಾಗಿ, ಅವರ ಸತ್ಸಂಬಂಧಕ್ಕಾಗಿ ತವಕಪಡಿ. ಇದರೊಂದಿಗೆ ಅವೆಲ್ಲವೂ ನಿಮಗೆ ನೀಡಲಾಗುವುದು.


ನೀವು ನನ್ನನ್ನು ಹುಡುಕುವಿರಿ. ಮನಪೂರ್ವಕವಾಗಿ ಹುಡುಕಿದಾಗ ನನ್ನನ್ನು ಕಂಡುಕೊಳ್ಳುವಿರಿ.


ಸಹೋದರರೇ, ಆ ಗುರಿಯನ್ನು ತಲುಪಿದ್ದೇನೆಂದು ನಾನೆಂದೂ ಹೇಳಿಕೊಂಡಿಲ್ಲ. ಆದರೆ ಇದು ನಿಜ. ಹಿಂದಿನ ಸಂಗತಿಗಳನ್ನು ಮರೆತುಬಿಟ್ಟು, ಮುಂದಿನವುಗಳ ಮೇಲೆ ಕಣ್ಣಿಟ್ಟು ನಾನು ಓಡುತ್ತಿದ್ದೇನೆ.


ವಿಶ್ವಾಸವಿಲ್ಲದೆ ದೇವರ ಮೆಚ್ಚುಗೆಗೆ ಪಾತ್ರರಾಗಲು ಯಾರಿಂದಲೂ ಸಾಧ್ಯವಿಲ್ಲ. ದೇವರ ಬಳಿಗೆ ಸಾಗುವವರು, ಅವರ ಅಸ್ತಿತ್ವವನ್ನು ವಿಶ್ವಾಸಿಸಬೇಕು; ಅವರನ್ನು ಅರಸುವವರಿಗೆ ತಕ್ಕ ಪ್ರತಿಫಲ ಸಿಗುವದೆಂದು ನಂಬಬೇಕು.


ಸ್ವಾಮಿದೇವರ ಆಶೀರ್ವಾದ ನಮ್ಮ ಮೇಲಿರಲಿ I ನಾವು ಕೈಗೊಳ್ಳುವ ಕಾರ್ಯಗಳು ಸಫಲವಾಗಲಿ I ಅಹುದು, ನಮ್ಮ ಕಾರ್ಯಗಳೆಲ್ಲಾ ಸಫಲವಾಗಲಿ II


ಮುಸುಕು ತೆರೆದ ಮುಖವುಳ್ಳ ನಾವೆಲ್ಲರೂ ಪ್ರಭುವಿನ ಮಹಿಮೆಯನ್ನು ಪ್ರತಿಬಿಂಬಿಸುವ ಕನ್ನಡಿಯಂತೆ ಇದ್ದೇವೆ. ಆ ಪ್ರಭುವಿನಿಂದ ಹೊರಹೊಮ್ಮುವ ಮಹಿಮೆ ನಮ್ಮನ್ನು ಅಧಿಕಾಧಿಕವಾಗಿ ಮಾರ್ಪಡಿಸಿ ಅವರನ್ನೇ ಹೋಲುವಂತೆ ಮಾಡುತ್ತದೆ. ಇದೆಲ್ಲಾ ದೇವರಾತ್ಮವಾಗಿರುವ ಪ್ರಭುವಿನ ಕಾರ್ಯವೇ ಸರಿ.


ಅವಳಿಗೆ ಸುಮಾರು ಎಂಬತ್ತನಾಲ್ಕು ವರ್ಷ ವಯಸ್ಸು. ಮಹಾದೇವಾಲಯವನ್ನು ಬಿಟ್ಟು ಅವಳು ಎಲ್ಲಿಗೂ ಹೋಗುತ್ತಿರಲಿಲ್ಲ; ಹಗಲಿರುಳು ಉಪವಾಸ ಪ್ರಾರ್ಥನೆಗಳಿಂದ ದೇವಾರಾಧನೆಯಲ್ಲಿ ನಿರತಳಾಗಿದ್ದಳು.


ಉಪವಾಸವಿದ್ದು, ಗೋಣಿತಟ್ಟು ಸುತ್ತಿಕೊಂಡು, ಬೂದಿ ಬಳಿದುಕೊಂಡು, ಸರ್ವೇಶ್ವರನಾದ ದೇವರ ಕಡೆಗೆ ಮುಖವೆತ್ತಿ, ಪ್ರಾರ್ಥನೆ-ವಿಜ್ಞಾಪನೆಗಳಲ್ಲಿ ನಿತರನಾದೆ.


ಸುರಸುಂದರವಾದ ಸಿಯೋನಿನಿಂದ I ಉದಯಸಿಹನು ದೇವನು ಶೋಭೆಯಿಂದ II


ನಿರಾಶರಾಗದೆ ನಿರಂತರವಾಗಿ ಪ್ರಾರ್ಥನೆ ಮಾಡಬೇಕು ಎಂಬುದನ್ನು ಕಲಿಸಲು, ಯೇಸುಸ್ವಾಮಿ ತಮ್ಮ ಶಿಷ್ಯರಿಗೆ ಈ ಸಾಮತಿಯನ್ನು ಹೇಳಿದರು:


“ಕತ್ತಲೆಯಿಂದ ಬೆಳಕು ಹೊಳೆಯಲಿ,” ಎಂದ ದೇವರೇ, ತಮ್ಮ ಜ್ಯೋತಿಯಿಂದ ನಮ್ಮ ಅಂತರಂಗವನ್ನು ಬೆಳಗಿಸಿದ್ದಾರೆ. ಇದರ ಪರಿಣಾಮವಾಗಿ ಕ್ರಿಸ್ತಯೇಸುವಿನ ಮುಖಮಂಡಲದಲ್ಲಿ ಪ್ರಜ್ವಲಿಸುತ್ತಿರುವ ದೇವರ ಮಹಿಮೆಯ ದಿವ್ಯಜ್ಞಾನವು ನಮ್ಮಲ್ಲಿ ಉದಯಿಸುವಂತಾಗಿದೆ.


ಆಗ ಯೇಸು ಜನರಿಗೆ, “ಇಕ್ಕಟ್ಟಾದ ಬಾಗಿಲಿನಿಂದಲೇ ಒಳಹೋಗಲು ಸರ್ವಪ್ರಯತ್ನ ಮಾಡಿ. ಏಕೆಂದರೆ, ಅನೇಕರು ಒಳಕ್ಕೆ ಹೋಗಲು ಖಂಡಿತವಾಗಿ ಪ್ರಯತ್ನಿಸುವರು; ಆದರೆ ಅದು ಅವರಿಂದಾಗದು.


ದಿಕ್ಕಿಲ್ಲದೆ ಒಬ್ಬಂಟಿಗಳಾಗಿರುವ ವಿಧವೆ ದೇವರ ಮೇಲೆ ಭರವಸೆಯಿಟ್ಟು ಹಗಲಿರುಳು ಪ್ರಾರ್ಥನೆಗಳಲ್ಲೂ ವಿಜ್ಞಾಪನೆಗಳಲ್ಲೂ ನಿರತಳಾಗಿರುತ್ತಾಳೆ.


ಸಂತೋಷಿಸಿರಿ, ಆನಂದಿಸಿರಿ, ಸಿಯೋನಿನ ನಿವಾಸಿಗಳೇ, ಹರ್ಷೋದ್ಗಾರ ಮಾಡಿರಿ, ಜೆರುಸಲೇಮಿನ ಜನಗಳೇ, ಇಗೋ, ಬರುತಿಹನು ನಿಮ್ಮ ಅರಸನು ನ್ಯಾಯವಂತನು, ಜಯಶೀಲನು ಆತನು ವಿನಮ್ರನು, ಹೇಸರಗತ್ತೆಯನ್ನೇರಿ ಸಾಗಿಬರುತಿಹನು.


ನಿರ್ದೋಷಿ ನಾನೆಂದು ನೀರಿನಲ್ಲಿ ಕೈತೊಳೆವೆನಯ್ಯಾ I ಪ್ರಭು, ನಿನ್ನ ಬಲಿಪೀಠದ ಪ್ರದಕ್ಷಿಣೆ ಮಾಡುವೆನಯ್ಯಾ II


ದಾವೀದನ ಕಾಲದಲ್ಲಿ ಮೂರು ವರ್ಷಗಳವರೆಗೂ ಬಿಡದೆ ಬರವಿತ್ತು. ದಾವೀದನು ಸರ್ವೇಶ್ವರಸ್ವಾಮಿಯನ್ನು ವಿಚಾರಿಸಿದಾಗ, “ಸೌಲನು ಗಿಬ್ಯೋನ್ಯರನ್ನು ಕೊಲ್ಲಿಸಿದ್ದರಿಂದ ಅವನ ಮೇಲೂ ಅವನ ಮನೆಯವರ ಮೇಲೂ ರಕ್ತಾಪರಾಧ ಇರುತ್ತದೆ,” ಎಂಬ ಉತ್ತರ ದೊರಕಿತು.


“ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”


ಆಗ ದಾವೀದನು ಸರ್ವೇಶ್ವರನನ್ನು, “ನಾನು ಆ ದಾಳಿಕಾರರನ್ನು ಬೆನ್ನಟ್ಟಬಹುದೇ? ಅವರು ನನಗೆ ವಶವಾಗುವರೇ?” ಎಂದು ಕೇಳಿದನು. “ಬೆನ್ನಟ್ಟು, ಅವರು ನಿನ್ನ ವಶವಾಗುವರು, ನೀನು ನಿನ್ನವರೆಲ್ಲರನ್ನೂ ಬಿಡಿಸಿಕೊಂಡು ಬರುವೆ,” ಎಂದು ಉತ್ತರಕೊಟ್ಟನು ಸರ್ವೇಶ್ವರ.


ಆ ಯಾಜಕ ಇವನಿಗೆ ಸರ್ವೇಶ್ವರನ ಚಿತ್ತವನ್ನು ತಿಳಿಸಿ, ಆಹಾರವನ್ನೂ ಫಿಲಿಷ್ಟಿಯನಾದ ಗೊಲ್ಯಾತನ ಕತ್ತಿಯನ್ನೂ ಕೊಟ್ಟನು,” ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು